ಮಾಕಾಪೂರ ಆರೋಗ್ಯ ಕೇಂದ್ರಕ್ಕೆ ಬೇಕಿದೆ ಮೇಜರ್‌ ಸರ್ಜರಿ

ಸಿಬ್ಬಂದಿ ಕೊರತೆ ; ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೀಚಿಕೆ; ಆಸ್ಪತ್ರೆಯಲ್ಲಿ ಬೀರುತ್ತೆ ದುರ್ವಾಸನೆ

Team Udayavani, Jun 6, 2022, 5:56 PM IST

24

ಮುದಗಲ್ಲ: ಪಟ್ಟಣ ಸಮೀಪದ ಮಾಕಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೇಜರ್‌ ಸರ್ಜರಿ ಅವಶ್ಯವಿದೆ. 30 ವರ್ಷಗಳ ಹಿಂದೆ ಪಿಎಚ್‌ಯುದಿಂದ ಪ್ರಾಥಮಿಕ ಆರೋಗ್ಯ ಕೇಂದ್ರವೆಂದು ಪರಿಗಣಿಸ ಲಾದ ಮಾಕಾಪೂರ ಆರೋಗ್ಯ ಕೇಂದ್ರಕ್ಕೆ ಇತ್ತೀಚಿಗಷ್ಟೆ ನೂತನ ಕಟ್ಟಡ ನಿರ್ಮಿಸಲಾಗಿದೆ. 4 ಸಬ್‌ ಸೆಂಟರ್‌ಗಳನ್ನು ಹೊಂದಿರುವ ಮಾಕಾಪೂರ ಆರೋಗ್ಯ ಕೇಂದ್ರ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗಿಂತಲೂ ಹಿರಿದು. ಆದರೆ ಸಿಬ್ಬಂದಿ ಕೊರತೆ ಇರುವುದರಿಂದ ಆಸ್ಪತ್ರೆಯಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ದುರ್ವಾಸನೆ ಸ್ವಾಗತಿಸುತ್ತದೆ.

ಮಾಕಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬನ್ನಿಗೋಳ, ನಾಗಲಾಪೂರ, ದೇಸಾಯಿ ಭೋಗಾಪೂರ ಹಾಗೂ ಮಾಕಾಪೂರ ಸಬ್‌ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಸಬ್‌ ಸೆಂಟರ್‌ಗಳಲ್ಲಿ ಸೇವೆ ಸಲ್ಲಿಸಲು ಸಿಬ್ಬಂದಿ ಕೊರತೆ ಎದುರಾಗಿದೆ.

ಮಾಕಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ 28ಹಳ್ಳಿ, ಹಾಗೂ 9 ತಾಂಡಾಗಳು ಕಾರ್ಯವ್ಯಾಪ್ತಿಗೆ ಬರುತ್ತಿದ್ದು, ನಾಗಲಾಪೂರ ಹಾಗೂ ದೇಸಾಯಿ ಭೋಗಾಪೂರ ಸಬ್‌ ಸೆಂಟರ್‌ಗೆ ಸೇರುವ ಜನಸಾಮಾನ್ಯರಿಗೆ ಮಾಕಾಪೂರ ಆಸ್ಪತ್ರೆ ತಲುಪಲು ಸೂಕ್ತ ವ್ಯವಸ್ಥೆ ಇಲ್ಲದೇ ಪರಿತಪಿಸುವಂತಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿ ದೊಡ್ಡದಾಗಿದ್ದು, ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ.

ಸಿಬ್ಬಂದಿ ಕೊರತೆ : 40 ಸಾವಿರ ಜನಸಂಖ್ಯೆಗೆ ಕೇವಲ 1 ಆಯುಷ್‌ ವೈದ್ಯಾಧಿಕಾರಿ ಹಾಗೂ ಒಬ್ಬ ಮುಖ್ಯ ವೈದ್ಯಾಧಿಕಾರಿಗಳನ್ನು ಸರಕಾರ ನಿಯೋಜನೆಗೊಳಿಸಿದೆ. ಆದರೆ ಮುಖ್ಯ ವೈದ್ಯಾಧಿಕಾರಿಗಳು ಮುದಗಲ್ಲ ಆಸ್ಪತ್ರೆ ಸೇರಿದಂತೆ ಐದಾರು ಆಸ್ಪತ್ರೆಗಳಿಗೆ ಉಸ್ತುವಾರಿ ವಹಿಸಿರುವುದರಿಂದ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಮುಖ್ಯ ವೈದ್ಯಾಧಿ ಕಾರಿಗಳನ್ನು ಮಾಕಾಪೂರಗೆ ಮಾತ್ರ ಮೀಸಲಿರಿಸುವಂತೆ ಈ ಭಾಗದ ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ಹಿರಿಯ ಆರೋಗ್ಯ ಸಹಾಯಕರ ಹುದ್ದೆ, ಡಿ.ದರ್ಜೆ ಸೇರಿ ವಿವೀಧ ಹುದ್ದೆಗಳು ಖಾಲಿ ಇದ್ದು, ಹಲವು ವರ್ಷ ಗತಿಸಿದರೂ ಇಲಾಖೆ ಅಧಿಕಾರಿಗಳು ಮಾತ್ರ ಮೌನ ಮುರಿಯುತ್ತಿಲ್ಲ. ಕೇಂದ್ರ ಸ್ಥಾನದಲ್ಲಿ ವೈದ್ಯರಿಲ್ಲದೇ ಇರುವುದರಿಂದ ರಾತ್ರಿ ವೇಳೆ ರೋಗಿಗಳು ಪರದಾಡುವಂತಾಗಿದೆ. ದೂರದ ಮುದಗಲ್‌, ಇಲಕಲ್‌, ಕುಷ್ಟಗಿಗಳಂತಹ ಪಟ್ಟಣ ಪ್ರದೇಶಗಳತ್ತ ಚಿಕಿತ್ಸೆಗೆ ತೆರಳುವಂತಾಗಿದೆ. „ದೇವಪ್ಪ ರಾಠೊಡ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.