ಮಳೆ ಆರ್ಭಟಕ್ಕೆ ನಲುಗಿದ ಧರಿನಾಡು

ಬೀದರನಲ್ಲಿ ತುಂಬಿ ಹರಿದ ಹಳ್ಳ-ಕೊಳ್ಳ; 24 ಗಂಟೆಯಲ್ಲಿ 30ಮಿ.ಮೀವರ್ಷಧಾರೆ ;ದೇಗುಲಕುಸಿತ

Team Udayavani, Aug 31, 2021, 5:39 PM IST

ಮಳೆ ಆರ್ಭಟಕ್ಕೆ ನಲುಗಿದ ಧರಿನಾಡು

ಬೀದರ: ಸತತ ಎರಡು ದಿನ ಆರ್ಭಟಿಸಿದ ಮಳೆಗೆ ಗಡಿ ಜಿಲ್ಲೆ ಬೀದರ ತತ್ತರಿಸಿದೆ. ರವಿವಾರ ಸಂಜೆಯಿಂದ ಸೋಮವಾರ ಮಧ್ಯಾಹ್ನದವರೆಗೆ
ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ತಾಲೂಕುಗಳು ನಲುಗಿ ಹೋಗಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಸಾವಿರಾರು ಹೇಕ್ಟರ್‌ ಪ್ರದೇಶದ ಬೆಳೆಗಳು ನೀರು ಪಾಲಾಗಿದ್ದರೆ, ವಿವಿಧ ಸೇತುವೆಗಳ ಮೇಲಿಂದ ನೀರು ಹರಿದಿವೆ. ಮನೆಗಳು ಭಾಗಶಃ ಕುಸಿದು ಜನರ ಬದುಕನ್ನು ಅತಂತ್ರಗೊಳಿಸಿದೆ.

ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8ಗಂಟೆಯಿಂದ ಹಿಂದಿನ 24 ಗಂಟೆಯ ಅವಧಿಯಲ್ಲಿ 30 ಮಿ.ಮೀ. ನಷ್ಟು (ವಾಡಿಕೆ ಮಳೆ 5.5 ಮಿ.ಮೀ) ಮಳೆ ಬಿದ್ದಿದೆ. ಚಿಟಗುಪ್ಪ ಪಟ್ಟಣದಲ್ಲಿ ಅತಿ ಹೆಚ್ಚು 52 ಮಿ.ಮೀ ಬಿದ್ದಿದ್ದರೆ ಔರಾದ ತಾಲೂಕಿನಲ್ಲಿ ಅತಿ ಕಡಿಮೆ 10 ಮಿ.ಮೀ ಮಳೆ ಆಗಿದೆ. ಇನ್ನುಳಿದಂತೆ ಹುಮನಾಬಾದ ತಾಲೂಕಿನಲ್ಲಿ 41 ಮಿ.ಮೀ, ಬೀದರ ಮತ್ತು ಭಾಲ್ಕಿ ತಾಲೂಕಿನ ತಲಾ 35 ಮಿ.ಮೀ, ಬಸವಕಲ್ಯಾಣ ತಾಲೂಕಿನಲ್ಲಿ 25 ಮಿ.ಮೀ,
ಹುಲಸೂರು ತಾಲೂಕಿನಲ್ಲಿ 16 ಮಿ.ಮೀ ಮತ್ತು ಕಮಲನಗರ ತಾಲೂಕಿನಲ್ಲಿ 14 ಮಿ.ಮೀ ಮಳೆಯಾಗಿದೆ.

ಹುಮನಾಬಾದ, ಚಿಟಗುಪ್ಪ ಮತ್ತು ಭಾಲ್ಕಿ ತಾಲೂಕಿನಲ್ಲಿ ಭಾರಿ ಮಳೆ ಸುರಿದಿದ್ದು, ಜಮೀನುಗಳಿಗೆ ನೀರು ಜಲಾವೃತಗೊಂಡು ರಾಶಿಗೆ ಬಂದಿದ್ದ ಉದ್ದು, ಹೆಸರು ಬೆಳೆ ಹಾನಿಯಾಗಿದೆ. ಸೋಯಾ ಮತ್ತು ಕಬ್ಬು ಸಹ ನೆಲಸಮ ಗೊಂಡಿದ್ದು, ರೈತರನ್ನು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಜಿಲ್ಲೆಯ ಅನೇಕ ಕೆರೆಗಳು ಅಪಾಯದ ಮಟ್ಟ ಮೀರಿ ತುಂಬಿರುವುದರಿಂದ ಸುತ್ತಲಿನ ಜಮೀನುಗಳಿಗೆ ನೀರು ಆವರಿಸಿ, ಬೆಳೆಗಳಿಗೆ ಧಕ್ಕೆ ತಂದಿದೆ. ಮಾಂಜ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿ ಪಾತ್ರದ ಜಮೀನುಗಳಲ್ಲೂ ನೀರು ಸಂಗ್ರಹವಾಗಿ ಬೆಳೆಗಳು ಸುಟ್ಟು ಹೋಗಿದ್ದು, ಗ್ರಾಮಸ್ಥರಲ್ಲಿ ಈಗ ನೆರೆ ಆತಂಕ ಶುರುವಾಗಿದೆ.

ಇದನ್ನೂ ಓದಿ:ಪಶು ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಪ್ರಭು ಚವ್ಹಾಣ್

ಮಳೆಯಿಂದ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮಕ್ಕೆ ಹೆಚ್ಚು ಪರಿಣಾಮ ಬೀರಿದ್ದು, ಸೋಮವಾರ ನಸುಕಿನ ಜಾವ ಗ್ರಾಮದ ಹನುಮಾನ ಮಂದಿರ ಗರ್ಭಗುಡಿ ಗೋಪುರ ಸಮೇತ ಕುಸಿದು ಬಿದ್ದಿದೆ. ಪಕ್ಕದಲ್ಲೇ ಹರಿಯುವ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ್ದರಿಂದ ಗ್ರಾಮಕ್ಕೆ ನೀರು ನುಗ್ಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಇಲ್ಲಿನ ಮೂರು ಕುಟುಂಬಗಳಿಗೆ ಗಂಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಎಣಕೂರ ಗ್ರಾಮದಲ್ಲಿ ಭಾರಿ ಮಳೆಯಿಂದ ನಾಲ್ಕು ಮನೆಗಳಿಗೆ ನೀರು ನುಗ್ಗಿದ್ದು,ಕುಟುಂಬಗಳಿಗೆ ಶಾಲೆಯ ಗಂಜಿ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಹುಲಸೂರು- ಭಾಲ್ಕಿ, ದಾಡಗಿ, ಗೋರಚಿಂಚೋಳಿ ಮತ್ತು ನಿಡೇಬಾನ್‌ ಸೇತುವೆಗಳ ಮೇಲಿಂದ ನೀರು ಹರಿದು ಕೆಲ ಕಾಲ ಸಂಪರ್ಕ ಕಡಿತಗೊಳ್ಳುವಂತೆ ಮಾಡಿತು. ದಾಬಕಾ ಹೋಬಳಿಯ ಮತಖೇಡ್‌ ಗ್ರಾಮದಲ್ಲಿ ರಾತ್ರಿ ಸಿಡಿಲು ಬಡಿದು ಬಬ್ರುವಾನ್‌ ಅವರಿಗೆ ಸೇರಿದ ಎಮ್ಮೆ ಮೃತಪಟ್ಟಿದೆ. ಮಳೆ ನೀರಿನ ರಭಸಕ್ಕೆ ಹುಲಸೂರು-ಔರಾದ ಮಾರ್ಗದ ಜಮಖಂಡಿ ಬಳಿ ರಸ್ತೆ ಕಿತ್ತು ಹೋಗಿ ಅಪಾಯ ಸೃಷ್ಟಿಸಿದೆ. ಬಸವಕಲ್ಯಾಣ ಗೋರ್ಟಾ ಗ್ರಾಮದ ಎಸ್‌ಸಿ ಬಡಾವಣೆಯಲ್ಲಿ ನೀರು ನುಗ್ಗಿದ್ದು, ನಮ್ಮನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಅಂಬೇಡ್ಕರ್‌ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.

ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ
ಕಾರಂಜಾ ಜಲಾಶಯ ಮೇಲ್ಭಾಗದ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಹಾಗಾಗಿ ಜಲಾಶಯ ಗರಿಷ್ಠ ಮಟ್ಟ ತಲುಪುವ ಸಂಭವ ಕಂಡಲ್ಲಿ ತಕ್ಷಣ ಜಲಾಶಯದ ಗೇಟ್‌ಗಳನ್ನು ತೆರೆದು ನದಿಗೆ ನೀರು ಬಿಡಲಾಗುವುದು ಎಂದು ಕಾರಂಜಾ ವಿಭಾಗದ ಇಇ ತಿಳಿಸಿದ್ದಾರೆ. ಜಲಾಶಯದ ಕೆಳ ಭಾಗದ ಗ್ರಾಮಗಳಿಗೆ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿ ಕೆಳ ಭಾಗದ ತಳ ಪಾತ್ರದ ಅಕ್ಕ ಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿಯುವುದಾಗಲಿ, ಬಟ್ಟೆ ಒಡೆಯುವುದಾಗಲಿ, ಈಜುವುದಾಗಲಿ, ದನ ಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು. ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಸಂರಕ್ಷಿಸಿಕೊಳ್ಳಲು ಮುಂಜಾಗ್ರತೆ ವಹಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.