ನನೆಗುದಿಗೆ ಬಿದ್ದಿದ್ದ ಆಸ್ಪತ್ರೆ ಕಟ್ಟಡ ಕಾಮಗಾರಿ ಆರಂಭ

Team Udayavani, Aug 20, 2017, 12:16 PM IST

bidar.jpg

ಔರಾದ: ವಡಗಾಂವ ಗ್ರಾಮದಲ್ಲಿ ನನೆಗುದಿಗೆ ಬಿದ್ದಿದ್ದ ಸರ್ಕಾರಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಈ ಭಾಗದ ಜನರ ಹಲವು ವರ್ಷದ ಬೇಡಿಕೆ ಈಡೇರಿಕೆಯಾದಂತಾಗಿದೆ. ಆಸ್ಪತ್ರೆ ಕಟ್ಟಡಕ್ಕೆ ಸ್ಥಳಾವಕಾಶ ಇಲ್ಲದ ಕಾರಣ ಅನುದಾನ ಬಂದು ಮೂರು ಬಾರಿ ಹಿಂದೆ ಹೋಗಿತ್ತು. ಇದನ್ನು ಅರಿತ ಜಿಲ್ಲಾಧಿಕಾರಿಗಳು ಗ್ರಾಮದ ಸರ್ಕಾರಿ ಭೂಮಿಯಲ್ಲಿ ಆಸ್ಪತ್ರೆಯ ಕಟ್ಟಡ ನಿರ್ಮಿಸಲು ಲಿಖೀತ ಆದೇಶ ನೀಡಿದ್ದರೂ, ಈ ಭಾಗದ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 8ರಂದು ಉದಯವಾಣಿಯಲ್ಲಿ ಪ್ರಕಟವಾದ “ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಡಗಡಿ ಸಲ್ಲ’ ಎನ್ನುವ ವಿಶೇಷ ವರದಿಗೆ ಸ್ಪಂದನೆ ಸಿಕ್ಕಿದೆ. ಜಿಪಂ ಸಿಇಒ, ಜಿಲ್ಲಾಧಿಕಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ವಡಗಾಂವ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಹಾಗೂ ಆಸ್ಪತ್ರೆಯ ಕಟ್ಟಡಕ್ಕೆ ಭೂಮಿ ಪೂಜೆಯನ್ನೂ ನೆರವೇರಿಸಿರುವುದರಿಂದ ಕಟ್ಟಡದ ಕಾಮಗಾರಿ ಆರಂಭವಾಗಿದೆ. ವಡಗಾಂವ ಗ್ರಾಮದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಲು ಕರ್ನಾಟಕ ಆರೋಗ್ಯ ಸುಧಾರಣೆ ಇಲಾಖೆಯಿಂದ 1.40 ಕೋಟಿ ರೂ. ಅನುದಾನ ಮಂಜೂರಾಗಿದೆ. ಉತ್ತಮ ಕಟ್ಟಡದೊಂದಿಗೆ ಈ ಭಾಗದ ಜನರ ಹಲವು ದಿನಗಳ ಬಯಕೆ ಈಡೇರಿದಂತಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹೇಶ ಬಿರಾದರ ತಿಳಿಸಿದ್ದಾರೆ. ಗ್ರಾಮದಲ್ಲಿ ಈಗಿರುವ ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಇದರಿಂದ ರೋಗಿಗಳಿಗೆ ಹಾಗೂ ವೈದ್ಯರಿಗೆ ಅನಾನುಕೂಲವಾಗುತ್ತಿದೆ. ಈಗ ಗ್ರಾಮದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿರುವುದರಿಂದ ಒಳ್ಳೆಯದಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯ ನೂತನ ಕಟ್ಟಡ ಗ್ರಾಮದಿಂದ 1ಕಿ.ಮೀ ಅಂತರದಲ್ಲಿದೆ. ಅಲ್ಲಿಗೆ ಹೋಗಿ ಬರಲು ಉತ್ತಮ ರಸ್ತೆ ನಿರ್ಮಿಸಲಾಗಿದೆ. ಇದು ಉತ್ತಮ ಕೆಲಸವಾಗಿದೆ. ಈಗ ಕಟ್ಟಡ ಕೆಲಸ ಆರಂಭವಾಗಿರುವುದರಿಂದ ಸಂತೋಷವಾಗಿದೆ ಎಂದು ವಡಗಾಂವ ಗ್ರಾಮಸ್ಥರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.