ಮಕ್ಕಳಿಗೆ ಸೋಂಕು: ಗ್ರಾಮಸ್ಥರಲ್ಲಿ ಢವಢವ

Team Udayavani, May 25, 2020, 5:36 PM IST

25-May-27

ಸಾಂದರ್ಭಿಕ ಚಿತ್ರ

ಹುಮನಾಬಾದ: ಬೀದರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌-19 ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ರವಿವಾರ ಹುಮನಾಬಾದ್‌ ತಾಲೂಕಿನ ಎರಡು ಗ್ರಾಮಗಳ ಮೂರು ಮಕ್ಕಳಲ್ಲಿ ಸೋಂಕು ಪತ್ತೆ ಆಗಿದ್ದು, ಗ್ರಾಮೀಣ ಜನರ ನಿದ್ದೆಗೆಡಿಸಿದೆ.

ಮುಂಬಯಿನಿಂದ ಬಂದ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ತಾಲೂಕಿನ ಲಾಲಧರಿ ತಾಂಡಾದ ಒಂದೇ ಕುಟುಂಬದ 7 ವರ್ಷ ಹಾಗೂ 9 ವರ್ಷದ ಇಬ್ಬರು ಮಕ್ಕಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಮಕ್ಕಳ ಪಾಲಕರು ಮುಂಬಯಿನಿಂದ ಎಂ.ಆರ್‌ ಟ್ರಾವೆಲ್ಸ್‌ ಮೂಲಕ ಪ್ರಯಾಣಿಸಿ ಲಾಲಧರಿ ಗ್ರಾಮಕ್ಕೆ ತಲುಪಿದ್ದರು. ಇವರು ಪ್ರಯಾಣಿಸಿದ ಬಸ್‌ನಲ್ಲಿ ಸುಮಾರು 44 ಜನರಿದ್ದರು. ಈ ಪೈಕಿ 39 ಜನರನ್ನು ಬಸವಕಲ್ಯಾಣ ತಾಲೂಕಿನ ಅತಿವಾಳ ತಾಂಡಾದ ವಸತಿ ನಿಲಯದ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಬಯಿನಿಂದ ಬಂದಿರುವ ಮಾಹಿತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮದ ಒಳಗೆ ಬರುವ ಮುನ್ನ ಅಧಿಕಾರಿಗಳಿಗೆ ಮಾಹಿತಿ ನೀಡಿ ವಸತಿ ನಿಲಯದಲ್ಲಿ ಇರಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಹಳ್ಳಿಖೇಡ (ಕೆ) ವಸತಿ ಶಾಲೆಯಲ್ಲಿ ಸೋಂಕಿತರನ್ನು ಇರಿಸಲಾಗಿತ್ತು. ಅದೇ ರೀತಿ ತಾಲೂಕಿನ ಹಣಕುಣಿ ಗ್ರಾಮದ ಕುಟುಂಬವೊಂದು ಮುಂಬಯಿನಿಂದ ಬಂದಿದ್ದು, 17 ತಿಂಗಳ ಮಗುವಿಗೆ ಸೋಂಕು ಇರುವುದು ಪತ್ತೆಯಾಗಿದೆ. ಮಗುವಿನ ತಂದೆ-ತಾಯಿಗಳ ಜೊತೆಗೆ ಇತರೆ 3 ಜನ ಸಂಬಂಧಿಕರು ಕೂಡ ಪ್ರಯಾಣ ಮಾಡಿ ಗ್ರಾಮ ಸೇರಿದ್ದಾರೆ. ಮುಂಬಯಿನಿಂದ ಆಟೋ ಹಾಗೂ ದ್ವಿಚಕ್ರ ವಾಹನದಲ್ಲಿ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದಾರೆ. ಇವರ ಸಂಬಂಧಿಕರಾದ ಮೂರು ಜನರು ಕಲಬುರಗಿ ಜಿಲ್ಲೆಯ ಚೂಮನಚೋಡ್‌ ಗ್ರಾಮಕ್ಕೆ ತೆರಳಿದ್ದಾರೆ. ಇವರು ಕೂಡ ಹಳ್ಳಿಖೇಡ (ಕೆ) ವಸತಿ ನಿಲಯದಲ್ಲಿನ ಕ್ವಾರಂಟೈನ್‌ನಲ್ಲಿ ಉಳಿದುಕೊಂಡಿದ್ದು, ಮಗುವಿಗೆ ಪರೀಕ್ಷೆ ನಡೆಸಿದ್ದು, ಇದೀಗ ಪಾಸಿಟಿವ್‌ ವರದಿ ಬಂದಿದೆ. ಇಲ್ಲಿನ ವೈದ್ಯರು 10 ವರ್ಷದ ಒಳಗಿನ ಮಕ್ಕಳಿಗೆ ಮೊದಲ ಆದ್ಯತೆ ನೀಡಿ ಸ್ಯಾಂಪಲ್‌ ತೆಗೆದು ಪರೀಕ್ಷೆಗೆ ಕಳುಹಿಸಿದ ಹಿನ್ನೆಲೆಯಲ್ಲಿ ಮೂರು ಮಕ್ಕಳಲ್ಲಿ ಕೋವಿಡ್ ಪಾಸಿಟಿವ್‌ ಪತ್ತೆಯಾಗಿದೆ.

ಹಳ್ಳಿಖೇಡ (ಕೆ) ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ನಾಗಯ್ನಾ ಹಿರೇಮಠ, ಕೋವಿಡ್‌ ತಾಲೂಕು ಉಸ್ತುವಾರಿ ಡಾ| ಗೋವಿಂದ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ ಮೈಲಾರೆ, ಚಿಟಗುಪ್ಪ ಆಸ್ಪತ್ರೆ ಅಧಿಕಾರಿ ಡಾ| ವೀರನಾಥ ಕನಕ, ಪಿಎಸ್‌ಐ ಸುರೇಶ ಭಾವಿಮನಿ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪಾಸಿಟಿವ್‌ ಪತ್ತೆಯಾದ ಮಕ್ಕಳನ್ನು ಬೀದರ ಜಿಲ್ಲಾಸ್ಪತ್ರೆಗೆ ಕಳುಹಿಸಿದರು. ಅಲ್ಲದೆ, ಇದೀಗ ಮಕ್ಕಳ ಪಾಲಕರು ಹಾಗೂ ಸಂಪರ್ಕದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಯಾಂಪಲ್‌ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

1-asdsadasd

ಬಸವಕಲ್ಯಾಣ; ಭಾರೀ ಮಳೆಗೆ ಒಡೆದ ಕೆರೆ ದಂಡೆ: ನೀರು ನುಗ್ಗಿ ಅಪಾರ ಹಾನಿ

Bidar: ಮಹಾರಾಷ್ಟ್ರದ ಉಮರ್ಗಾ ಬಳಿ ಬಿಜೆಪಿ ಮುಖಂಡ ಚಾಂದಿವಾಲೆ ಮೃತದೇಹ ಪತ್ತೆ

Bidar: ಮಹಾರಾಷ್ಟ್ರದ ಉಮರ್ಗಾ ಬಳಿ ಬಿಜೆಪಿ ಮುಖಂಡ ಚಾಂದಿವಾಲೆ ಮೃತದೇಹ ಪತ್ತೆ

6-bhalki

Bhalki: ಸಿಡಿಲು ಬಡಿದು ಎತ್ತು ಸಾವು

1-sadasd

Environment Day; ವೃಕ್ಷ ಸಂರಕ್ಷಣಾ ಕಾಯಿದೆ 1976 ತಿದ್ದುಪಡಿಗೆ ಚಿಂತನೆ: ಈಶ್ವರ ಖಂಡ್ರೆ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.