ಅಂಗನವಾಡಿ ದುರಸ್ತಿಯಲ್ಲಿ ಅಕ್ರಮ ಶಂಕೆ


Team Udayavani, Nov 24, 2018, 11:40 AM IST

bid-1.jpg

ಬೀದರ: ಶೈಕ್ಷಣಿಕ ಬೆಳವಣೆಗೆಗೆ ಪೂರಕ ವಾತಾವರವಣ ನಿರ್ಮಿಸುವ ಉದ್ದೇಶದಿಂದ ಆರಂಭಿಸಲಾದ ಅಂಗನವಾಡಿ ಕಟ್ಟಡಗಳು ಶಿಥಿಲಾವಸ್ಥೆ ತಲುಪುತ್ತಿದ್ದು, ಇವುಗಳ ದುರಸ್ತಿ ಕಾಮಗಾರಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗುತ್ತಿದೆ.

ಅಂಗನವಾಡಿ ಕೇಂದ್ರಗಳ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ. ಅವ್ಯವಹಾರದ ಮಾತು ಕೇಳಿಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಕುರಿತು ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಪ್ರಸಕ್ತ 2017-18ನೇ ಸಾಲಿನಲ್ಲಿ ಬೀದರ ಜಿಲ್ಲೆಯಲ್ಲಿ 62 ಅಂಗನವಾಡಿ ಕೇಂದ್ರಗಳನ್ನು ದುರಸ್ತಿ ಮಾಡಲಾಗಿದೆ.

ಭಾಲ್ಕಿ ತಾಲೂಕಿನಲ್ಲಿ 11 ಅಂಗನವಾಡಿ ಕೇಂದ್ರಗಳ ದುರಸ್ತಿ ಹಾಗೂ ಸುಣ್ಣಬಣ್ಣಕ್ಕೆ 12 ಲಕ್ಷ ರೂ. ಖರ್ಚು ಮಾಡಲಾಗಿದೆ. ಬೀದರ ತಾಲೂಕಿನಲ್ಲಿ 14 ಅಂಗನವಾಡಿ ಕೇಂದ್ರಗಳ ದುರಸ್ತಿಗೆ 12 ಲಕ್ಷ ರೂ, ಬಸವಕಲ್ಯಾಣ ತಾಲೂಕಿನ 18 ಅಂಗನವಾಡಿ ಕೇಂದ್ರಗಳ ದುರಸ್ತಿಗೆ 9 ಲಕ್ಷ, ಹುಮನಾಬಾದ ತಾಲೂಕಿನಲ್ಲಿ 12 ಕೇಂದ್ರಗಳ ದುರಸ್ತಿಗೆ 12 ಲಕ್ಷ ರೂ. ವೆಚ್ಚ ಮಾಡಲಾಗಿದೆ.

ಬೀದರ ತಾಪಂ ಅಂಗನವಾಡಿ ಕಟ್ಟಡಗಳ ನಿರ್ವಹಣೆ ಯೋಜನೆಯಡಿ ರೇಕುಳಗಿ, ಚಾಂಬೋಳ, ಬಗದಲ, ನಾಗೂರ, ಅಲಿಂಬರ, ಸಂಗೋಳಗಿ, ಅತಿವಾಳ ಗ್ರಾಮದಲ್ಲಿ ತಲಾ ಒಂದು ಅಂಗನವಾಡಿ ಕೇಂದ್ರಗಳು ಹಾಗೂ ಕಾಡವಾದ ಎರಡು, ಮನ್ನಳ್ಳಿ ಎರಡು ಹಾಗೂ
ಕೋಳಾರ(ಕೆ) ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಿಗೆ ದುರಸ್ತಿ ಹಾಗೂ ಸುಣ್ಣ ಬಣ್ಣ ಮಾಡಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ, ಮೇಲ್ನೋಟಕ್ಕೆ ಕೆಲ ಅಂಗನವಾಡಿಗಳಲ್ಲಿಗೆ ಕೇವಲ ಸುಣ್ಣ ಬಳಿದು ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಇನ್ನು ಕೆಲ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ದುರಸ್ತಿ ಕಾರ್ಯವೇ ನಡೆದಿಲ್ಲ ಎಂದು ಅಲ್ಲಿನ ಸ್ಥಳೀಯರು ಆರೋಪಿಸುತ್ತಿದ್ದಾರೆ.

 ಪ್ರತಿ ವರ್ಷ ಆಯಾ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳ ದುರಸ್ತಿಗಾಗಿ ಶಿಶು ಅಭಿವೃದ್ಧಿ ಇಲಾಖೆಯಿಂದ ಪಟ್ಟಿ ಮಾಡಿ ತಾಪಂಗೆ ನೀಡಲಾಗುತ್ತದೆ. ತಾಪಂ ಸಭೆಯಲ್ಲಿ ಈ ಕುರಿತು ಅನುಮೋದನೆ ಪಡೆದುಕೊಂಡು ದುರಸ್ತಿ ಕಾರ್ಯಕ್ಕೆ ಹಂಚಿಕೆ ಮಾಡಲಾಗುತ್ತದೆ. ಆದರೆ, ಶಿಶು ಅಭಿವೃದ್ಧಿ ಇಲಾಖೆ ನೀಡಿದ ದುರಸ್ತಿ ಪಟ್ಟಿ ಬಿಟ್ಟು ತಮಗೆ ಅನುಕೂಲ ಆಗುವ ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡು ಸರ್ಕಾರದ ಅನುದಾನ ದುರ್ಬಳಕೆ ಮಾಡಲಾಗುತ್ತಿದೆ ಎಂಬುದು ಹೆಸರು ಹೇಳದ ಅಧಿಕಾರಿಗಳ ಮಾತು.

ಈ ಹಿಂದೆ ದುರಸ್ತಿ ಮಾಡಿದ ಅಂಗನವಾಡಿ ಕೇಂದ್ರಗಳನ್ನು ಮತ್ತೆ ದುರಸ್ತಿ ಮಾಡುವ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪಗಳು ಕೂಡ ಇವೆ. ಇದು ಅಧಿಕಾರಿಗಳ ಮತ್ತು ಗುತ್ತಿಗೆದಾರರ ಮತ್ತೂಂದು ಮುಖದ ಪರಿಚಯ ಮಾಡಿಸಿಕೊಡುತ್ತದೆ. ಕಳೆದ ವರ್ಷ ದುರಸ್ತಿ ಮಾಡಲಾದ ಅಂಗನವಾಡಿ ಕೇಂದ್ರಗಳು ಈ ವರ್ಷವೂ ದುರಸ್ತಿ ಹೇಗೆ ಬಂದಿತು ಎಂಬ ಪ್ರಶ್ನೆಗೆ ಅಧಿಕಾರಿಗಳೇ ಉತ್ತರಿಸಬೇಕು. ಪ್ರತಿ ವರ್ಷ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಕೊಳ್ಳೆ ಹೊಡೆಯಲಾಗುತ್ತಿದ್ದು, ಈಗಾಗಲೇ ಖರ್ಚು ಮಾಡಿದ ಹಣದಲ್ಲಿ ಹೊಸ ಅಂಗನವಾಡಿ ಕೇಂದಗಳೇ ನಿರ್ಮಾಣವಾಗುತ್ತಿದ್ದವು ಎನ್ನುವ ವಾಸ್ತವ ಸಂಗತಿಯನ್ನು ಅಧಿಕಾರಿಗಳು ಮರೆತಂತಿದೆ. ಇನ್ನು ಉಸ್ತುವಾರಿ ನೋಡಿಕೊಳ್ಳಬೇಕಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಅಂಗನವಾಡಿ ಕೇಂದ್ರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.

ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯ ಕಲ್ಪಿಸಬೇಕಾದ ಗುರುತರ ಜವಾಬ್ದಾರಿ ಹೊಂದಿರುವ ಇಲಾಖೆ ಕೈಕಟ್ಟಿ ಕುಳಿತಿದ್ದು, ದುರಸ್ತಿ ಆಗಬೇಕಾದ ಪಟ್ಟಿ ಕೈಬಿಟ್ಟು ಬೇರೆ ಕೇಂದ್ರ ಆಯ್ಕೆ ಸಂದರ್ಭದಲ್ಲಿ ಅಧಿಕಾರಿಗಳು ಮೌನಕ್ಕೆ ಶರಣಾಗುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ ಅಧಿಕಾರಿಗಳೇ ಉತ್ತರಿಸಬೇಕು.
 „ದುರ್ಯೋಧನ ಹೂಗಾರ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.