ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ

Team Udayavani, Mar 10, 2019, 9:30 AM IST

ಲಿಂಗಸುಗೂರು: ತಾಲೂಕಿನಲ್ಲಿ ಬರ ಆವರಿಸಿದ್ದರಿಂದ ಗ್ರಾಮೀಣ ಭಾಗದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ಈ ಬಗ್ಗೆ ನಿಮ್ಮ ವಿರುದ್ಧ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಶಾಸಕ ಡಿ.ಎಸ್‌.ಹೂಲಗೇರಿ ಪಿಡಿಒಗಳಿಗೆ ಎಚ್ಚರಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪಿಡಿಒಗಳ ಸಭೆ ನಡೆಸಿದ ಅವರು, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿದಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ. ಪಿಡಿಒಗಳು ತಮ್ಮ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಟ್ಟು
ಹೋಗಬಾರದು. ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮೀಣ ಜನತೆ ತಮ್ಮ ಬಳಿ ಬಂದರೆ ಆಯಾ ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ. ಗ್ರಾಮಸ್ಥರಿಂದ ದೂರು ಬರದಂತೆ ನೋಡಿಕೊಳ್ಳಬೇಕು.

ಕುಡಿಯುವ ನೀರಿಗಾಗಿ ಅನುದಾನದ ಕೊರತೆಯಿಲ್ಲ, ಸಮಸ್ಯೆ ಪರಿಹರಿಸಲು ನಿರ್ಲಕ್ಷ್ಯ ಮಾಡಬಾರದು ಎಂದು ಸೂಚಿಸಿದರು. ಮಾವಿನಬಾವಿಯಲ್ಲಿ ನೀರಿನ ಸಮಸ್ಯೆಯಿದೆ. ಆದರೆ ಖಾಸಗಿಯವರು ನೀರು ನೀಡಲು ಒಪ್ಪುತ್ತಿಲ್ಲ ಎಂದು ಪಿಡಿಒ ಗಂಗಮ್ಮ ಸಭೆಗೆ ತಿಳಿಸಿದರು. ಖಾಸಗಿಯವರು
ಕೊಡಲು ಒಪ್ಪದಿದ್ದರೆ ಆ ಬೋರ್‌ ವೆಲ್‌ನ್ನು ಸರ್ಕಾರದ ವಶಕ್ಕೆ ಪಡೆದು ನೀರು ಪೂರೈಕೆಗೆ ಕ್ರಮ ವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿಮಗೆ ತಿಳಿಸಲಾಗಿದೆ. ಕೂಡಲೇ ಆ ಕೆಲಸ ಮಾಡಿ ಎಂದು ಶಾಸಕರು ತಾಕೀತು ಮಾಡಿದರು. ತಾಪಂ ಇಒ ಪ್ರಕಾಶ ಹಾಗೂ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿದ್ದರು.


ಈ ವಿಭಾಗದಿಂದ ಇನ್ನಷ್ಟು

  • ವೀರಾರೆಡ್ಡಿ ಆರ್‌.ಎಸ್‌. ಬಸವಕಲ್ಯಾಣ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ನಗರಸಭೆ ಚುನಾವಣೆಯ ಪ್ರಚಾರ ಮತ್ತಷ್ಟು...

  • ಬೀದರ: ಲೋಕಸಭೆಯ ಒಟ್ಟು 8 ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಒಟ್ಟು 1,948 ಮತದಾರರು ನೋಟಾ ಮತ ಚಲಾಯಿಸುವ ಮೂಲಕ ಸ್ಪರ್ಧೆ ನಡೆಸಿದ ಅಭ್ಯರ್ಥಿಗಳು ಸೂಕ್ತ ಅಲ್ಲ ಎಂದು...

  • ಬೀದರ: ಬರುವ ಆಗಸ್ಟ್‌ ತಿಂಗಳ ವರೆಗೆ ಬೀದರ ನಗರದಲ್ಲಿ ಉಡಾನ್‌ ಯೋಜನೆಯಡಿ ನಾಗರಿಕ ವಿಮಾನಯಾನ ಪ್ರಾರಂಭಿಸುತ್ತೇನೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ. ಸಂಸದರಾಗಿ...

  • ಔರಾದ: ಅಮರವಾಡಿಯ ಭೂಮಿಪುತ್ರ ಭಗವಂತ ಖೂಬಾ ಅವರು ಬಹುಮತದೊಂದಿಗೆ ಎರಡನೇ ಬಾರಿಗೆ ಸಂಸರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರಿನಲ್ಲಿ ಅದ್ಧೂರಿ ಜನರು...

  • ಬೀದರ: ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಕಂಡಿದ್ದು,...

ಹೊಸ ಸೇರ್ಪಡೆ