ಕೋವಿಡ್ ಹೆಚ್ಚಳ; ರೆಡ್ ಝೋನ್ನಲ್ಲಿ ಬೀದರ
ಈಗ 100 ಜನರಿಗೆ ಪರೀಕ್ಷಿಸಿದರೆ ಈ ಪೈಕಿ ಇಬ್ಬರಿಗೆ ಕೋವಿಡ್ ಇರುವುದು ಕಂಡುಬರುತ್ತಿದೆ.
Team Udayavani, Mar 11, 2021, 6:34 PM IST
ಬೀದರ: ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ರಾಜ್ಯದಲ್ಲಿಯೇ ಬೀದರ ರೆಡ್ ಝೋನ್ದಲ್ಲಿದೆ. ಆರೋಗ್ಯದ ಹಿತದೃಷ್ಟಿಯಿಂದಾಗಿ ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧರಿಸುವುದನ್ನು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿ ಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯಿಂದ ನಡೆದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಬಳಿಕ ಎಲ್ಲ ತಹಶೀಲ್ದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯ ಬಗ್ಗೆ ಜಾಗೃತರಾಗಿರಬೇಕು. ಸ್ಯಾನಿಟೈಸರ್, ಸೋಪ್ ಬಳಸಿ ಕೈ ತೊಳೆದುಕೊಳ್ಳಬೇಕು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸಾರ್ವಜನಿಕರಲ್ಲಿ ಸಭೆಯ ಮೂಲಕ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕೆ ಈಗ ಮೊದಲಾದ್ಯತೆ ಕೊಡಬೇಕು. ಈಗ 100 ಜನರಿಗೆ ಪರೀಕ್ಷಿಸಿದರೆ ಈ ಪೈಕಿ ಇಬ್ಬರಿಗೆ ಕೋವಿಡ್ ಇರುವುದು ಕಂಡುಬರುತ್ತಿದೆ.
ಹೀಗಾಗಿ ಬೀದರ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ತೀವ್ರಗೊಳಿಸಬೇಕು. ಕಮಲನಗರ, ಔರಾದ ಮತ್ತು ಭಾಲ್ಕಿಯಲ್ಲಿ ಕೋವಿಡ್ ಟೆಸ್ಟ್ ಹೆಚ್ಚಿಸಬೇಕು. ರವಿವಾರ
ಕೂಡ ಕೋವಿಡ್ ಟೆಸ್ಟ್ ನಡೆಸಬೇಕು. ತಾಲೂಕು ಆರೋಗ್ಯಾಧಿಕಾರಿಗಳು, ತಾಪಂ ಇಒ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿ ಈ
ಕಾರ್ಯ ನಡೆಸಬೇಕೆಂದು ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಎಸ್ಪಿ ನಾಗೇಶ ಡಿ.ಎಲ್., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕರಾದ ಡಾ| ಶಿವಕುಮಾರ, ಡಿಎಸ್ಒ ಡಾ| ಕೃಷ್ಣಾ ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ರತಿಕಾಂತ ಸ್ವಾಮಿ,
ಡಾ| ಮಹೇಶ ತೊಂಡಾರೆ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ