ನೇತ್ರ ಆರೋಗ್ಯ ಜಾಗೃತಿ ಮೂಡಿಸಿದ ಜಾಥಾ


Team Udayavani, Oct 22, 2021, 2:56 PM IST

eye-17

ಬೀದರ: ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ವೆಲ್‌ಮೆಗ್ನಾ ನೇತ್ರ ಆಸ್ಪತ್ರೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಗುರುವಾರ ನಡೆದ ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ನೇತ್ರ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಅಂಬೇಡ್ಕರ್‌ ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿ ಕಚೇರಿ, ಹರಳಯ್ಯ ವೃತ್ತದ ಮಾರ್ಗವಾಗಿ ಸಾಗಿ ಜಿಲ್ಲಾ ಆಸ್ಪತ್ರೆಗೆ ತಲುಪಿ ಸಮಾರೋಪಗೊಂಡಿತು.

ಜಾಥಾದಲ್ಲಿ ಪಾಲ್ಗೊಂಡವರು ನೇತ್ರ ಆರೋಗ್ಯಕ್ಕೆ ಸಂಬಂಧಿಸಿದ ಬರಹಗಳನ್ನು ಹೊಂದಿದ್ದ ಫಲಕಗಳನ್ನು ಹಿಡಿದುಕೊಂಡಿದ್ದರು. ಜಾಥಾದ ಉದ್ದಕ್ಕೂ ಘೋಷಣೆಗಳನ್ನು ಕೂಗುತ್ತ ಸಾರ್ವಜನಿಕರ ಗಮನ ಸೆಳೆದರು. ಇದಕ್ಕೂ ಮುನ್ನ ಜಾಥಾಕ್ಕೆ ಚಾಲನೆ ನೀಡಿದ ವೆಲ್‌ಮೆಗ್ನಾ ಆಸ್ಪತ್ರೆಯ ನಿರ್ದೇಶಕಿ ಡಾ| ಸಿಬಿಲ್‌ ಸಾಲಿನ್ಸ್‌ ಮಾತನಾಡಿ, “ನಿಮ್ಮ ಕಣ್ಣುಗಳನ್ನು ಪ್ರೀತಿಸಿ’ ಎನ್ನುವುದು ಈ ಬಾರಿಯ ವಿಶ್ವ ದೃಷ್ಟಿ ದಿನಾಚರಣೆಯ ಘೋಷವಾಕ್ಯವಾಗಿದೆ. ಕಣ್ಣುಗಳು ಮಾನವನ ಅತ್ಯಂತ ಮಹತ್ವದ ಅಂಗವಾಗಿವೆ. ಹೀಗಾಗಿ ಪ್ರತಿಯೊಬ್ಬರೂ ಕಣ್ಣುಗಳನ್ನು ಪ್ರೀತಿಸಬೇಕು. ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಲಹೆ ಮಾಡಿದರು.

40 ವರ್ಷ ಮೇಲ್ಪಟ್ಟವರು ನೇತ್ರ ಸಮಸ್ಯೆ ಕಂಡು ಬಂದರೆ ಕೂಡಲೇ ನೇತ್ರ ವೈದ್ಯರನ್ನು ಕಾಣಬೇಕು. ಮಧುಮೇಹಿಗಳು ಪ್ರತಿ ಆರು ತಿಂಗಳಿಗೊಮ್ಮೆ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನೂ ಲಘುವಾಗಿ ಪರಿಗಣಿಸಬಾರದು ಎಂದು ಹೇಳಿದರು.

ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ| ಮಹೇಶ ಬಿರಾದಾರ ಮಾತನಾಡಿ, ಸಾರ್ವಜನಿಕರಲ್ಲಿ ಕಣ್ಣಿನ ಆರೋಗ್ಯದ ಅರಿವು ಮೂಡಿಸಲು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ನೇತ್ರ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಈ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ವೆಲ್‌ಮೆಗ್ನಾ ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್‌ರಾಜ್‌ ಪ್ರಸಾದ ಮಾತನಾಡಿ, ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ಸಹಯೋಗದಲ್ಲಿ ವೆಲ್‌ಮೆಗ್ನಾ ನೇತ್ರ ಆಸ್ಪತ್ರೆಯು ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಮೂಲಕ ಬಡ ರೋಗಿಗಳಿಗೆ ನೆರವಾಗುತ್ತಿದೆ ಎಂದರು.

ಇಲಾಖೆಯ ಸಂಜು ಮಲಗಿಕರ್‌, ಅಶೋಕ, ರಾಜಶೇಖರ, ಡಾ| ವೀರೇಂದ್ರ ಪಾಟೀಲ, ಜಾಥಾ ಸಂಯೋಜಕ ಪುಟ್ಟರಾಜ ಬಲ್ಲೂರಕರ್‌, ಸುದೇಶ್‌, ಪ್ರಕಾಶ ಓ.ಟಿ, ವೆಲ್‌ಮೆಗ್ನಾ ಆಸ್ಪತ್ರೆಯ ವ್ಯವಸ್ಥಾಪಕ ಸತೀಶ್‌, ರಮೇಶ ಇದ್ದರು.

ಟಾಪ್ ನ್ಯೂಸ್

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21lowyer

ವಕೀಲರ ಜವಾಬಾರಿ ಹೆಚ್ಚಿದೆ: ಹುಕ್ಕೇರಿ

20seva

ಸೇವಾ ಭಾರತಿ ಕಾರ್ಯ ಮಾದರಿ: ಗುರುಪಾದ ಶ್ರೀ

19loan

ಅರಿವು ಸಾಲ ಯೋಜನೆ ಮುಂದುವರಿಸಲು ಆಗ್ರಹ

18low-rate

ಕಡಿಮೆ ದರದಲ್ಲಿ ವಿದ್ಯಾರ್ಥಿಗಳಿಗೆ ಉಪಾಹಾರ

1-sa2

ಕಾಂಗ್ರೆಸ್‌ ಸೋಲಿಸಿದರೆ ಆತ್ಮಕ್ಕೆ ದ್ರೋಹ ಬಗೆದಂತೆ : ಡಾ.ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

acb

ಚಾಮರಾಜನಗರ : ತೆರಿಗೆ ಇಲಾಖೆಯ ಇಬ್ಬರು ಇನ್‌ಸ್ಪೆಕ್ಟರ್‌ಗಳು ಎಸಿಬಿ ಬಲೆಗೆ

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.