ಸಮರ್ಪಕ ಆಹಾರ ವಿತರಿಸಿ: ಡಾ.ಅಜಯಸಿಂಗ್‌

Team Udayavani, Apr 27, 2020, 5:18 PM IST

27-April-31

ಜೇವರ್ಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಡಾ.ಅಜಯಸಿಂಗ್‌ ಮಾತನಾಡಿದರು

ಜೇವರ್ಗಿ: ತಾಲೂಕಿನ ಒಟ್ಟು 42 ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಗತಿಕರಿಗೆ, ಅಲೆಮಾರಿ ಜನಾಂಗದವರಿಗೆ ಆಹಾರ ವಿತರಣೆಯಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಶಾಸಕ ಡಾ.ಅಜಯಸಿಂಗ್‌ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ಇಡೀ ದೇಶ ನಲುಗಿದೆ. ಇಂತಹ ಸಂದರ್ಭದಲ್ಲಿ ಮನುಕುಲದ ಉದ್ಧಾರಕ್ಕಾಗಿ ಪ್ರತಿಯೊಬ್ಬರು ಮಾನವೀಯತೆ ಮೆರೆಯಬೇಕಾಗಿದೆ. ತಾಲೂಕಿನ ನಿರ್ಗತಿಕ ಕುಟುಂಬಗಳಿಗೆ ಧರ್ಮಸಿಂಗ್‌ ಫೌಂಡೇಶನ್‌ ವತಿಯಿಂದ 42 ಗ್ರಾಪಂ ವ್ಯಾಪ್ತಿಯಲ್ಲಿ 1.35 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ಮುಂಜಾಗ್ರತೆಯಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಒಂದೇ ಒಂದು ಕೊರೊನಾ ಸೋಂಕು ತಗುಲಿದ ಪ್ರಕರಣ ಪತ್ತೆಯಾಗಿಲ್ಲ. ಹೊರ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಂದ ಜೇವರ್ಗಿ ತಾಲೂಕಿಗೆ 9,857 ಜನ ಬಂದಿದ್ದು, ಅದರಲ್ಲಿ 8,871 ಜನರಿಗೆ 14 ದಿವಸ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ರಾಜ್ಯ ಸರ್ಕಾರ ಜೇವರ್ಗಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಈಗಾಗಲೇ ಬರ ನಿರ್ವಹಣೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.

ತಹಶೀಲ್ದಾರ್‌ ಸಿದರಾಯ ಭೋಸಗಿ, ಯಡ್ರಾಮಿ ತಹಶೀಲ್ದಾರ್‌ ಬಸಲಿಂಗಪ್ಪ ನಾಯ್ಕೋಡಿ, ತಾಪಂ ಇಒ ವಿಲಾಸರಾಜ್‌, ಡಾ.ಸಿದ್ದು ಪಾಟೀಲ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ.ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೀಶ, ಅಪರಾಧ ವಿಭಾಗದ ಪಿಎಸ್‌ಐ ಸಂಗಮೇಶ ಅಂಗಡಿ ಇದ್ದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.