ಪ್ರಕರಣ ಮುಚ್ಚಿ ಹಾಕದೇ ನೊಂದವರಿಗೆ ನ್ಯಾಯ ಕೊಡಿ: ನ್ಯಾ| ಸಣ್ಮನಿ

Team Udayavani, Oct 27, 2018, 11:57 AM IST

bid-3.jpg

ಹುಮನಾಬಾದ: ಅಪ್ರಾಪ್ತ ಬಾಲಕಿಯರ ಮೇಲೆ ಮತ್ತು ಮಹಿಳೆಯರ ಮೇಲೆ ನಡೆಯುವ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಮುಚ್ಚಿಹಾಕಲು ಯತ್ನಿಸದೇ ನಮ್ಮನ್ನೇ ನಂಬಿ ಬರುವ ಬಡವರು, ಅಸಹಾಯಕರಿಗೆ ನ್ಯಾಯ ಒದಗಿಸುವ ಮೂಲಕ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾನವೀಯತೆ ಮೆರೆಯಬೇಕು ಎಂದು ನ್ಯಾಯಾಧೀಶರಾದ ಆಶೆಪ್ಪ ಬಿ.ಸಣ್ಮನಿ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಪ್ರಾ ಕಾರ, ವಕೀಲರ ಸಂಘ ಮತ್ತು ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ದಿನಾಚರಣೆ ನಿಮಿತ್ತ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂಥ ಪ್ರಕರಣ ಇತ್ಯರ್ಥಗೊಳಿಸುವ ವಿಷಯದಲ್ಲಿ ಅಧಿಕಾರಿಗಳ ಜೊತೆಗೆ ಪಾಲಕರ ಸಹಕಾರವೂ ಅತ್ಯಂತ ಅವಶ್ಯ ಎಂದರು.

ಬಾಲ್ಯ ವಿವಾಹ ಮತ್ತು ಮಹಿಳೆ ಮೇಲೆ ನಡೆಯುವ ವಿವಿಧ ರೀತಿಯ ದೌಜನ್ಯ ಪ್ರಕರಣದಲ್ಲಿ ಸಂತ್ರಸ್ತರು ಭಯದಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಾರೆ. ಅಂಥ ಸಂದರ್ಭದಲ್ಲಿ ಸಂತ್ರಸ್ತರು ದೂರು ನೀಡಿಲ್ಲ ಎಂದು ದಾರಿ ಕಾಯದೇ ಪೊಲೀಸ್‌ ಇಲಾಖೆ ಅಧಿಕಾರಿಗಳೇ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ನ್ಯಾಯ ಒದಗಿಸುವುದು ಕಾನೂನು ಬದ್ಧ ಕರ್ತವ್ಯ. ತನ್ಮೂಲಕ ಬಾಲ್ಯವಿವಾಹ, ಅಪ್ರಾಪ್ತ ಬಾಲಕಿಯರ ಮೇಲಿನ ದೈಹಿಕ- ಮಾನಸಿಕ ಹಿಂಸೆ ಸೇರಿದಂತೆ ವಿವಾಹಿತ ಮಹಿಳೆಯರಿಗೆ ವರದಕ್ಷಿಣೆ ನೆಪದಲ್ಲಿ ಕಿರುಕುಳ ನೀಡುವಂತಹ ಪ್ರಕರಣ ಯಾವುದೇ ಕಾರಣಕ್ಕೂ ಮುಚ್ಚಿಹಾಕುವಂತಿಲ್ಲ ಎಂದು ಹೇಳಿದರು.

ಬೇನಚಿಂಚೋಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಸಾರಿಕಾ ಮಹಿಳೆಯರ ಸವಾಲು ಮತ್ತು ಸಬಲೀಕರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹೆಚ್ಚುವರಿ ಸಿವಿಲ್‌ ನ್ಯಾಯಾಧಿಶ ಗಗನ್‌ ಎಂ.ಆರ್‌., ವಕೀಲರ ಸಂಘದ ತಾಲೂಕು ಅಧ್ಯಕ್ಷ ಶಂಭುಲಿಂಗ ಧುಮ್ಮನಸೂರೆ, ಉಪಾರ್ಧಯಕ್ಷ ಈಶ್ವರ ಸೋನಕೇರಾ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಜೋತಗೊಂಡ, ವಕೀಲೆ ವಿರೇಖಾ ಪಾಟೀಲ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ಅಧ್ಯಕ್ಷತೆ ವಹಿಸಿದ್ದರು.

ಭೀಮರಾವ್‌ ಓತಗಿ, ಪ್ರೌಢಶಾಲೆಯ ಉಪಪ್ರಾಚಾರ್ಯೆ ಜಿ.ಅನುಜಾ ಇದ್ದರು. ಶಿಕ್ಷಣ ಸಂಯೋಜಕ ಸಂಜೀವಕುಮಾರ ಸ್ವಾಗತಿಸಿದರು. ರಮೇಶ ರಾಜೋಳೆ ನಿರೂಪಿಸಿದರು. 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.