ಹದಗೆಟ್ಟ  ಸೋನಾಳ ರಸ್ತೆ

ಜನಪ್ರತಿನಿಧಿ -ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ-ರಸ್ತೆ ದುರಸ್ತಿಗೆ ಆಗ್ರಹ

Team Udayavani, Jan 19, 2020, 12:44 PM IST

ಕಮಲನಗರ: ತಾಲೂಕಿನ ಸೋನಾಳದಿಂದ- ಕಮಲನಗರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ತುಂಬ ತಗ್ಗು ಗುಂಡಿಗಳೇ ತುಂಬಿವೆ. ಇದರಿಂದ ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ. ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದು, ರಸ್ತೆಯ ಬಹುತೇಕ ಕಡೆ ಜಲ್ಲಿಕಲ್ಲು ಹೊರಬಂದು ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಭಯದಲ್ಲಿ ಸಂಚರಿಸುವಂತಾಗಿದೆ ಎಂದು ಸೋನಾಳ ಗ್ರಾಮದ ಅಂಕೋಶ ಹಣಮಶೆಟ್ಟೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋನಾಳದಿಂದ ಕಮಲನಗರಕ್ಕೆ ತೆರಳುವ ಮುಖ್ಯ ರಸ್ತೆ ಇದಾಗಿರುವುದರಿಂದ ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ಖಾಸಗಿ, ಶಾಲಾ ವಾಹನ, ಸಾರಿಗೆ ಬಸ್‌, ಲಾರಿ, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಆದರೂ ಸಂಬಂಧಿಸಿದವರ ನಿಷ್ಕಾಳಜಿಯಿಂದ ಸುಗಮ ಸಂಚಾರಕ್ಕೆ ಬಾರದಂತಾಗಿದೆ.

ಗ್ರಾಮಸ್ಥರು ಹದಗೆಟ್ಟ ರಸ್ತೆಯ ಬಗ್ಗೆ ಹಲವು ಬಾರಿ ಸಂಬಂಧಿತ ಅಧಿಕಾರಿ ಮತ್ತು ಚುನಾಯಿತ ಪ್ರತಿನಿಧಿ ಗಳ ಗಮನಕ್ಕೆ ತಂದು,
ಹೊಸ ರಸ್ತೆ ನಿರ್ಮಿಸುವಂತೆ ಮನವಿ ಕೂಡ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ವ್ಯಾಪಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಾಲೆಗೆ, ಬ್ಯಾಂಕ್‌ಗಳಿಗೆ, ತಹಶೀಲ್ದಾರ್‌ ಕಚೇರಿಗೆ ಹಾಗೂ ಮುಂತಾದ ಕಾರ್ಯ ನಿಮಿತ್ತ ನಿತ್ಯ ಈ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಆದರೆ ಇಲ್ಲಿ ಸಂಚಾರ ಸಂಕಟ ಹೇಳತೀರದಾಗಿದೆ. ಆದ್ದರಿಂದ ಕೂಡಲೇ ರಸ್ತೆ ಅಭಿವೃದ್ಧಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಬೇಕು ಎಂದು ಸೋನಾಳ ಗ್ರಾಮದ ಶ್ರೀಕಾಂತ ಜಡಗೆ, ಮಹೇಶ ಬಿರಾದಾರ, ಬಸವರಾಜ ಇಸರಣ್ಣಾ, ಅರುಣ ಇಸರಣ್ಣಾ ಒತ್ತಾಯಿಸಿದ್ದಾರೆ.

ಸೋನಾಳ-ಕಮಲನಗರ ಮುಖ್ಯ ರಸ್ತೆ ಬಹು ವರ್ಷಗಳಿಂದ
ಹಾಳಾಗಿದ್ದು, ವಾಹನ ಸವಾರರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಬಂಧಿತ ಅಧಿಕಾರಿಗಳು ಶೀಘ್ರದಲ್ಲಿ ರಸ್ತೆ ಅಭಿವೃದ್ಧಿಗೊಳಿಸಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು
ಮಾಡಿಕೊಡಬೇಕು.
 ಆನಂದ ಬಿರಾದಾರ, ಕರವೇ
ಕಮಲನಗರ ವಲಯ ಅಧ್ಯಕ್ಷ

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಹು ವರ್ಷಗಳಿಂದ
ಹದಗೆಟ್ಟಿದೆ. ಬೈಕ್‌ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ವಾಹನ ಚಲಾಯಿಸುವಂತಾಗಿದೆ.
ಪ್ರೇಮಕುಮಾರ ಘಾಳೆ,
ಸೋನಾಳ ಗ್ರಾಮಸ್ಥ

„ವೈಜಿನಾಥ ವಡ್ಡೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...

  • ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ...