ಮನುಕುಲಕ್ಕೆ ಬೆಳಕಾದ ಕನಕದಾಸ: ಚಿಮಕೋಡೆ

ಜೀವನ ಚರಿತ್ರೆಯ ಪುಸ್ತಕ ಸಮಾಜ ಸೇವಕರಿಗೆ ಪ್ರೇರಣೆಯಾಗಲಿದೆ

Team Udayavani, Nov 22, 2022, 6:45 PM IST

ಮನುಕುಲಕ್ಕೆ ಬೆಳಕಾದ ಕನಕದಾಸ: ಚಿಮಕೋಡೆ

ಬೀದರ: ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಮನುಕುಲಕ್ಕೆ ಬೆಳಕಾಗಿದ್ದಾರೆ ಎಂದು ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ ಹೇಳಿದರು. ಇಲ್ಲಿಯ ಶಿವಾಜಿನಗರದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಹಾಗೂ ನಿವೃತ್ತ ಕೃಷಿ ಅಧಿ  ಕಾರಿ ಬಕ್ಕಪ್ಪ ನಾಗೋರೆ ಜೀವನ ಚರಿತ್ರೆ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಕೀರ್ತನೆಗಳು ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಸಹಕಾರಿಯಾಗಿವೆ. ಸನ್ಮಾರ್ಗವನ್ನೂ ತೋರುತ್ತವೆ ಎಂದರು.

ಕನಕದಾಸರು ಶ್ರೇಷ್ಠ ಕಲಿ ಆಗಿದ್ದರು. ಕೀರ್ತನೆ ರಚಿಸಿ, ದೇಶ ಸಂಚಾರ ಮಾಡಿ, ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದರು ಎಂದು ಹೇಳಿದರು. ಕಸಾಪ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಸದ್ಯದ ಅನೇಕ ಸಮಸ್ಯೆಗಳಿಗೆ ಪುಸ್ತಕಗಳಲ್ಲಿ ಪರಿಹಾರ ಇದೆ. ಇಂದಿನ ಮೊಬೈಲ್‌ ಯುಗದಲ್ಲಿ ಪುಸ್ತಕ ಸಂಸ್ಕೃತಿ ಉಳಿಸಿ, ಬೆಳೆಸುವ ಅನಿವಾರ್ಯತೆ ಇದೆ ಎಂದು ನುಡಿದರು.

ಕೃತಿಯ ಪರಿಚಯ ನೀಡಿದ ಸಾಹಿತಿ ಸಂಜೀವಕುಮಾರ ಅತಿವಾಳೆ ಮಾತನಾಡಿ, ಬಕ್ಕಪ್ಪ ನಾಗೋರೆ ತಮ್ಮ ವೃತ್ತಿ ಜತೆಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ಸಹ ಮಾಡಿದ್ದಾರೆ. ಅವರ ಜೀವನ ಚರಿತ್ರೆಯ ಪುಸ್ತಕ ಸಮಾಜ ಸೇವಕರಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು. ಸಮಾಜದಲ್ಲಿ ಅನೇಕರು ಎಲೆಮರೆಕಾಯಿಯಂತೆ ಕಾರ್ಯ ನಿರ್ವಹಿಸುತ್ತಾರೆ. ಬಕ್ಕಪ್ಪ ನಾಗೋರೆ ಅಂಥವರ ಸಾಲಿಗೆ ಸೇರುತ್ತಾರೆ. ಪುಸ್ತಕದಲ್ಲಿ ಅವರ ಜೀವನ ಮತ್ತು ಸಾಧನೆಗಳನ್ನು ಹಿಡಿದಿಡಲು ಪ್ರಯತ್ನಿಸಿದ್ದೇನೆ ಎಂದು ಕೃತಿಯ ಲೇಖಕ ಎಂ.ಜಿ. ಗಂಗನಪಳ್ಳಿ ತಿಳಿಸಿದರು.

ನಿವೃತ್ತ ಕೃಷಿ ಅಧಿಕಾರಿ ಬಕ್ಕಪ್ಪ ನಾಗೋರೆ ಅಧ್ಯಕ್ಷತೆ ವಹಿಸಿ,ಪ್ರಾಮಾಣಿಕ ಸೇವೆ ಸಲ್ಲಿಸುವವರಿಗೆ ಸಮಾಜ ಒಂದಿಲ್ಲೊಂದು ದಿನ ಗುರುತಿಸಿ ಗೌರವಿಸುತ್ತದೆ ಎಂದರು. ಯುವ ಮುಖಂಡ ಪೀರಪ್ಪ ಯರನಳ್ಳಿ, ಅಮಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾ ಕಾ ಮಲ್ಲಿಕಾರ್ಜುನ, ಮುರಳಿನಾಥ ಮೇತ್ರೆ ಮಾತನಾಡಿದರು. ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ, ಗ್ರಾಪಂ ಸದಸ್ಯ ಸಾಯಿನಾಥ ಗೋರನಳ್ಳಿ, ಪಿಡಿಒ ಶಂಕರರಾವ್‌, ಪ್ರಮುಖರಾದ ವಿಶ್ವನಾಥ ಸೋಲಪುರ, ಬಿ.ಕೆ. ಚೌಧರಿ, ಪರ್ವತ ರೆಡ್ಡಿ, ಸಂಜೀವಕುಮಾರ ಪಾಟೀಲ, ದಶರಥ ಮೇತ್ರೆ, ಕೆ.ವಿನಯ್‌ ಪಾಟೀಲ, ವಿಜಯಕುಮಾರ ಪಾಟೀಲ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.