“ಕಾವ್ಯಗಳು ಸಮಾಜದೊಳತಿಗೆ ಪ್ರೇರಣೆಯಾಗಲಿ’

ಕಾವ್ಯಗಳು ನಮ್ಮ ವಯಕ್ತಿಕ ಹಾಗೂ ವೈಚಾರಿಕ ಘನತೆ ಹೆಚ್ಚಿಸುವಂತಿರಬೇಕು.

Team Udayavani, Mar 21, 2022, 6:12 PM IST

“ಕಾವ್ಯಗಳು ಸಮಾಜದೊಳತಿಗೆ ಪ್ರೇರಣೆಯಾಗಲಿ’

ಬೀದರ: ಸಮಾಜದ ಸ್ವಾಸ್ಥ್ಯ ಕಾಪಾಡುವಂಥ ಹಾಗೂ ಹೊಸ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗುವಂಥ ಕಾವ್ಯಗಳ ರಚನೆ ಅಗತ್ಯವಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಸಲಹೆ ಮಾಡಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವುರ ಹಾಗೂ ಕರ್ನಾಟಕ ಬರಹಗಾರರ- ಕಲಾವಿದರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಬಹು ಭಾಷಾ ಕವಿಗೋಷ್ಠಿ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ಧಿಯಲ್ಲಿಯೂ ಸಾಹಿತ್ಯ ಹಾಗೂ ಸಂಸ್ಕೃತಿಯ ಪಾತ್ರ ಬಹಳಷ್ಟಿದೆ.

ಸಾಮಾಜಿಕ ಬದುಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾವ್ಯ ನಿಲ್ಲಬೇಕು. ನಮ್ಮ ಪೂರ್ವಜರು ಬಳುವಳಿಯಾಗಿ ಬಿಟ್ಟಿ ಹೋದ ಕಲೆ ಹಾಗೂ ಸಂಸ್ಕೃತಿ ಇಂದಿನ ಪೀಳಿಗೆಗೆ ಮನ ಮುಟ್ಟುವಂತೆ ತಿಳಿಸಬೇಕಿದೆ ಎಂದರು.

ಕವಿತೆ ವಿಷಯ ತಿಳಿಯುವಂತಿರಬೇಕು. ನಮ್ಮ ಮಧುರವಾದ ಸಂಬಂಧಗಳನ್ನು ಜೋಡಿಸಲು ಹಾಗೂ ಮನಸ್ಸಿಗೆ ನೆಮ್ಮದಿ ತಂದು ಕೊಡುವ ಕಾವ್ಯ ರಚನೆಯಾಗಬೇಕು. ಆದರೆ, ಇಂದಿನ ಆಧುನಿಕ ಕಾವ್ಯ ರಚನೆ ನಮ್ಮ ಜಾನಪದ ಜೀವನದ ಮೇಲೆ ಕರಿಛಾಯ ಅವರಿಸಿ, ಅರ್ಥಹೀನ ಬದುಕಿನತ್ತ ಜಾರುತ್ತಿದೆ.ಮೌಲ್ಯಗಳು ಕುಸಿಯುವ ಚಲನ ಚಿತ್ರಗಳು ಕಾಲ್ಪನಿಕ ಜಗತ್ತಿನತ್ತ ಕೊಂಡೊಯ್ಯುತ್ತಿವೆ ಎಂದರು.

ಕಾವ್ಯಗಳು ನಮ್ಮ ವಯಕ್ತಿಕ ಹಾಗೂ ವೈಚಾರಿಕ ಘನತೆ ಹೆಚ್ಚಿಸುವಂತಿರಬೇಕು. ಮೌಲ್ಯಗಳು ಅಭಿವೃದ್ಧಿಗೊಳ್ಳಬೇಕು, ಜಾತಿ, ಧರ್ಮ, ಭಾಷೆ, ಪ್ರಾಂತ, ಭಾವನೆಗಳಿಗೆ ಧಕ್ಕೆ ತರದ ರೀತಿಯ ಕಾವ್ಯ ರಚನೆಯಾಗಬೇಕು, ತಪೋ ಕಲ್ಪಿತವಾದ ಹಾಗೂ ಸಮಾಜದಲ್ಲಿ ವಿಷ ಬೀಜ ಬಿತ್ತುವ ಕಾವ್ಯಗಳಿಗೆ ಸಮಾಜ ಗೌರವ ಕೊಡಬಾರದು. ಕಾವ್ಯ ರಚನೆ ದೇಶದ್ರೋಹದ ಕಾರ್ಯಕ್ಕೆ ಸಮಾನವೆಂದು ಪ್ರತಿಪಾದಿಸಿದರು.

ಕಲಬುರಗಿ ಕೇಂದ್ರೀಯ ವಿವಿ ಕುಲಸಚಿವ ಪ್ರೊ| ಬಸವರಾಜ ಡೊಣೂರ ಮಾತನಾಡಿ, ಸಾಹಿತ್ಯ ಹಾಗೂ ಕಾವ್ಯ ಮನುಷ್ಯನ ವ್ಯಕ್ತಿತ್ವ ನಿರ್ಮಾಣ ಮಾಡುವುದಲ್ಲದೇ ದೇಶದ ವಿಕಾಸಕ್ಕೂ ಕಾರಣವಾಗುತ್ತದೆ. ಕಾವ್ಯ ರಚನೆ ಸಾಮಾಜಿಕ ಜವಾಬ್ದಾರಿ ಹೆಚ್ಚಿಸುತ್ತದೆ. ಕವಿತೆ ಮನ ಕದಿಯುವಂತಾಗಬೇಕೆ ಹೊರತು ಕದಡಬಾರದು.

ಸತ್ಯವನ್ನು ಅರಗಿಸಿಕೊಳ್ಳುವ ಹಾಗೂ ಅಸತ್ಯವನ್ನು ತಳ್ಳಿ ಹಾಕುವ ಧೆ„ರ್ಯ ಕಾವ್ಯದಲ್ಲಿರಬೇಕು. ನದಿ, ಭೂಮಿ, ಆಕಾಶ, ಕಲ್ಲು, ಮಣ್ಣು, ಮರ, ದೈವತ್ವ, ಆತ್ಮವನ್ನು ಮಾತನಾಡಿಸುವಂಥ ಕಾವ್ಯ ರಚನೆಯಾದಲ್ಲಿ ಅದು ಗಟ್ಟಿ ಕಾವ್ಯವಾಗಿ ಹೊರ ಹೊಮ್ಮುತ್ತದೆ ಎಂದರು. ಸಂಘದ ಅಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ಆಶಯ ನುಡಿಗಳನ್ನು ನುಡಿದರು. ಬರುವ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಜಾನಪದ ಸಮ್ಮೇಳನವನ್ನು ಬೀದರನಲ್ಲಿ ನಡೆಸಲಾಗುತ್ತಿದ್ದು,
15 ಸಾವಿರ ದೇಶಿಯ ಹಾಗೂ ಒಂದುವರೆ ಸಾವಿರ ವಿದೇಶಿ ಕಲಾವಿದರು ಭಾಗವಹಿಸಲಿದ್ದಾರೆ. ಬೀದರ ಗಡಿಯಲ್ಲಿ 25 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿಕ ಹಬ್‌ ಸ್ಥಾಪಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಕೇಂದ್ರೀಯ ವಿವಿ ಮುಖ್ಯಸ್ಥ ಡಾ| ಬಿ.ವಿ ಪೂಜಾರಿ ಚುಟುಕು ಕವನಗಳ ವಾಚನ ಮಾಡಿದರು. ಸಂಘದ ಉಪಾಧ್ಯಕ್ಷ ಪ್ರೊ| ಎಸ್‌.ಬಿ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ಹೊನ್ನಾ ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.