ಗ್ರಂಥಾಲಯ ಜ್ಞಾನ ವಿಸ್ತಾರದ ಕೇಂದ್ರ

Team Udayavani, Aug 28, 2022, 4:05 PM IST

12-knowlegde

ಬೀದರ: ಗ್ರಂಥಾಲಯಗಳು ಜ್ಞಾನ ವಿಸ್ತಾರದ ಕೇಂದ್ರಗಳಾಗಿದ್ದು, ವಿದ್ಯಾರ್ಥಿಗಳು ಗ್ರಂಥಾಲಯಗಳಿಗೆ ಹೋಗಿ ಪುಸ್ತಕಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು. ಆ ಮೂಲಕ ಜ್ಞಾನವೃದ್ಧಿಗೆ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಹಾಲಹಳ್ಳಿ ಜ್ಞಾನ ಕಾರಂಜಿ ಸ್ನಾತಕೋತ್ತರ ಕೇಂದ್ರದಲ್ಲಿ ನ್ಯಾಕ್‌ ಪೂರ್ವ ಸಿದ್ಧತೆ ತಾಂತ್ರಿಕ ಹಾಗೂ ದಾಖಲೀಕರಣ ಕುರಿತು ರಾಷ್ಟ್ರೀಯ ಕಾರ್ಯಾಗಾರ ಮತ್ತು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಂಥಾಲಯಗಳಿಗೆ ಹೆಚ್ಚು ಭೇಟಿ ನೀಡಿ ನೆಟ್‌ಸೆಟ್‌ ಹಾಗೂ ಜೆಆರ್‌ಎಫ್‌ ಪರೀಕ್ಷೆಗಳನ್ನು ಪಾಸಾಗಲು ಪ್ರಯತ್ನಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವೇಗ ಓದು, ವೇಗ ಬರಹ, ಗಮನ ಹರಿಸುವಿಕೆ, ಪುನಃ ಮನನ ಮತ್ತು ಸಾಮೂಹಿಕ ಚರ್ಚೆ ಮಾಡುವುದನ್ನು ಕರಗತ ಮಾಡಿಕೊಳ್ಳಬೇಕು. ಹೀಗಾದಾಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

ಗುಲಬರ್ಗಾ ವಿವಿ ಕುಲಪತಿ ಪ್ರೊ| ದಯಾನಂದ ಅಗಸರ್‌ ಮಾತನಾಡಿ, ಜ್ಞಾನ ಕಾರಂಜಿ ಸ್ನಾತಕ್ಕೋತ್ತರ ಕೇಂದ್ರವು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂಜೀವಿನಿಯಾಗಿದ್ದು, ವಿದ್ಯಾರ್ಥಿಗಳು ಈ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು. ಈ ಕೇಂದ್ರದಲ್ಲಿ ಸೇವೆ ಸಲ್ಲಿಸುವ ಉಪನ್ಯಾಸಕರಿಗೆ ಸರ್ಕಾರ ಮತ್ತು ವಿಶ್ವವಿದ್ಯಾಲಯ ಇನ್ನೂ ಹೆಚ್ಚಿನ ಜವಾಬ್ದಾರಿ ನೀಡಲಿದೆ. ಶಿಕ್ಷಕರು ಕೂಡಾ ಸ್ವತಂತ್ರರಾಗಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ವಿಶ್ರಾಂತ ಕುಲಪತಿ ಪ್ರೊ| ಬಿ.ಜಿ. ಮೂಲಿಮನಿ ಮಾತನಾಡಿ, ಪ್ರಪಂಚದಲ್ಲಿ ವಿವಿಧ ಕ್ರಾಂತಿಗಳು ನಡೆದಂತೆ ಇಂದು ಜ್ಞಾನದ ಕ್ರಾಂತಿ ನಡೆಯುತ್ತಿದೆ. ಗ್ರಂಥಾಲಯಕ್ಕೆ ಆಧುನಿಕ ಸ್ಪರ್ಶ ನೀಡಬೇಕಾಗಿದೆ. ವೈಪೈ, ಗಣಕಯಂತ್ರ ಮತ್ತು ಮೊಬೈಲ್‌ ಮೂಲಕ ಜ್ಞಾನವೃದ್ಧಿ ಆಗಬೇಕಾಗಿದೆ. ಸಮರ್ಥನೀಯ ಬೆಳವಣಿಗೆಯಿಂದ ಮಕ್ಕಳು ಜ್ಞಾನವೃದ್ಧಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ವಿವಿ ಗ್ರಂಥಪಾಲಕ ಡಾ| ಸುರೇಶ ಜಂಗೆ ಮಾತನಾಡಿದರು. ವಿವಿ ವಿದ್ಯಾ ವಿಷಯಕ ಪರಿಷತ್‌ ಸದಸ್ಯ ಬಸವರಾಜ ಪವಾರ್‌, ಯೋಗೇಶ ಎಂ.ಬಿ., ಪ್ರಾಧ್ಯಾಪಕ ಡಾ| ಮಲ್ಲಿಕಾರ್ಜುನ ಹಂಗರಗೆ ವೇದಿಕೆಯಲ್ಲಿದ್ದರು. ಡಾ| ಶಾಂತಕುಮಾರ ಚಿದ್ರಿ, ಡಾ| ರಾಮಚಂದ್ರ ಗಣಾಪುರ, ಡಾ| ಎಂ.ಎಸ್‌ ಚೆಲ್ವಾ, ಹೇಮರೆಡ್ಡಿ, ಗುರು ಶೆರಂಜೆ, ಸೋಮನಾಥ ರೇಶಟ್ಟಿ, ಶೇಖ್‌ ಸೈಯದ್‌ ಅಬ್ದುಲ್‌, ಅಭಿಜಿತ್‌ ಪಾಟೀಲ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.