ಮೆಣಸಿನಕಾಯಿಗೆ ಕೋವಿಡ್ ಘಾಟು


Team Udayavani, Apr 16, 2020, 1:23 PM IST

16-April-12

ಲಿಂಗಸುಗೂರು: ಪಟ್ಟಣದ ಹೊರಭಾಗದಲ್ಲಿ ಸಂಗ್ರಹಿಸಿಟ್ಟ ಮೆಣಸಿನಕಾಯಿ

ಲಿಂಗಸುಗೂರು: ಮೆಣಸಿನಕಾಯಿ ಬೆಳೆಗೆ ಈ ಬಾರಿ ಬೆಲೆಯಿದ್ದರೂ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಳೆದ ಬೆಳೆಯನ್ನು ಸಾಗಣೆ ಮಾಡಲು ಸಾರಿಗೆ ವ್ಯವಸ್ಥೆಯಿಲ್ಲದೆ ರೈತರು ಪರದಾಡುವಂತೆ ಆಗಿದೆ. ಪಟ್ಟಣ ಸೇರಿದಂತೆ ಆನೆಹೊಸೂರು, ಗುಡದನಾಳ, ಚಿತ್ತಾಪುರ, ಬೆಂಡೋಣಿ, ಗುರಗುಂಟಾ ಹಾಗೂ ತಾಲೂಕಿನ ಅನೇಕ ಗ್ರಾಮಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬ್ಯಾಡಗಿ ಕಡ್ಡಿಗಾಯಿ, ಡಬ್ಬಿಗಾಯಿ, ಸೀಜಂಟಾ ಸೀಡ್ಸ್‌, ಗುಂಟೂರು ತಳಿಯ ಮೆಣಸಿನಕಾಯಿ ಬೆಳೆ ಬೆಳೆಯಲಾಗಿದೆ.

ಮಳೆರಾಯನು ಕೈಕೊಟ್ಟಿದ್ದು, ನಾರಾಯಣಪುರ ಬಲದಂಡೆ, ರಾಂಪೂರ ಏತ ನೀರಾವರಿ ಯೋಜನೆ ನಾಲೆಯಲ್ಲಿ ಸಮರ್ಪಕ ನೀರಿಲ್ಲದಿದ್ದರೂ ಮೆಣಸಿನಕಾಯಿ ಬೆಳೆಯಲಾಗಿದೆ. ರೈತರು ಆಳು ಕಾಳು, ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ಇತರೆ ಖರ್ಚು ಸೇರಿದಂತೆ ಪ್ರತಿ ಎಕರೆಗೆ 1.30 ಲಕ್ಷ ರೂ. ವೆಚ್ಚ ಮಾಡುತ್ತಿದ್ದಾರೆ. ಕಡಿಮೆ ಪ್ರಮಾಣದಲ್ಲಿ ಬೆಳೆದ ರೈತರು ಹಾವೇರಿ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ತೆರಳಿ ಮಾರಾಟ ಮಾಡಿದ್ದಾರೆ. ಕೆಲವೆಡೆ ಅಧಿಕ ಪ್ರಮಾಣದಲ್ಲಿ ಮೆಣಸಿನಕಾಯಿ ಬೆಳೆದ ರೈತರು ಇದ್ದಲ್ಲಿಗೆ ದಲ್ಲಾಲಿಗಳು ಬಂದು ಖರೀದಿಸುತ್ತಾರೆ. ಆದರೆ ಈ ಬಾರಿ 20ರಿಂದ 30 ಸಾವಿರ ರೂ. ವರೆಗೆ ಬೆಲೆ ಇತ್ತು.

ಕೊರೊನಾ ಸೋಂಕು ಹರಡದಿರಲು ದೇಶವೇ ಲಾಕ್‌ಡೌನ್‌ ಆಗಿದ್ದರಿಂದ ಸಾರಿಗೆ ಸಂಚಾರ ಮತ್ತು ಮಾರುಕಟ್ಟೆ ಎಲ್ಲವೂ ಸ್ತಬ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ರೈತರು 400ಕ್ಕೂ ಹೆಚ್ಚು ಕ್ವಿಂಟಲ್‌ ಮೆಣಸಿನಕಾಯಿ ಸಂಗ್ರಹ ಮಾಡಿಕೊಂಡು ಇಟ್ಟುಕೊಂಡಿದ್ದಾರೆ. ಇದ್ದ ಬೆಳೆ ಸಂರಕ್ಷಿಸುವುದು ಇಲ್ಲಿನ ರೈತರಿಗೆ ಸವಾಲಿನ ಪ್ರಶ್ನೆಯಾಗಿದೆ. ಮೆಣಸಿನಕಾಯಿ ಸಂಗ್ರಹಿಸಲು ಕೋಲ್ಡ್‌ ಸ್ಟೋರೇಜ್‌ ಕೂಡ ಇಲ್ಲ. ಇದರಿಂದ ರೈತರು ತಮ್ಮ ಬೆಳೆಯನ್ನು ರಕ್ಷಣೆ ಮಾಡಲು ಆಪ್‌ ಹೊದಿಸಿದ್ದಾರೆ.

ಈ ಬಾರಿ ಮೆಣಸಿನಕಾಯಿ ಇಳುವರಿ ಹಾಗೂ ಬೆಲೆಯೂ ಚೆನ್ನಾಗಿಯೂ ಇತ್ತು. ಆದರೆ ಕೊರೊನಾ ಪರಿಣಾಮದಿಂದ ಲಾಕ್‌ಡೌನ್‌ ಆಗಿ ಮಾರುಕಟ್ಟೆ ಹಾಗೂ ಸಾರಿಗೆ ವ್ಯವಸ್ಥೆ ಬಂದ್‌ ಆಗಿದ್ದರಿಂದ ಸಂಕಷ್ಟ ಎದುರಾಗಿದೆ.
ಶ್ರೀನಿವಾಸ, ರೈತ

ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.