ಸಾಲ ಮನ್ನಾ; ರೈತರ ಖಾತೆ ಪರಿಶೀಲನೆ ಸಮರೋಪಾದಿಯಲ್ಲಿ ನಡೆಸಲು ಸಲಹೆ


Team Udayavani, Oct 23, 2020, 7:27 PM IST

BIDARA-TDY-1

ಬೀದರ: ಸಹಕಾರ ಸಂಘಗಳಲ್ಲಿನ 1 ಲಕ್ಷ ರೂ. ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇರುವ ರೈತರ ಅರ್ಹತೆ ಗುರುತಿಸುವುದಕ್ಕೆ ಸಂಬಂಧಿಸಿದಂತೆ ರೈತರ ಖಾತೆ ಪರಿಶೀಲನಾ ಕಾರ್ಯ ಜಿಲ್ಲಾದ್ಯಂತ ಸಮರೋಪಾದಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಡಿಸಿ ರಾಮಚಂದ್ರನ್‌ ಆರ್‌. ತಿಳಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಸಹಾಯಕ ಆಯುಕ್ತರು ಹಾಗೂ ಎಲ್ಲ ತಹಶೀಲ್ದಾರರ ಜತೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಸಹಕಾರ ಸಂಘಗಳಲ್ಲಿನ ಸಾಲ ಮನ್ನಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಈಗಾಗಲೇ ಜಿಲ್ಲಾ, ತಾಲೂಕು ಮಟ್ಟದ ಸಮಿತಿ ರಚಿಸಲಾಗಿದೆ. 2018ರ ಜು.5ರ ನಂತರ ಹೊಸದಾಗಿ ಪಡಿತರ ಚೀಟಿ ಪಡೆದು ಅದರಲ್ಲಿ ಒಬ್ಬನೇ ಸದಸ್ಯನಿದ್ದಲ್ಲಿ ಅಂತಹ ರೈತರ ಅರ್ಹತೆ ತಾಲೂಕು ಮಟ್ಟದ ಸಮಿತಿಯಲ್ಲಿ ಪರಿಶೀಲಿಸಿ ನಂತರ ಅರ್ಹತೆ ಗುರುತಿಸಲು ತಿಳಿಸಲಾಗಿದೆ ಎಂದರು.

ಸಹಾಯಕ ಆಯುಕ್ತರು ಮತ್ತು ತಾಲೂಕು ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಸುತ್ತೋಲೆಯಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಕ್ರಮ ವಹಿಸಬೇಕು. ಒಂದೇ ಕುಟುಂಬದಲ್ಲಿ ವಾಸವಿರುವ ರೈತರು ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದಲ್ಲಿ ಇದನ್ನು ಪರಿಶೀಲಿಸಿ, ಮೊದಲು ಗಡುವು ಬರುವ ಸಾಲಗಳಿಗೆ 1 ಲಕ್ಷ ರೂ. ಮಿತಿಗಳಿಗೆ ಒಳಪಟ್ಟು ಖಾತೆ ಪರಿಗಣಿಸಲು ಹಾಗೂ ಉಳಿದ ಖಾತೆಗಳನ್ನು ಸಮಿತಿ ತಿರಸ್ಕರಿಸಲು ಸೂಚನೆ ನೀಡಲಾಗಿದ್ದು, ತಾಲೂಕು ಸಮಿತಿಯು ಕಾಲಮಿತಿ ಒಳಗೆ ಪೂರ್ಣಗೊಳಿಸಲು ಒತ್ತು ಕೊಡಬೇಕು ಎಂದರು.

ಒಬ್ಬನೇ ವ್ಯಕ್ತಿ ಎರಡು ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಲ್ಲಿ ಮೊದಲು ಗಡುವು ಬರುವ ಸಹಕಾರ ಸಂಘ ಬ್ಯಾಂಕ್‌ಗಳಲ್ಲಿ ಸಾಲ ಮನ್ನಾ ಅರ್ಹ ಮೊತ್ತವನ್ನಾಗಿ ಪರಿಗಣಿಸುವುದು. ಒಂದೇ ಸಂಘದಲ್ಲಿ ಎರಡು ಖಾತೆ ಹೊಂದಿದ್ದರೆ ಸಹಕಾರ ಸಂಘ ಅಥವಾ ಬ್ಯಾಂಕಿನ ಶಾಖೆ ರಿಜೆಕ್ಟ್ ಮಾಡಿರುವ ಕಾಲಂ 52 ಖಾತೆ ಪರಿಗಣಿಸದೇ ಇಲಾಖಾ ಧಿಕಾರಿಗಳಿಂದ ಅಂತಿಮವಾಗಿ ದೃಢೀಕೃತವಾಗಿರುವ ಒಂದು ಖಾತೆ ಪರಿಗಣಿಸುವುದು ಎನ್ನುವ ನಿರ್ದೇಶನ ಪಾಲನೆಯಾಗುವಂತೆ ನೋಡಕೊಳ್ಳಬೇಕು. ತಾಲೂಕು ಸಮಿತಿ ಬಾಕಿ ಇರುವ ಪರಿಶೀಲನಾ ದಾಖಲೆ ಅಪ್‌ಲೋಡ್‌ ಮಾಡಲು ತಕ್ಷಣ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಈ ವೇಳೆ ಅಪರ ಡಿಸಿ ರುದ್ರೇಶ ಗಾಳಿ, ಸಹಾಯಕ ಆಯುಕ್ತೆ ಗರೀಮಾ ಪನ್ವಾರ, ತಹಶೀಲ್ದಾರ್‌ ಗಂಗಾದೇವಿ, ಡಿಸಿಸಿ ಬ್ಯಾಂಕ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

death

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

muddy

ಆರು ಭಾಷೆಗಳಲ್ಲಿ ತೆರೆಕಾಣುತ್ತಿದೆ ‘ಮಡ್ಡಿ’

1-asds-a

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ; 18 ರ ತರುಣ ಸಾವು

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

h d kumaraswamy

ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ.. ಆಟ ಈಗ ಆರಂಭ..!: ಎಚ್ ಡಿಕೆ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಸಿಎಂ ಬೊಮ್ಮಾಯಿ

ರಾಜ್ಯಕ್ಕೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26headmaster

ಮುಖ್ಯೋಪಾಧ್ಯಾಯರ ಸಂಘಕ್ಕೆ ಕಪಲಾಪುರೆ ಅಧ್ಯಕ್ಷ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

15training

ಶರಣಬಸವ ಕಾಲೇಜಿನಲ್ಲಿ ತರಬೇತಿ ಶಿಬಿರ

14healthcamp

ಆರೋಗ್ಯ ಶಿಬಿರ ಗ್ರಾಮೀಣರಿಗೆ ಸಹಕಾರಿ

13election

ಚುನಾವಣಾ ಸೂಕ್ಷ್ಮ ವೀಕ್ಷಕರಿಗೆ ತರಬೇತಿ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

death

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

omicron

ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ:ಒಮಿಕ್ರಾನ್‌ ಭೀತಿ; ಮಾಸ್ಕ್ ಧರಿಸದಿದ್ದರೆ ದಂಡ

muddy

ಆರು ಭಾಷೆಗಳಲ್ಲಿ ತೆರೆಕಾಣುತ್ತಿದೆ ‘ಮಡ್ಡಿ’

ನಗರಸಭೆ ಹೊರಗುತ್ತಿಗೆ ಸಿಬ್ಬಂದಿಗಳಿಂದ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ನಗರಸಭೆ ಹೊರಗುತ್ತಿಗೆ ಸಿಬ್ಬಂದಿಗಳಿಂದ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂಘದಿಂದ ಸಮಾಜ ಬಾಂಧವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ: ಮುರಳಿ ಕೆ. ಶೆಟ್ಟಿ

ಸಂಘದಿಂದ ಸಮಾಜ ಬಾಂಧವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ: ಮುರಳಿ ಕೆ. ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.