ಮರಾಠಾ ಮತಗಳತ್ತ ಈಗ ಎಲ್ಲರ ಚಿತ್ತ!


Team Udayavani, Apr 4, 2021, 7:25 PM IST

lkjhgfryuhg

ಬೀದರ: ಮರಾಠಾ ಸಮಾಜದ ಪ್ರಬಲ ನಾಯಕ, ಮಾಜಿ ಶಾಸಕ ಎಂ.ಜಿ ಮುಳೆ ನಾಮಪತ್ರ ವಾಪಸ್‌ದಿಂದ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಮಹತ್ವದ ತಿರುವು ಪಡೆದಿದೆ. ಮರಾಠಾ ಸಮಾಜ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವುದು ಪಕ್ಷಕ್ಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಹಾಗಾಗಿ ಕ್ಷೇತ್ರದಲ್ಲಿ ನಿರ್ಣಾಯಕ ಮತಗಳಾಗಿರುವ ಮರಾಠಾ ವೋಟುಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಯಾರಿಗೆ ಬೆಂಬಲ ಸೂಚಿಸುತ್ತಾರೆ ಎಂಬ ಕುತೂಹಲ ಮೂಡಿದೆ.

ಈ ಹಿಂದೆ 1999ರಲ್ಲಿ ಜಾತ್ಯತೀತ ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎಂ.ಜಿ ಮುಳೆ ನಂತರ ಕಾಂಗ್ರೆಸ್‌ ಸೇರಿದ್ದರು. ಆ ಬಳಿಕ ಸೋಲುಂಡು ಮತ್ತೆ ಜೆಡಿಎಸ್‌ನಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆಗೆ ಟಿಕೆಟ್‌ ಕೈತಪ್ಪಿದ್ದರಿಂದ ಎನ್‌ಸಿಪಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ, ಶನಿವಾರ ಕೊನೆ ಗಳಿಗೆಯಲ್ಲಿ ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಬಿಜೆಪಿ ನಾಯಕರ ಒತ್ತಡದಿಂದ ಮುಳೆ ಈ ನಿರ್ಣಯಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಆರಂಭದಲ್ಲಿ ಮುಳೆ ಸ್ಪರ್ಧೆಯಿಂದ ಸಾಂಪ್ರದಾಯಿಕ ಮತಗಳಾಗಿರುವ ಮರಾಠಾ ಸಮಾಜದ ಮತಗಳು ಕೈತಪ್ಪಬಹುದೆಂದು ಬಿಜೆಪಿ ಪಾಳಯಕ್ಕೆ ಆತಂಕ ಇತ್ತು. ಆದರೆ, ಶುಕ್ರವಾರ ಉಪ ಚುನಾವಣೆ ಕುರಿತು ಚರ್ಚಿಸಲು ಜರುಗಿದ ಮರಾಠಾ ಸಮಾಜದ ಸಭೆಗೆ ಆಗಮಿಸಿದ್ದ ಸಂಸದ ಮತ್ತು ಬಸವಕಲ್ಯಾಣದ ಕ್ಷೇತ್ರದ ಉಸ್ತುವಾರಿಯೂ ಆಗಿರುವ ಸಂಸದ ಭಗವಂತ ಖೂಬಾಗೆ ಘೇರಾವ್‌ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ವಾಪಸ್‌ ಕಳುಹಿಸಲಾಗಿತ್ತು. ಅಷ್ಟೇ ಅಲ್ಲ ಎನ್‌ಸಿಪಿಯ ಮುಳೆ ಅವರನ್ನು ಬೆಂಬಲಿಸಲು ಸಹ ಸಮಾಜ ನಿರ್ಧರಿಸಿತ್ತು. ಹಾಗಾಗಿ ಮುಳೆ ಕಣದಿಂದ ಹಿಂದಕ್ಕೆ ಸರಿದರೂ ಮರಾಠಿಗರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದರಿಂದ ಈಗ ಸಮಾಜದ ವೋಟ್‌ಗಳು ಯಾವ ಪಕ್ಷ, ಅಭ್ಯರ್ಥಿ ಪಾಲಾಗಬಹುದು ಎಂಬ ಗೊಂದಲ ಸೃಷ್ಟಿಯಾಗಿದೆ.

ಸಮಾಜದ ಮುನಿಸಿಗೆ ಕಾರಣ?: ಬಿಜೆಪಿ ಸರ್ಕಾರ ಮರಾಠಾ ಸಮಾಜ ನಿರ್ಲಕ್ಷಿಸುವುದರ ಜತೆಗೆ ಅನ್ಯಾಯ ಮಾಡುತ್ತಿದೆ. ಅ ಧಿಕಾರಕ್ಕೆ ಬರುವ ಮುನ್ನ ಸಮಾಜವನ್ನು 2ಎಗೆ ಸೇರಿಸುವ ಭರವಸೆ ನೀಡಲಾಗಿತ್ತು. ಆದರೆ, ಈಗ ಸರ್ಕಾರ ಆಶ್ವಾಸನೆ ಮರೆತಿದೆ. ಮರಾಠಾ ಅಭಿವೃದ್ಧಿ ಮಂಡಳಿ ಸ್ಥಾಪನೆ ಸಹ ಪೂರ್ಣ ಪ್ರಮಾಣದಲ್ಲಿ ಮಾಡಿಲ್ಲ. ಬಸವಕಲ್ಯಾಣದಲ್ಲಿ ಶಿವಾಜಿ ಪಾರ್ಕ್‌ ಸ್ಥಾಪನೆ ಬೇಡಿಕೆ ಈಡೇರಿಸಲ್ಲ. ಇದು ಬಿಜೆಪಿ ವಿರುದ್ಧ ಸಮಾಜದ ಮುನಿಸಿಗೆ ಕಾರಣವಾಗಿದೆ.

ಒಂದೆಡೆ ಬೆಂಬಲ ಸೂಚಿಸಿದ್ದ ಎನ್‌ಸಿಪಿಯ ಮುಳೆ ನಾಮಪತ್ರ ಹಿಂಪಡೆದಿರುವುದು ಮತ್ತು ಬಿಜೆಪಿ ವಿರುದ್ಧ ಅತೃಪ್ತಗೊಂಡಿರುವ ಮರಾಠಾ ಸಮಾಜ ಯಾರನ್ನು ಬೆಂಬಲಿಸಬಹುದು ಎಂಬುದು ನಿಗೂಢ. ಬಿಜೆಪಿ ವಿರುದ್ಧ ಬಂಡೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪ ರ್ಧಿಸಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪರ ಮತಗಳು ವಾಲಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಇದರಿಂದ ಬಸವಣ್ಣನ ಕರ್ಮಭೂಮಿಯಲ್ಲಿ ಕಮಲ ಅರಳಿಸಿ ಕ್ಷೇತ್ರದಲ್ಲಿ ಹಿಡಿತ ಸಾ ಧಿಸಲು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ದಟ್ಟವಾಗಿದೆ.

-ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.