ಖುಷಿ ಹೆಸರಲ್ಲಿ ಸಿಲಿಂಡರ್‌ ವಿತರಕರ ಸುಲಿಗೆ

ಗ್ಯಾಸ್‌ ಏಜೆನ್ಸಿಗಳಿಂದ ಅಕ್ರಮ ದಂಧೆ

Team Udayavani, Oct 8, 2021, 12:54 PM IST

Untitled-1

ಬೀದರ: ದಿನದಿಂದ ದಿನಕ್ಕೆ ಅಡುಗೆ ಅನಿಲ (ಗ್ಯಾಸ್‌) ಏರಿಕೆಯಾಗಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಮತ್ತೂಂದೆಡೆ ಸಿಲಿಂಡರ್‌ ಸಾಗಾಣಿಕೆ (ಡೋರ್‌ ಡಿಲೆವರಿ) ಶುಲ್ಕ ವಸೂಲಿ ಹೆಸರಿನಲ್ಲಿ ಗ್ಯಾಸ್‌ ಏಜೆನ್ಸಿಗಳು ಹಗಲು ದರೋಡೆಗೆ ಇಳಿದಿರುವುದು ಜಿಲ್ಲೆ ಗ್ರಾಹಕರನ್ನು ತತ್ತರಿಸುವಂತೆ ಮಾಡಿದೆ. ಆದರೆ, ಸುಲಿಗೆಗೆ ಕಡಿವಾಣ ಹಾಕಬೇಕಾದ ಆಡಳಿತ ಮೌನ ವಹಿಸಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ ಗಗನಮುಖೀಯಾಗಿ ಅಡುಗೆ ಮನೆ ದುಬಾರಿಯಾಗುತ್ತಿದೆ. ಇದರಿಂದ ಜನ ಸಾಮಾನ್ಯ ಗ್ರಾಹಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ ಇತ್ತ ಮನೆ ಬಾಗಿಲಿಗೆ ಸಿಲಿಂಡರ್‌ ವಿತರಿಸಲು ಗ್ಯಾಸ್‌ ಏಜೆನ್ಸಿಗಳು ಹಲವು ವರ್ಷಗಳಿಂದ ಶುಲ್ಕ ವಸೂಲಾತಿ ದಂಧೆ ನಡೆಸುತ್ತಿರುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯಾಪ್ತಿಗೆ ಒಳಪಡುವ ಗ್ಯಾಸ್‌ ಏಜೆನ್ಸಿಗಳು ಇಲಾಖೆಯ ನಿಯಮಗಳನ್ನು ಗಾಳಿಗೆ ತೂರುತ್ತಿದ್ದು, ಏಜೆನ್ಸಿಗಳ ನೌಕರರು ಖುಷಿ ಹೆಸರಲ್ಲಿ ಅಕ್ರಮವಾಗಿ ಸಿಲಿಂಡರ್‌ ಬಳಕೆದಾರರಿಂದ ಹಣ ಕೀಳುತ್ತಿರುವುದು ಅವ್ಯಾಹತವಾಗುತ್ತಿದೆ.

ಗ್ಯಾಸ್‌ ಸಿಲಿಂಡರ್‌ ಸ್ಫೋಟಕ ಅನಿಲ ಆಗಿದೆ. ಹಾಗಾಗಿ ಗೋದಾಮಿನಲ್ಲಿ ಸಂಗ್ರಹಿಸಿಡುವ ಸಿಲಿಂಡರ್‌ನ್ನು ಬೇಡಿಕೆಯಂತೆ ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಇಳಿಸಬೇಕು. ರಸ್ತೆ ಬದಿ ಎಲ್ಲೆಂದರಲ್ಲಿ ವಿತರಿಸಬಾರದು. ಜತೆಗೆ ಶುಲ್ಕ ಕುರಿತಂತೆ ಸಹ ಅಗತ್ಯ ನಿಯಮಗಳನ್ನು ರೂಪಿಸಿದೆ. ಇದನ್ನರಿತ ಗ್ರಾಹಕರು ಕೆಲವೊಮ್ಮೆ ನೌಕರರಿಗೆ ಪ್ರಶ್ನೆ ಮಾಡಿದರೆ ಸಿಲಿಂಡರ್‌ ಪೂರೈಕೆ ವಿಳಂಬ ಮಾಡಿ ತೊಂದರೆ ಕೊಡುವುದು ಸಾಮಾನ್ಯವಾಗಿದೆ. ಈ ಅವ್ಯವಹಾರದ ಬಗ್ಗೆ ಏಜನ್ಸಿ ಮಾಲೀಕರುಗಳಿಗೆ ಮಾಹಿತಿ ಇದ್ದರೂ ಸಹ ಸಿಲೆಂಡರ್‌ ವಿತರಕರ ವಿರುದ್ಧ ಕ್ರಮ ಕೈಗೊಳ್ಳದೇ ಪರೋಕ್ಷ ಬೆಂಬಲಕ್ಕೆ ನಿಂತಿದ್ದಾರೆ. ಅಷ್ಟೇ ಅಲ್ಲ ದಂಧೆ ತಡೆಯಬೇಕಾದ ಅಧಿಕಾರಿ ವರ್ಗ ಈ ಅಕ್ರಮದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ಜನರ ಆರೋಪ.

ಇನ್ನೂ ಉಜ್ವಲ್‌ ಯೋಜನೆ ಮತ್ತು ಅನಿಲ ಭಾಗ್ಯ ಯೋಜನೆ ಮೂಲಕ ಸರ್ಕಾರಗಳು ಬಡ ಕುಟುಂಬಗಳಿಗೆ ಗ್ಯಾಸ್‌ ಸಂಪರ್ಕ ಕಲ್ಪಿಸಿವೆ. ಈ ಮಹತ್ವಕಾಂಕ್ಷಿ ಕಾರ್ಯಕ್ರಮದದಿಂದ ಫಲಾನುಭವಿಗಳ ಮನೆ ಬಾಗಿಲಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್‌ಗಳು ಸೇರಬೇಕು. ಆದರೆ, ಏಜೆನ್ಸಿ ಕಾರ್ಮಿಕರು “ಖುಷಿ’ ಹೆಸರಿನಲ್ಲಿ 50ರಿಂದ 100 ರೂ.ವರೆಗೆ ಹಣ ಪಡೆದು ಗ್ರಾಹಕರಿಗೆ ಮೋಸ ಮಾಡಿದ್ದಾರೆ. ಗ್ರಾಮೀಣ ಭಾಗದ ಫಲಾನುಭವಿಗಳನ್ನು ಗುಂಪುಗಳಾಗಿ ಕರೆದುಕೊಂಡು ಬಂದು ಪ್ರತಿಯೊಬ್ಬರಿಂದ 500 ರೂ.ವರೆಗೆ ಹಣ ದೋಚಿರುವ ಆರೋಪಗಳು ಹೆಚ್ಚಿವೆ.

ಸಿಲಿಂಡರ್‌ ಡೋರ್‌ ಡಿಲೆವರಿಗಾಗಿ ಆಹಾರ ಇಲಾಖೆ ಅಗತ್ಯ ನಿಯಮಗಳನ್ನು ರೂಪಿಸಿ ಪ್ರತಿ ಏಜೆನ್ಸಿಗಳ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅದರಂತೆ 5 ಕಿ.ಮೀ. ವರೆಗೆ ಗ್ರಾಹಕರ ಮನೆಗಳಿಗೆ ಸಿಲೆಂಡರ್‌ಗಳನ್ನು ಉಚಿತವಾಗಿ ಸರಬರಾಜು ಮಾಡಬೇಕು. ನಂತರ ಒಂದು ಕಿ.ಮೀ.ಗೆ ಶುಲ್ಕ ನಿಗದಿ ಮಾಡಲಾಗಿದೆ. ಆದರೂ, ಈ ನಿಯಮಗಳನ್ನು ಉಲ್ಲಂಘಿಸಿ ಗ್ರಾಹಕರನ್ನು ಸುಲಿಗೆ ಮಾಡಲಾಗುತ್ತಿದೆ. ಏಜೆನ್ಸಿಯ ವಿತರಕ ಕಾರ್ಮಿಕರು ಬಿಲ್‌ಗಿಂತ 20ರಿಂದ 40 ರೂ. ವರೆಗೆ ಹೆಚ್ಚುವರಿ ಹಣ ಪಡೆದು ವಂಚಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಂತೂ ಮನಬಂದಂತೆ ಹಣ ಪಡೆಯಲಾಗುತ್ತಿದೆ. ಗ್ರಾಹಕರಿಗೆ ಇದು ಸಾಮಾನ್ಯವೆಂದು ಒಪ್ಪಿಕೊಂಡಿರುವುದರಿಂದ ಹೆಚ್ಚುವರಿ ಹಣ ತೆರಬೇಕಾದ ಇಕ್ಕಟ್ಟಿಗೆ ಸಿಲುಕಿದ್ದಾರೆ.

11ರಂದು ಏಜೆನ್ಸಿಗಳ ಜತೆ ಸಭೆ ಗ್ಯಾಸ್‌ ಸಿಲಿಂಡರ್‌ಗಳನ್ನು ಮನೆಗಳಿಗೆ ವಿತರಣೆಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಕುರಿತು ದೂರುಗಳು ಕೇಳಿ ಬಂದಿವೆ. ಈ ಹಿಂದೆ ಏಜೆನ್ಸಿ ಮಾಲೀಕರುಗಳ ಜತೆಗೆ ಸಭೆ ನಡೆಸಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿತ್ತು. ಅ.11ರಂದು ಮತ್ತೊಮ್ಮೆ ಸಭೆ ನಡೆಸಲಾಗುವುದು. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ವಹಿಸಲಾಗುವುದು.
ಬಾಬು ರೆಡ್ಡಿ, ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಬೀದರ್

ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.