ರೋಬೋಟ್‌ ತಂತ್ರಜ್ಞಾನದಿಂದ ಹೆಚ್ಚಿನ ಕೆಲಸ

Team Udayavani, Feb 24, 2019, 8:55 AM IST

bid-2.jpg

ಬೀದರ: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಮುಂದುವರೆದಂತೆಲ್ಲ ಹೊಸ ಆವಿಷ್ಕಾರ ಮಾಡಲಾಗುತ್ತಿದೆ. ಇಂದಿನ ದಿನಗಳಲ್ಲಿ ರೋಬೋಟ್‌ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸುವ ಕಾರ್ಯಕ್ಕೆ ಮಹತ್ವ ನೀಡಲಾಗುತ್ತಿದೆ ಎಂದು ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ವಿ. ಹಲಸೆ ತಿಳಿಸಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಶನಿವಾರ ಎಲೆಕ್ಟ್ರಾನಿಕ್‌ ವಿಭಾಗದಿಂದ ಮಾನವ ಯಂತ್ರ (ರೋಬೋಟ್‌) ತಂತ್ರಜ್ಞಾನ ಮತ್ತು ಗಣಕಯಂತ್ರದ ಮೇಲೆ ಎಲೆಕ್ಟ್ರಾನಿಕ್‌ ಸರ್ಕ್ನೂಟ್‌ ಜೋಡಣೆ ಕುರಿತು ಆಯೋಜಿಸಿದ್ದ ಎರಡು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ರೋಬೋಟ್‌ ತಂತ್ರಜ್ಞಾನದಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹಾಗೂ ಸಮಯ ಉಳಿತಾಯ ಮಾಡಲು ಸಾಧ್ಯ ಎಂದು ಹೇಳಿದರು.

ತಾಂತ್ರಿಕ ಬೆಳವಣಿಗೆಯಿಂದ ಮನುಷ್ಯನಿಗೆ ಸಂಶೋಧನೆಗೆ ಉಪಯುಕ್ತವಾಗುತ್ತಿದೆ. ಕೆಲಸ ಕಾರ್ಯಗಳ ಗುಣಮಟ್ಟ ಸುಧಾರಿಸುತ್ತಿದೆ. ನೂರಾರು ಕಾರ್ಮಿಕರ ಕೆಲಸವನ್ನು ಒಂದೇ ಯಂತ್ರ ಮಾಡುವುದರಿಂದ ಒಟ್ಟಿಗೆ ಹಲವಾರು ಕೆಲಸಗಳು ಸುಗಮವಾಗಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಎಲೆಕ್ಟ್ರಾನಿಕ್‌ ವಸ್ತುಗಳ ಪುನರ್ಬಳಕೆಯಿಂದ ಹೊಸ ಹೊಸ ಆವಿಷ್ಕಾರಗಳು ಹೊರ ಹೊಮ್ಮುತ್ತವೆ. ಹೊಸ ಹೊಸ ಸಾಫ್ಟವೇರ್‌ಗಳು ಬೆಳಕಿಗೆ ಬಂದು ಸಂಶೋಧನಾ ಪ್ರಮಾಣದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಾಗಿ ಹೊಸ ತಂತ್ರಜ್ಞಾನ ಕುರಿತು ತಿಳಿದುಕೊಳ್ಳುವ ಮೂಲಕ ಹೊಸ ಸಂಶೋದನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಬಸವರಾಜ.ಜಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಬೋಟ್‌ ತಂತ್ರಜ್ಞಾನದಿಂದ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಿಸುತ್ತದೆ. ಆಡಳಿತ ನಿರ್ವಹಣೆ ಬಲಗೊಳ್ಳುತ್ತದೆ. ವಿದ್ಯಾರ್ಥಿಗಳಲ್ಲಿ ಸಂಶೋಧನಾ ಸಾಮರ್ಥ್ಯ ಹೆಚ್ಚಾಗಿ ಯುವ ವಿಜ್ಞಾನಿಗಳ ಸಂಖ್ಯೆ ಹೆಚ್ಚಾಗಲು ಸಾಧ್ಯವಿದೆ ಎಂದು ಪ್ರತಿಪಾದಿಸಿದರು. ಪುಣೆ ಎಲೆಕ್ಟ್ರಾನಿಕ್‌ ವಿಭಾಗದ ಸಂಪನ್ಮೂಲ ವ್ಯಕ್ತಿ ದೀಪಕ ಶೆಟ್ಟೆ ಮಾತನಾಡಿ, ಕೈಗಾರಿಕೋದ್ಯಮ ಅಭಿವೃದ್ಧಿಯಾಗಲು ರೋಬೋಟ್‌ ತಂತ್ರಜ್ಞಾನ ಬಹು ಉಪಯುಕ್ತ. ಜೊತೆಗೆ ನಿರಿಕ್ಷೆಗೂ ಮೀರಿ ವಸ್ತುಗಳ ಪಾರದರ್ಶಕತೆ ಇದರಿಂದ ಸಾಧ್ಯ ಎಂದರು. 

ಕರ್ನಾಟಕ ಕಾಲೇಜಿನ ಎಲೆಕ್ಟ್ರಾನಿಕ್‌ ವಿಭಾಗದ ಮುಖ್ಯಸ್ಥ ಪ್ರೊ| ರಾಜೇಂದ್ರ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯ ಡಾ| ಎಂ.ಎಸ್‌. ಪಾಟೀಲ, ರವಿಶಂಕರ ಸೂರ್ಯವಂಶಿ, ಎಲೆಕ್ಟ್ರಾನಿಕ್‌ ವಿಭಾಗದ ಪ್ರಾಧ್ಯಾಪಕ ಅನಿಲಕುಮಾರ ಚಿಕಮಣ್ಣೂರ್‌, ಆರ್‌.ಎಚ್‌. ಪಾಟೀಲ, ಸಂಸ್ಥೆ ಸಂಯೋಜನಾಧಿಕಾರಿ ಅಭಯಕುಮಾರ ಪಾಟೀಲ, ಸೋಮನಾಥ ಬಿರಾದಾರ ಇತರರಿದ್ದರು. 

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.