Udayavni Special

ಅಭಿವೃದ್ಧಿ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ: ಪಾಟೀಲ


Team Udayavani, Aug 16, 2017, 1:03 PM IST

bidar 2.jpg

ಹುಮನಾಬಾದ: ಸ್ವಾತಂತ್ರ್ಯದ 71ನೇ ವರ್ಷಾಚರಣೆ ಮಾಡುತ್ತಿರುವ ಭಾರತ ಇಂದು ಆಧುನಿಕತೆಯಿಂದ ಮುಂದೆ ನಡೆಯುತ್ತಿದೆ. ಎಲ್ಲಾ ಅಭಿವೃದ್ಧಿ ರಾಷ್ಟ್ರಗಳಂತೆ ನಮ್ಮ ಭಾರತ ಕೂಡ ಗುರುತಿಸಿಕೊಳ್ಳುತ್ತಿದೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಪ್ರಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದೇಶ ಪ್ರೇಮ ಮೈಗೂಡಿಸಿಕೊಂಡು ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ವೀರರನ್ನು ಸ್ಮರಿಸಬೇಕು ಎಂದರು. ಗ್ರಾಮೀಣಾಭಿವೃದ್ಧಿ ಸಚಿವರ ಭೇಟಿ ಸಂದರ್ಭದಲ್ಲಿ ಶೌಚಾಲಯಗಳ ನಿರ್ಮಾಣದಲ್ಲಿ ಬೀದರ ಜಿಲ್ಲೆ ಹಿಂದುಳಿದಿರುವ ಕುರಿತು ತಿಳಿಸಿದ್ದು, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ, ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ ಹಾಗೂ ಶಾಸಕರು ಸೇರಿ ಶೌಚಾಲಯ ನಿರ್ಮಾಣಕ್ಕೆ ಜನರಲ್ಲಿ ಜಾಗೃತಿ ಮೂಡಿಸು ಕೆಲಸ ಮಾಡುವಂತೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನೂ ಕೂಡ ಹಮ್ಮಿಕೊಳ್ಳಲಾಗುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕುಟುಂಬಗಳ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಸಮುದಾಯದ ಜನರು ಯೋಜನೆಯ ಲಾಭ ಪಡೆಯಬೇಕು ಎಂದು ಹೇಳಿದರು. ಇದೇ ವೇಳೆ ತ್ಮಹತ್ಯೆ ಮಾಡಿಕೊಂಡ ಇಬ್ಬರು ರೈತರ ಕುಟುಂಬಗಳಿ ತಲಾ ಐದು ಲಕ್ಷ ರೂ. ಚೆಕ್‌, ಹಾವು ಕಚ್ಚಿ ಮೃತಪಟ್ಟ ವ್ಯಕ್ತಿಯ ಕಟುಂಬಕ್ಕೆ ಒಂದು ಲಕ್ಷ, ಮುಜುರಾಯಿ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಯೋಜನೆ ಫಲಾನುಭವಿಗಳಿಗೆ ಚೆಕ್‌ ವಿತರಿಸಲಾಯಿತು. ಇದಕ್ಕೂ ಮುನ್ನ ತಹಶೀಲ್ದಾರ ದೇವೆಂದ್ರಪ್ಪಾಪಾಣಿ ಧ್ವಜಾರೋಹಣ ನೇರೆವರಿಸಿದರು. ಡಾ| ಜಯಕುಮಾರ ಸಿಂಧೆ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷೆ ರಾಧಾ ಮಾಳಪ್ಪ, ತಾಪಂ ಅಧ್ಯಕ್ಷ ರಮೇಶ ಡಾಕುಳಗಿ, ಉಪಾಧ್ಯಕ್ಷೆ ಸುಗಂದಾ ಸೀತಾಳಗೇರಾ, ಎಪಿಎಂಸಿ ಅಧ್ಯಕ್ಷ ಡಾ| ಭದ್ರೇಶ ಪಾಟೀಲ, ಜಿಪಂ ಸದಸ್ಯ ಲಕ್ಷ್ಮಣರಾವ್‌ ಬುಳ್ಳಾ, ಶಂಕರ ರೆಡ್ಡಿ, ಮನೋಜ ಕೌಟೆಕರ್‌, ಸಿಪಿಐ ಜೆ.ಎಂ. ನ್ಯಾಮೇಗೌಡರ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಲ್ಲಿಕಾರ್ಜುನ ಮಾಶೆಟ್ಟಿ, ತಾಪಂ ಇಒ ಡಾ|ಗೋವಿಂದ, ಪುರಸಭೆ ಸದಸ್ಯರಾದ ವಿನಾಯಕ ಯಾದವ, ಅಫ್ಸರ್ ಮಿಯ್ಯಾ, ಕೃಷಿ ಅಧಿಕಾರಿ ಡಾ| ಪಿ.ಎಂ. ಮಲ್ಲಿಕಾರ್ಜುನ, ಪಿಎಸ್‌ಐ ಸಂತೋಷ ಎಲ್‌.ಟಿ. ಹಾಗೂ ವಿವಿಧ ಇಲಾಖೆಗಳ ಅಧಿ ಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು 

ಟಾಪ್ ನ್ಯೂಸ್

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

8

ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ

7

ಬುದ್ಧನ ಕಂಚಿನ ಮೂರ್ತಿ ಪ್ರತಿಷ್ಠಾಪನೆ

6

ಕೋವಿಡ್‌ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡಿ

5

ಮೀಸಲು ಸೌಲಭ್ಯದ ಮೇಲೆ ಶೂನ್ಯ ಸವಾರಿ!

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ  ಮರುಹುಟ್ಟು

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ ಮರುಹುಟ್ಟು

ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ

ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ

ಮಧುಮಲೆಯಲ್ಲಿ ಸೆರೆಹಿಡಿದ ಎಂಟಿ-23 ಹುಲಿ ಮೈಸೂರಿಗೆ

ಮಧುಮಲೆಯಲ್ಲಿ ಸೆರೆಹಿಡಿದ ಎಂಟಿ-23 ಹುಲಿ ಮೈಸೂರಿಗೆ

gfp

ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವರ್ಡ್ ಪಾರ್ಟಿ

hjguyu

ಹೊಸ್ತಿನ ಹಬ್ಬ-ಕೃಷಿ ಆರಾಧನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.