ಅಖಂಡ ಭಾರತದ ನಿರ್ಮಾತೃ ಪಟೇಲ್‌


Team Udayavani, Nov 1, 2021, 1:28 PM IST

14patel

ಬೀದರ: ನೂರಾರು ಸಣ್ಣಪುಟ್ಟ ಸಂಸ್ಥಾನಗಳಲ್ಲಿ ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿ, ಅಖಂಡ ಭಾರತ ನಿರ್ಮಿಸಿದವರು ಸರದಾರ್‌ ವಲ್ಲಭಭಾಯಿ ಪಟೇಲರು ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಇಲ್ಲಿ ಹೇಳಿದರು.

ನಗರದಲ್ಲಿ ರವಿವಾರ ನಡೆದ ರಾಷ್ಟ್ರೀಯ ಏಕತಾ ದಿವಸ್‌ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರವೂ ಹಲವು ರಾಜ ಸಂಸ್ಥಾನಗಳು ಭಾರತದ ಒಕ್ಕೂಟದಲ್ಲಿ ಸೇರಲು ನಿರಾಕರಿಸಿದ್ದವು. ದೇಶದ ಪ್ರಥಮ ಗೃಹ ಸಚಿವರಾಗಿದ್ದ ಪಟೇಲರು, ಎಲ್ಲ ರಾಜ್ಯಗಳು ಸೇರುವಂತೆ ಮಾಡಿದರು. ಭಾರತದಲ್ಲಿ ಸೇರಲು ನಿರಾಕರಿಸಿದ್ದ ಹೈದರಾಬಾದ್‌ ನಿಜಾಮನಿಗೆ ಪಾಠ ಕಲಿಸಿದರು ಎಂದರು.

ಇದಕ್ಕೂ ಮುನ್ನ ಮಾತನಾಡಿದ ಪ್ರತಿಷ್ಠಾನದ ಸಂಚಾಲಕರಾದ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, 22 ವರ್ಷಗಳ ಪ್ರಯತ್ನದ ನಂತರ ಪಟೇಲರ ಪ್ರತಿಮೆ ಸ್ಥಾಪನೆಗೆ ಸ್ಥಳ ಲಭಿಸಿದೆ. ಪುರಾತತ್ವ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಸಹಕಾರದಿಂದ ಸ್ಥಳ ಸಮಸ್ಯೆ ಕೊನೆಗೊಂಡಿದೆ. ಸ್ಥಳಕ್ಕೆ ಹತ್ತಿಕೊಂಡಿಯೇ ಇರುವ ಪುರಾತತ್ವ ಇಲಾಖೆಯ ಜಮೀನು ಸುತ್ತ ಕಂಪೌಂಡ್‌ ನಿರ್ಮಿಸಿಕೊಳ್ಳುವುದಾಗಿ ಇಲಾಖೆಯವರು ತಿಳಿಸಿದ್ದಾರೆ ಎಂದು ಹೇಳಿದರು.

ನಿವೇಶನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳು ಕೊನೆಗೊಂಡಿವೆ. 6 ಕೋಟಿ ರೂ. ವೆಚ್ಚದಲ್ಲಿ ಪಟೇಲರ ಮೂರ್ತಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಜನಪ್ರತಿನಿಧಿಗಳು ಸೇರಿದಂತೆ ಎಲ್ಲರ ಸಹಕಾರ ಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಹಸ್ತದಿಂದಲೇ ಪ್ರತಿಮೆ ಅನಾವರಣ ಮಾಡಿಸುವ ಉದ್ದೇಶ ಇದೆ. ಜಿಲ್ಲೆಯವರೇ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರು ಈ ಜವಾಬ್ದಾರಿ ನಿರ್ವಹಿಸುವ ವಿಶ್ವಾಸ ಇದೆ ಎಂದರು.

ಈ ವೇಳೆ ವಾಲಿ ಅವರು ಏಕತಾ ಪ್ರತಿಜ್ಞೆ ಬೋಧಿಸಿದರು. ಹಿರಿಯರಾದ ಶಕುಂತಲಾ ವಾಲಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಕರ್ನಲ್‌ ಶರಣಪ್ಪ ಸಿಕೇನಪುರ, ಸೋಮಶೇಖರ ಪಾಟೀಲ ಗಾದಗಿ, ದೀಪಕ ವಾಲಿ, ಡಾ| ರಜನೀಶ ವಾಲಿ, ವಿವೇಕ ವಾಲಿ, ಅನುÒಲ್‌ ವಾಲಿ, ಬಿ.ಜಿ. ಶೆಟಕಾರ, ರೇವಣಸಿದ್ದಪ್ಪ ಜಲಾದೆ, ಶಕುಂತಲಾ ಬೆಲ್ದಾಳೆ, ಬಸವರಾಜ ಧನ್ನೂರ್‌, ಶ್ರೀಕಾಂತ ಸ್ವಾಮಿ, ಬಸವರಾಜ ಪಾಟೀಲ ಹಾರೂರಗೇರಿ, ವಿಜಯಕುಮಾರ ಆನಂದೆ, ಪ್ರಕಾಶ ಟೊಣ್ಣೆ, ಜಗನ್ನಾಥ ಜಮಾದಾರ್‌, ಸುರೇಶ ಚೆನಶೆಟ್ಟಿ ಇದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.