ಪಿಎಂ-ಸಿಎಂ ವಿರುದ್ಧ ಜನರಿಗೆ ಭ್ರಮ ನಿರಸನ
ಕರ್ನಾಟಕ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ.ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ?
Team Udayavani, Apr 9, 2021, 6:54 PM IST
ಬಸವಕಲ್ಯಾಣ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ದೇಶದ ಜನರು ಭ್ರಮ ನಿರಸನಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ
ನಡೆಯುವ ಮೂರು ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ರಾಜ್ಯ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದೆರಡು ದಿನಗಳಿಂದ ಕ್ಷೇತ್ರದ ಮತದಾರರನ್ನು ಭೇಟಿ ಮಾಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಾಕಷ್ಟು ಭರವಸೆ ನೀಡಿದ್ದರು. ಜತೆಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ಆದರೆ ಅವರು ಕೊಟ್ಟ ಯಾವುದೇ ಭರವಸೆಗಳು ಈಡೇರಿಸಿಲ್ಲ. ಬದಲಾಗಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಬಡವರಿಗೆ ನಿಲುಕದಂತೆ ಮಾಡಿದ್ದಾರೆ. ಪ್ರಧಾನಿ ಮೋದಿ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದರು.
ಸಾವಿರಾರು ಕೋಟಿ ರೂ. ಕಂದಾಯ ರೂಪದಲ್ಲಿ ಹಣ ಸಂದಾಯವಾಗುತ್ತಿದೆ. ಆದರೂ ಸಾಲ ಮಾಡಿ ಸಂಬಳ ಕೊಡುತ್ತಿದ್ದಾರೆ. ಹೀಗಾದರೆ ರಾಜ್ಯ
ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ? ಕರ್ನಾಟಕ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ. ಬಿಜೆಪಿಯ ಕ್ಯಾಬಿನೆಟ್ ಸಚಿವ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿರುವ ಉದಾಹರಣೆ ಎಲ್ಲಿಯೂ ಇಲ್ಲ. ಸಚಿವ ಈಶ್ವರಪ್ಪನವರಿಗೆ ಗೊತ್ತಿಲ್ಲದೇ ಹಣ ಬಿಡುಗಡೆ ಮಾಡಿದ್ದಾರೆ ಮತ್ತು ಇದೊಂದು ನಿಷ್ಕ್ರಿಯ ಸರ್ಕಾರ ಎಂದು ಬಿಜೆಪಿ ಸಚಿವರೇ ಹೇಳುತ್ತಿರುವುದು ನೋಡಿದರೆ ರಾಜ್ಯ ಸರ್ಕಾರ ಯಾವ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗುತ್ತದೆ.
ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಅವರಿಗೆ ಅನುಕಂಪದ ಜತೆಗೆ ದಿ. ಶಾಸಕ ಬಿ.ನಾರಾಯಣರಾವ್ ಮಾಡಿರುವ ಅಭಿವೃದ್ಧಿ ಕಾರ್ಯ
ಜನರು ಜ್ಞಾಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್ಗೆ
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್