Udayavni Special

ಕಾಲಕ್ಕನುಸಾರ ಕಾರ್ಯ ನಿರ್ವಹಣೆ ಅವಶ್ಯ


Team Udayavani, Feb 19, 2019, 9:27 AM IST

bid-1.jpg

ಬೀದರ: ಇಂದಿನ ದಿನಗಳಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆ ಅತ್ಯಂತ ಸ್ಪರ್ಧಾತ್ಮಕವಾಗಿ ಬೆಳೆಯುತ್ತಿದ್ದು, ಆಧುನಿಕ ಯುಗಕ್ಕೆ ಅನುಸಾರ ಸಿಬ್ಬಂದಿ ಕೆಲಸ ನಿರ್ವಹಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ವಿಠಲ ರೆಡ್ಡಿ ಎಡಮಲ್ಲೆ ಹೇಳಿದರು.

ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ರಾಜ್ಯಮಟ್ಟದ ಸಹಕಾರಿ ಬ್ಯಾಂಕ್‌ಗಳ ಅಧಿಕಾರಿಗಳಿಗಾಗಿ ನಬಾರ್ಡ್‌ ವತಿಯಿಂದ ನಡೆದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾಂಕ್‌ ಅಧಿಕಾರಿಗಳು ಒತ್ತಡದ ನಡುವೆಯೂ ಗ್ರಾಹಕರಿಗೆ ನಗು ಮುಖದ ಸೇವೆ ನೀಡಬೇಕು. ಸ್ಪರ್ಧೆಗಳನ್ನು ಎದುರಿಸಲು, ಯಶಸ್ಸಿಯಾಗಿ ಆರ್ಥಿಕ ವ್ಯವಹಾರ ನಡೆಸಲು ಸಿಬ್ಬಂದಿ ಸನ್ನದ್ದರಾಗಿರಬೇಕಾಗಿದೆ. ಮೊದಲಿನಂತೆ ಸಾಂಪ್ರದಾಯಿಕ ಬ್ಯಾಂಕಿಂಗ್‌ ಕೆಲಸ ನಡೆಸದೇ ಬ್ಯಾಂಕ್‌ಗಳು ದಿನ ನಿತ್ಯ ಹೊಸ ವ್ಯವಹಾರಗಳೊಂದಿಗೆ ಹೊಂದಿಕೊಂಡು ಜನರಿಗೆ ಅನುಕೂಲಕರ ಸೇವೆ ಒದಗಿಸಲು ಕಂಕಣ ಬದ್ಧರಾಗಬೇಕು ಎಂದರು.

ಡಿಸಿಸಿ ಬ್ಯಾಂಕ್‌ ಆಡಳಿತ ವಿಭಾಗದ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ಸಹಕಾರಿ ರಂಗದ ಬ್ಯಾಂಕ್‌ಗಳು ಜನರಿಗೆ ಸಮೀಪವಾಗಿದ್ದು, ಹೆಚ್ಚು ಜನರೊಂದಿಗೆ ಸೇವೆ ಹೊಂದಿವೆ. ಆದರೂ, ಸಹಕಾರಿ ಬ್ಯಾಂಕ್‌ಗಳ ವ್ಯವಹಾರ ವಾಣಿಜ್ಯ ಬ್ಯಾಂಕ್‌ಗಳಿಗೆ ಹೋಲಿಸಿದರೆ ಕಮ್ಮಿ ವ್ಯವಹಾರ ಹೊಂದಿದೆ. ಜನರೊಂದಿಗೆ ನಮಗಿರುವ ಸಂಪರ್ಕ ಬಳಸಿಕೊಂಡು ಹೆಚ್ಚು ವ್ಯವಹಾರ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಅಪೆಕ್ಸ್‌ ಬ್ಯಾಂಕಿನ ತರಬೇತುದಾರ ಎಸ್‌.ಜಿ. ಕುಲಕರ್ಣಿ ಮಾತನಾಡಿ, ಸಹಕಾರ ಬ್ಯಾಂಕ್‌ ಗಳು ಕೂಡ ರಿಜರ್ವ್‌ ಬ್ಯಾಂಕ್‌ನ ನಿಯಮಗಳನ್ನು ಪಾಲಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಬ್ಯಾಂಕ್‌ಗಳಲ್ಲಿ ತಾಂತ್ರಿಕ ವ್ಯವಸ್ಥೆಗಳ ಸುಧಾರಣೆ ಮಾಡಬೇಕು ಎಂದರು. ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು, ಎಸ್‌.ಜಿ. ಪಾಟೀಲ, ತನ್ವಿರ, ನಾಗಶೆಟ್ಟಿ ಇದ್ದರು.

ಟಾಪ್ ನ್ಯೂಸ್

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

8

ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ

7

ಬುದ್ಧನ ಕಂಚಿನ ಮೂರ್ತಿ ಪ್ರತಿಷ್ಠಾಪನೆ

6

ಕೋವಿಡ್‌ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡಿ

5

ಮೀಸಲು ಸೌಲಭ್ಯದ ಮೇಲೆ ಶೂನ್ಯ ಸವಾರಿ!

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಹಸನ್ಮಾಳದಲ್ಲಿ ದನಗರ ಗೌಳಿ ಸಮುದಾಯದವರಿಂದ ಶಿಲಂಗಾಣ ಕಾರ್ಯಕ್ರಮ

ಹಸನ್ಮಾಳದಲ್ಲಿ ದನಗರ ಗೌಳಿ ಸಮುದಾಯದವರಿಂದ ಶಿಲಂಗಾಣ ಕಾರ್ಯಕ್ರಮ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ  ಮರುಹುಟ್ಟು

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ ಮರುಹುಟ್ಟು

ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ

ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ

ಮಧುಮಲೆಯಲ್ಲಿ ಸೆರೆಹಿಡಿದ ಎಂಟಿ-23 ಹುಲಿ ಮೈಸೂರಿಗೆ

ಮಧುಮಲೆಯಲ್ಲಿ ಸೆರೆಹಿಡಿದ ಎಂಟಿ-23 ಹುಲಿ ಮೈಸೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.