ಬೀದರ್ : ಕೋವಿಡ್ ಸೋಂಕಿನಿಂದ ಮುಖ್ಯ ಪೇದೆ ಸಾವು
Team Udayavani, Jul 6, 2021, 7:44 PM IST
ಬೀದರ: ಮಹಾಮಾರಿ ಕೋವಿಡ್ ಸೋಂಕಿನಿಂದ ಮಂಗಳವಾರ (ಜುಲೈ 06) ಪೊಲೀಸ್ ಮುಖ್ಯ ಪೇದೆ ರಮೇಶ ಲಕ್ಷ್ಮಣ (45) ಮೃತ ಪಟ್ಟಿದ್ದಾರೆ.
ಧನ್ನೂರಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ 112 ತುರ್ತು ಸೇವಾ ವಾಹನ (ಇ.ಆರ್.ಎಸ್.ಎಸ್) ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಹೃದಯಾಘಾತ ಸಂಭವಿಸಿದೆ.
ಬಸವಕಲ್ಯಾಣ ತಾಲೂಕಿನ ಧನ್ನೂರ್ ಗ್ರಾಮದ ಮೃತ ರಮೇಶ ಅವರ ಪತ್ನಿ ಸಹ ಪೇದೆಯಾಗಿದ್ದು, ಪತ್ನಿ, ಮೂವರು ಮಕ್ಕಳು ಇದ್ದಾರೆ.
ಇನ್ನು ಕೋವಿಡ್ ಮೊದಲ ಅಲೆ ವೇಳೆ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ಪೇದೆ ಸಾವನ್ನಪ್ಪಿದ್ದರು.
ಬೀದರ ಜಿಲ್ಲೆಯಲ್ಲಿ ಮಂಗಳವಾರ 6 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂದು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24,209 ಮತ್ತು ಮೃತರ ಸಂಖ್ಯೆ 395ಕ್ಕೆ ಏರಿಕೆ ಆಗಿದೆ. ಇಂದು 8 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಈವರೆಗೆ 23,783 ಜನ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನು 27 ಸಕ್ರೀಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್