
ಅಭಿವೃದ್ದಿಗಾಗಿ ಪ್ರಕಾಶ ಖಂಡ್ರೆ ಗೆಲ್ಲಿಸಿ: ಚವ್ಹಾಣ
Team Udayavani, Dec 3, 2021, 4:19 PM IST

ಬಸವಕಲ್ಯಾಣ: ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಈ ಹಿಂದೆ ಯಾವುದೇ ಸೌಲಭ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಗ್ರಾಪಂಗಳನ್ನು ಕಂಪ್ಯೂಟರೀಕರಣ ಮಾಡಿರುವುದರಿಂದ ಕೆಲಸದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.
ವಿಧಾನ ಪರಿಷತ್ ಚುನಾವಣೆ ನಿಮಿತ್ತ ನಗರದ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಪಂ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರು ಸದಾ ಜನರೊಂದಿಗೆ ಇರುವ ಸರಳ ವ್ಯಕ್ತಿಯಾಗಿದ್ದಾರೆ. ಜನರ ಸಂಕಷ್ಟಗಳನ್ನು ಸರಿಯಾಗಿ ಅರಿತವರಾಗಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಗಳನ್ನು ಹೊಂದಿದ್ದಾರೆ. ಇಂತಹ ವ್ಯಕ್ತಿಯಿಂದ ಮಾತ್ರ ಗ್ರಾಪಂಗಳು ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.
ಕೇಂದ್ರದ ಕೇಂದ್ರ ರಾಜ್ಯ ರಸಗೊಬ್ಬರ ಸಚಿವ ಭಗವಂತ ಖೂಬಾ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅ ಧಿಕಾರದಲ್ಲಿದೆ. ಹೀಗಾಗಿ ಗ್ರಾಪಂಗಳ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಶಾಸಕ ಶರಣು ಸಲಗರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ರಾಜ್ಯ ಹಜ್ ಕಮಿಟಿ ಅಧ್ಯಕ್ಷ ರೌಫುದ್ದಿನ್ ಕಛೇರಿವಾಲೆ, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಸೂರ್ಯಕಾಂತ ನಾಗಮಾರಪಳ್ಳಿ, ಅರಹಂತ ಸಾವಳೆ, ಪ್ರದೀಪ ವಾತಡೆ, ಅಶೋಕ ವಕಾರೆ, ಅರವಿಂದ ಮುತ್ತೆ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ