ಗುರು ನಾನಕ್‌ ಜಯಂತ್ಯುತ್ಸವಕ್ಕೆ ಭರದ ಸಿದ್ಧತೆ

Team Udayavani, Nov 10, 2019, 2:34 PM IST

bidar-tdy-1

ಬೀದರ: ಸಿಖ್‌ ಬಾಂಧವರ ಪವಿತ್ರ ಸ್ಥಳ ಗುರುನಾನಕ ಮಂದಿರ (ಗುರುದ್ವಾರ)ದಲ್ಲಿ ಗುರುನಾನಕ್‌ ದೇವ್‌ ಮಹಾರಾಜರ 550ನೇ ಜನ್ಮ ಶತಾಬ್ದಿ ನಿಮಿತ್ತ ನ.10ರಿಂದ ಮೂರು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಗುರುದ್ವಾರ ಪರಿಸರದಲ್ಲಿ ಸಂಭ್ರಮ ಹೆಚ್ಚಿದೆ.

ಗುರುದ್ವಾರ ಈಗ ಸ್ವರ್ಣ ಮಂದಿರ ರೂಪ ಪಡೆದಿದ್ದು, ರಾತ್ರಿ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಮಹಾದ್ವಾರ ಸೇರಿದಂತೆ ವಿವಿಧ ಕಟ್ಟಡಗಳು ವಿದ್ಯುತ್‌ ದೀಪದಿಂದ ಝಗಮಗಿಸುತ್ತಿದೆ. ಪರಿಸರದಲ್ಲಿ ಪೆಂಡಾಲ್‌ಗ‌ಳನ್ನು ಹಾಕಲಾಗಿದೆ. ಮೂರು ದಿನಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಾತ್ರವಲ್ಲದೇ ನೆರೆಯ ತೆಲಂಗಾಣ, ಆಂಧ್ರ, ಪಂಜಾಬ್‌ ಮತ್ತು ದೆಹಲಿಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಸಿಖ್‌ ಭಕ್ತ ಸಮೂಹ ಭಾಗವಹಿಸಲಿದೆ. ಜಯಂತಿ ಅರ್ಥಪೂರ್ಣ, ಅದ್ಧೂರಿಯಾಗಿ ಆಯೋಜಿಸಲು ದೊಡ್ಡ ಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಗುರುದ್ವಾರ ಪ್ರಬಂಧಕ ಕಮಿಟಿಯಿಂದ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಗುರುದ್ವಾರ ಪರಿಸರದಲ್ಲಿ 400 ಕೋಣೆಗಳ ವಸತಿ ಸೌಲಭ್ಯ ಹೊರತುಪಡಿಸಿ ವಿವಿಧೆಡೆ ಬೃಹತ್‌   ಪೆಂಡಾಲ್‌ಗ‌ಳನ್ನು ಹಾಕಿ 1,000 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರೊಟ್ಟಿಗೆ ಗುರುನಾನಕ್‌ ಶಿಕ್ಷಣ ಸಂಸ್ಥೆಯ ಅ ಧೀನದ ಶಾಲಾ- ಕಾಲೇಜುಗಳಲ್ಲಿಯೂ ತಂಗಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಕಕಾಲಕ್ಕೆ 1000 ಜನ ಭಕ್ತರು ಊಟ ಮಾಡಲು ಲಂಗರ್‌ (ಪ್ರಸಾದ) ಹಾಲ್‌ ಇದೆ. ಪ್ರತಿ ನಿತ್ಯ 50,000 ಜನ ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ಪ್ರತ್ಯೇಕ ನಾಲ್ಕು ಕಡೆ ಪ್ರತ್ಯೇಕ ಲಂಗರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಗುರುದ್ವಾರದ ವ್ಯವಸ್ಥಾಪಕ ಜ್ಞಾನಿ ದರ್ಬಾರ್‌ಸಿಂಗ್‌ “ಉದಯವಾಣಿ’ಗೆ ತಿಳಿಸಿದರು.

ಪ್ರತಿ ನಿತ್ಯ ವಿವಿಧ ಬಗೆಯ ಊಟದ ಮೆನು ತಯಾರಿಸಲಾಗಿದೆ. ರೋಟಿ, ತಂದೂರಿ, ವಿವಿಧ ಬಗೆಯ ತರಕಾರಿ ಪಲ್ಯ, ಸಿಹಿ ಪದಾರ್ಥಗಳನ್ನು ಒಳಗೊಂಡ ಭಕ್ಷ ಭೋಜನ ಸಿದ್ಧಪಡಿಸಲಾಗುತ್ತಿದೆ. ಬೆಳಗ್ಗೆ ಉಪಹಾರದ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಅಡುಗೆ ತಯಾರಿಸಲು ಮತ್ತು ಬಡಿಸಲು ಸುಮಾರು 400 ಜನರು ನಾಂದೇಡ್‌, ಪಂಜಾಬ್‌ನ ಕರ ಸೇವಕರು ಸನ್ನದ್ಧರಾಗಿದ್ದಾರೆ. ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಪ್ರಬಂಧಕ ಕಮಿಟಿಯಿಂದ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲಾಗಿದೆ. ಗುರುದ್ವಾರದ ಮುಖ್ಯ ಗೇಟ್‌ನಿಂದ ಮಂದಿರದವರೆಗೆ ತೆರಳು ಅನುಕೂಲವಾಗುವಂತೆ ಉಚಿತ ಬಸ್‌ನ ವ್ಯವಸ್ಥೆ ಮಾಡಲಾಗುತ್ತಿದೆ. ವಯೋವೃದ್ಧರಿಗಾಗಿ ಎಲೆಕ್ಟ್ರಿಕ್‌ ಆಟೋಗಳನ್ನು ಸಹ ನಿಯೋಜನೆ ಮಾಡಲಾಗುತ್ತಿದೆ ಎಂದು ಪ್ರಬಂಧಕ ಕಮಿಟಿ ಅಧ್ಯಕ್ಷ ಡಾ| ಬಲಬೀರ್‌ಸಿಂಗ್‌ ಮಾಹಿತಿ ನೀಡಿದ್ದಾರೆ.

ಮೊದಲ ದಿನವಾದ ನ.10ರಂದು ಜರುಗುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ರಹೀಮ್‌ ಖಾನ್‌, ಬಂಡೆಪ್ಪಾ ಖಾಶೆಂಪೂರ, ಬಿ. ನಾರಾಯಣರಾವ್‌, ರಘುನಾಥರಾವ ಮಲ್ಕಾಪೂರೆ, ವಿಜಯಸಿಂಗ್‌, ಚಂದ್ರಶೇಖರ ಪಾಟೀಲ, ಶರಣಪ್ಪಾ ಮಟ್ಟೂರ್‌, ಅರವಿಂದ ಕುಮಾರ ಅರಳಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷೆ ಲಕ್ಷ್ಮಣ ಬುಳ್ಳಾ, ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ್‌, ಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗವಾರ, ನಗರ ಸಭೆ ಆಯುಕ್ತ ಬಿ.ಬಸಪ್ಪಾ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.