ಜನರ ಮನೆ ಬಾಗಿಲಿಗೆ ಸವಲತ್ತು: ಸಚಿವ ಅಶೋಕ
Team Udayavani, May 28, 2022, 12:50 PM IST
ಬೀದರ: ಜನರ ಮನೆ ಬಾಗಿಲಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಕಾಳಜಿಯಿಂದ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಗೆ ಸಂಬಂಧಿ ಸಿದ ಕೆಲಸ ಕಾರ್ಯಗಳನ್ನು ಸರಳಗೊಳಿಸಲಾಗಿದೆ. ಮಾಸಾಶನ, ವೃದ್ಧಾಪ್ಯ ವೇತನಕ್ಕಾಗಿ ಕಚೇರಿ ಸುತ್ತುವ ಕಷ್ಟ ತಪ್ಪಿಸಲಾಗಿದೆ. ಕಂದಾಯ ದಾಖಲೆಗಳಿಗಾಗಿ ರೈತರು ತಿಂಗಳುಗಟ್ಟಲೇ ಓಡಾಡಬೇಕಾಗಿತ್ತು. ಅದನ್ನೂ ಸರಳಗೊಳಿಸಲಾಗಿದೆ ಎಂದರು.
ಸಾಮಾಜಿಕ ಭದ್ರತಾ ಯೋಜನೆಗಳಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಜನ ಕಷ್ಟಪಡುತ್ತಿದ್ದರು. ಕಚೇರಿ ಸುತ್ತ ಓಡಾಡಬೇಕಾದ ಕಷ್ಟ ಇತ್ತು. ಅದನ್ನು ಕೊನೆಗೊಳಿಸಲಾಗಿದೆ. 72 ಗಂಟೆಯಲ್ಲಿ ಮಂಜೂರಾತಿ ಪ್ರಮಾಣಪತ್ರ ಸಿಗುವಂತೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿದೆ ಎಂದರು.
ಸರ್ಕಾರದ ಜನಪರ, ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಮುಖಂಡರು, ಕಾರ್ಯಕರ್ತರು ಮಾಡಬೇಕು ಎಂದು ಸಚಿವರು ಸಲಹೆ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಾನಂದ ಮಂಠಾಳಕರ್, ಬುಡಾ ಅಧ್ಯಕ್ಷ ಬಾಬು ವಾಲಿ, ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಸಿದ್ರಾಮ ಡಿಕೆ, ಮುಖಂಡರಾದ ಜಯಕುಮಾರ ಕಾಂಗೆ, ಗುರುನಾಥ ಜ್ಯಾಂತಿಕರ್, ವಿಜಯಕುಮಾರ ಪಾಟೀಲ ಗಾದಗಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ
ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ
ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು