ಬೀದರನಲ್ಲಿ ಈಜುಕೊಳ-ಜಿಮ್‌ಗೆ ನಿಷೇಧ
Team Udayavani, Apr 4, 2021, 8:04 PM IST
ಬೀದರ: ಕೋವಿಡ್-19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶಿಸಿದಂತೆ ಜನಹಿತ ದೃಷ್ಟಿಯಿಂದಾಗಿ ಬೀದರ ಜಿಲ್ಲೆಯಲ್ಲಿ ಕೂಡ ಈಜುಕೊಳ, ಜಿಮ್ ಸೆಂಟರ್‌ಗಳ ನಿಷೇಧ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳೊಂದಿಗೆ ಶನಿವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ನಿರ್ದೇಶನದಂತೆ, ಬೀದರ ಜಿಲ್ಲೆಯಲ್ಲಿ ಸಿನೇಮಾ ಮಂದಿರಗಳು ಕೂಡ ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದರು. ಬೀದರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ನೀಡಿಕೆ ಮತ್ತು ಕೋವಿಡ್-19 ಟೆಸ್ಟ್ ಗುರಿಯನುಸಾರ ಪ್ರಗತಿ ತೋರಲು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರದ್ಧೆ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ನಾಗೇಶ ಡಿ.ಎಲ್., ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ| ಶಿವಕುಮಾರ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ
ಕಂಪ್ಲಿಯಲ್ಲಿ ಎಸಿಬಿ ದಾಳಿ: ಪಿಡಿಒ, ಗ್ರಾ.ಪಂ.ಸದಸ್ಯ ಸೇರಿ ಮೂವರ ಬಂಧನ
ಉದ್ಯಾವರ: ಬಸ್ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್ ಸಿಬಂದಿ ಸಾವು
ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು