ಬಿಇಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

Team Udayavani, Jan 23, 2019, 8:59 AM IST

bid-2.jpg

ಔರಾದ: ಬಿಇಒ ಚವ್ಹಾಣ ಶೆಟ್ಟಿ ಅವರನ್ನು ಕೂಡಲೆ ಅಮಾನತು ಮಾಡ‌ಬೇಕೆಂದು ಆಗ್ರಹಿಸಿ ಬಾಲಾಜಿ ನರೋಟೆ ಗೆಳೆಯರ ಬಳಗದ ಸದಸ್ಯರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಶಿಕ್ಷಕರು ನಿವೃತ್ತರಾಗಿ ಆರು ತಿಂಗಳು ಕಳೆದರೂ ಕೂಡ ಇನ್ನೂ ತಾಲೂಕಿನ ಬಹುತೇಕ ಶಿಕ್ಷಕರಿಗೆ ನಿವೃತ್ತಿ ವೇತನ ಬಿಡುಗಡೆ ಮಾಡಿಲ್ಲ. ನಿವೃತ್ತಿ ವೇತನ ಬಿಡುಗಡೆ ಮಾಡಲು ಶಿಕ್ಷಕರಿಂದ ಲಂಚ ಕೇಳುತ್ತಿದ್ದಾರೆ ಎಂದು ಬಾಲಾಜಿ ನರೋಟೆ ಗೆಳೆಯರ ಬಳಗದ ತಾಲೂಕು ಅಧ್ಯಕ್ಷ ಶಿವಕುಮಾರ ಕಾಂಬಳೆ ಆರೋಪಿಸಿದರು.

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕ ಶ್ರೀಪತರಾವ್‌ ಅವರಿಗೆ ಸಕಾಲಕ್ಕೆ ಹಣ ಸಿಗದಿರುವ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಶಿಕ್ಷಣಾಧಿಕಾರಿಗಳು ಸರಿಯಾದ ಸಮಯಕ್ಕೆ ಕೆಲಸ ಮಾಡದೆ ಹಣ ಸಂಪಾದನೆ ಮಾಡಲು ವಾಮ ಮಾರ್ಗ ಹಿಡಿದಿರುವ ಹಿನ್ನೆಲೆಯಲ್ಲಿ ನಿವೃತ್ತ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆಯಲ್ಲಿ ಪ್ರತಿಯೊಂದು ಕೆಲಸಕ್ಕೂ ಖಾಸಗಿ ಶಾಲೆ ಆಡಳಿತ ಮಂಡಳಿ ಸದಸ್ಯರು ಅಧಿಕಾರಿಗಳಿಗೆ ಹಣ ನೀಡಬೇಕಾಗಿದೆ. ಇಲಾಖೆಯ ಶಿಕ್ಷಕರು ಕೂಡ ಕೆಲಸ ಮಾಡಿಸಿಕೊಳ್ಳಲು ಹಣ ನೀಡಬೇಕಾಗಿದೆ. ಇಲ್ಲವಾದಲ್ಲಿ ಕೆಲಸಗಳು ಆಗುವದಿಲ್ಲ ಎಂದು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ನಾನಾಗೌಡ ಹಾಗೂ ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ವಾರದಲ್ಲಿ ಸಮಸ್ಯೆ ಬಗೆ ಹರಿಸಲಾಗುತ್ತದೆ. ನಿವೃತ್ತರಾದ ಎಲ್ಲ ಶಿಕ್ಷಕರ ವೇತನವನ್ನು ಎರಡು ದಿನಗಳಲ್ಲಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಕ್ಷೇತ್ರ ಶಿಕ್ಷಣಾಧಿಕಾರಿ ಚವ್ಹಾಣ ಶೆಟ್ಟಿ ಅವರ ಕುರಿತು ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದೆ ಪಡೆಯಲಾಯಿತು.

ಸಂಘಟನೆಯ ಸಂಸ್ಥಾಪಕ ಬಾಲಾಜಿ ನರೋಟೆ, ಭ್ರಷ್ಟಾಚಾರದಲ್ಲಿ ತೊಡಗಿದ ಶಿಕ್ಷಣಾಧಿಕಾರಿಯನ್ನು ಕೂಡಲೆ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಬಾಲಾಜಿ ನರೋಟೆ ತಿಳಿಸಿದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.