ಕ್ಷುಲ್ಲಕ ಕಾರಣಕ್ಕೆ ಕೊಲೆಗೈದ ಸೈಕೋ ಕಿಲ್ಲರ್‌ ಬಂಧನ


Team Udayavani, May 26, 2022, 5:29 PM IST

19arrest

ಹುಮನಾಬಾದ: ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ ಅಪರಿಚಿತ ವ್ಯಕ್ತಿ ಕೊಲೆಗೈದಿದ್ದ ಸೈಕೋ ಕಿಲ್ಲರ್‌ನನ್ನು ಪೊಲೀಸ್‌ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಓತಗಿ ಗ್ರಾಮದ ಚನ್ನಾರೆಡ್ಡಿ ಬಂಧಿತ ಆರೋಪಿ. ಈತ ಪಟ್ಟಣದ ಬಸ್‌ ನಿಲ್ದಾಣದಲ್ಲಿ ರುಮ್ಮನಗೊಡ ಗ್ರಾಮದ ಶರಣಯ್ನಾ ಮಠ ಎಂಬುವನ್ನು ಕ್ಷುಲಕ್ಕ ಕಾರಣಕ್ಕೆ ಸಂಚುಹಾಕಿ ಕೊಲೆ ಮಾಡಿದ್ದ. ಈ ಕುರಿತು ಹುಮನಾವಾದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಹುಮನಾಬಾದ ಪೊಲೀಸರು, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪತ್ತೆ ಹಚ್ಚಿದ್ದು ಹೇಗೆ?: ಮೃತ ವ್ಯಕ್ತಿಯ ಶವ ಬಸ್‌ ನಿಲ್ದಾಣದಲ್ಲಿ ಪತ್ತೆಯಾದ ಸಂದರ್ಭದಲ್ಲಿ ಅಪರಿಚಿತ ಎಂದು ಗುರುತ್ತಿಸಲಾಗಿತ್ತು. ಬಸ್‌ ನಿಲ್ದಾಣದಲ್ಲಿ ಏನಾಗಿದೆ ಎಂಬುವುದು ಪೊಲೀಸ್‌ ಅಧಿಕಾರಿಗಳು ತಿಳಿದುಕೊಳ್ಳಲು ಬಸ್‌ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕ್ಯಾಮೆರಾದಲ್ಲಿ ಯಾವುದೇ ಚಿತ್ರಣಗಳು ಕಂಡುಬಂದಿಲ್ಲ. ಆಗ ಕೊಲೆ ಮಾಡಿದ್ದು ಯಾರು ಎಂಬುದು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ಈ ಮಧ್ಯದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ. ನಂತರ ಆತನ ಮೊಬೈಲ್‌ ತೆಗೆದುಕೊಂಡು ಹೋಗಿದ್ದ ಆರೋಪಿ ಪತ್ತೆಗೆ ಜಾಲ ಬಿಸಿದಾಗ ತಾಲೂಕಿನ ಓತಗಿ ಗ್ರಾಮದಲ್ಲಿ ಮೊಬೈಲ್‌ ಲೊಕೇಶನ್‌ ಕಂಡುಬಂದಿದೆ. ಇದರ ಆಧಾರದಲ್ಲಿ ಪೊಲೀಸ್‌ ಅಧಿಕಾರಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಆಸ್ಪತ್ರೆಯಿಂದ ಪರಾರಿಯಾದ ವಿಚಾರಣಾಧೀನ ಖೈದಿ

ಕೊಲೆ ಮಾಡಿದ್ದೇಕೆ?: ಹೈದ್ರಾಬಾದದಿಂದ ಸ್ವಗ್ರಾಮಕ್ಕೆ ತೆರಳುವ ಮಧ್ಯದಲ್ಲಿ ಹುಮನಾಬಾದ ಪಟ್ಟಣದಕ್ಕೆ ಬಂದಿದ್ದ ಶರಣಯ್ನಾ ಬಸ್‌ ನಿಲ್ದಾಣದಲ್ಲಿ ಕುಡಿದ ಅಮಲಿನಲ್ಲಿದ್ದ ಆರೋಪಿ ಚನ್ನಾರೆಡ್ಡಿಯ ಪರಿಚಯವಾಗಿದೆ. ಫೋನ್‌ ಪೇಗೆ ಹಣ ಹಾಕುವಂತೆ ಹಾಗೂ ಮಾತಾಡಲು ಮೊಬೈಲ್‌ ಕೊಡುವಂತೆ ಶರಣಯ್ಯಗೆ ಒತ್ತಾಯಿಸಿದ್ದಾನೆ. ಈ ಮಧ್ಯೆ ಇಬ್ಬರ ನಡುವೆ ಪರಸ್ಪರ ಜಗಳವಾಗಿದೆ. ಸ್ವಗ್ರಾಮಕ್ಕೆ ತೆರಳಲು ಬಸ್‌ ಇಲ್ಲದ ಕಾರಣ ಬಸ್‌ ನಿಲ್ದಾಣದಲ್ಲಿ ಮಲಗಿದ ಸಂದರ್ಭದಲ್ಲಿ ಆರೋಪಿ ಚನ್ನಾರೆಡ್ಡಿ ಹರಿತವಾದ ಪರಸಿ ಕಲ್ಲಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಅಲ್ಲದೆ ಮೃತ ವ್ಯಕ್ತಿಯ ಮೊಬೈಲ್‌ ತೆಗೆದುಕೊಂಡು ಹೋಗಿದ್ದು, ಪೊಲೀಸ್‌ ತನಿಖೆಗೆ ಸಹಕಾರಿಯಾಗಿದೆ.

ಮತ್ತೊಂದು ಕೊಲೆ ಕೊಲೆ ಮಾಡಿದ ಆರೋಪಿ

ಚನ್ನಾರೆಡ್ಡಿ ಈ ಹಿಂದೆ 2009ರಲ್ಲಿ ತೆಲಂಗಾಣದ ರಾಜೇಂದ್ರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹಣಕ್ಕಾಗಿ ಕೊಲೆ ಮಾಡಿ ಸುಮಾರು ಹತ್ತಕ್ಕೂ ಅಧಿಕ ವರ್ಷ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಆರೋಪಿ ಚನ್ನಾರೆಡ್ಡಿ ಇದೀಗ ಮತ್ತೊಂದು ಕೊಲೆ ಮಾಡಿ ಜೈಲುವಾಸ ಅನುಭವಿಸುವಂತಾಗಿದೆ. ಆರೋಪಿ ಒಂದು ರೀತಿ ಸೈಕೋ ತರಹ ಇದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.