ಕಾರ್ಖಾನೆಯಿಂದ ವಿಷಯುಕ್ತ ತ್ಯಾಜ್ಯ ಬಿಡುಗಡೆ


Team Udayavani, Apr 9, 2022, 3:22 PM IST

19factory

ಹುಮನಾಬಾದ: ಕೈಗಾರಿಕಾ ಪ್ರದೇಶದಲ್ಲಿನ ಕೆಲ ಕಾರ್ಖಾನೆಗಳು ರಾತ್ರಿ ಸಮಯದಲ್ಲಿ ವಿಷಯುಕ್ತ ತ್ಯಾಜ್ಯ ನೇರವಾಗಿ ಹೊರ ಬಿಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಡಾ| ಪ್ರದೀಪಕುಮಾರ ಹಿರೇಮಠ ಗುರುವಾರ ಮಧ್ಯರಾತ್ರಿ ಕಾರ್ಖಾನೆ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೈಗಾರಿಕಾ ಪ್ರದೇಶದಲ್ಲಿನ ಅನೇಕ ಕಾರ್ಖಾನೆಗಳು ವಿಷಯುಕ್ತ ತ್ಯಾಜ್ಯ ಶುದ್ಧೀಕರಣ ಘಟಕದಲ್ಲಿ ಸಂಸ್ಕರಿಸದೇ ನೇರವಾಗಿ ಹೊರಬಿಡುತ್ತಿರುವ ಕಾರಣ ಸುತ್ತಲಿನ ಗಡವಂತಿ, ಮಾಣಿಕನಗರ ಜನರು ಸಮಸ್ಯೆ ಎದುರಿಸುತ್ತಿದ್ದಾರೆ.

ಕಳೆದ ತಿಂಗಳು ಮಾಣಿಕನಗರದ ಹಳ್ಳದಲ್ಲಿ ಸಂಪೂರ್ಣ ಕೆಮಿಕಲ್‌ ತ್ಯಾಜ್ಯದ ನೀರು ತುಂಬಿ ನಾರುತ್ತಿತ್ತು. ಗ್ರಾಮಸ್ಥರು ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ಶಾಸಕರು, ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅಲ್ಲದೇ, ಹಳ್ಳದಲ್ಲಿನ ನೀರು ತಡೆ ಸೇತುವೆ ಒಡೆದು ನೀರು ಹರಿಬಿಟ್ಟಿದ್ದರು.

ಕಳೆದ ಕೆಲ ದಿನಗಳಿಂದ ಕೆಮಿಕಲ್‌ ನೀರು ಹಳ್ಳದಲ್ಲಿ ಕಂಡು ಬಂದಿಲ್ಲ. ಆದರೆ, ಗುರುವಾರ ರಾತ್ರಿ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಹಶೀಲ್ದಾರ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ 2 ಕಾರ್ಖಾನೆಗಳು ತ್ಯಾಜ್ಯ ಹೊರ ಬಿಡುತ್ತಿರುವುದು ಕಂಡು ಬಂದಿದೆ. ಈ ಕುರಿತು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಧಿಕಾರಿಗೆ ಈ ಬಗ್ಗೆ ವರದಿ ಸಲ್ಲಿಸುವುದಾಗಿ ತಹಶೀಲ್ದಾರ್‌ ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಕೈಗಾರಿಕಾ ಘಟಕದಲ್ಲಿನ ವಿವಿಧ ಕಾರ್ಖಾನೆಗೆ ತಹಶೀಲ್ದಾರ್‌ ಡಾ| ಪ್ರದೀಪಕುಮಾರ ಹಿರೇಮಠ ಭೇಟಿ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಅನೇಕ ಊಹಾಪೋಹಗಳು ಕೇಳಿ ಬರುತ್ತಿವೆ. ಪೊಲೀಸ್‌ ಅಧಿಕಾರಿಗಳ ಸಹಕಾರ ಪಡೆಯದೇ ಮಧ್ಯರಾತ್ರಿಯಲ್ಲಿ ಒಬ್ಬಂಟಿ ಅಧಿಕಾರಿ ಭೇಟಿ ನೀಡಿದ್ದಾರೆ. ಅಲ್ಲದೇ, ವಿವಿಧ ಕಾರ್ಖಾನೆಗೆ ಭೇಟಿ ನೀಡಿದ ತಹಶೀಲ್ದಾರ್‌ ಯಾವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಯಾವ ಕಾರ್ಖಾನೆಗಳಿಂದ ಸಮಗ್ರ ವರದಿ ಪಡೆದುಕೊಂಡಿದ್ದಾರೆ ಎಂದು ಗಡವಂತಿ ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

ಕಾನೂನು ಕ್ರಮಕ್ಕೆ ಶಿಫಾರಸು: ಕಳೆದ ಕೆಲ ದಿನಗಳಿಂದ ಭೇಟಿ ನೀಡಿದ ಕಾರ್ಖಾನೆಗಳ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಗುರುವಾರ ರಾತ್ರಿ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಒಬ್ಬನೇ ತೆರಳಿ ಪರಿಶೀಲಿಸಿದ್ದೇನೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ. ಗುರುವಾರ ರಾತ್ರಿ ಭೇಟಿ ನೀಡಿದ ರೇಡಿಸನ್‌ ಲ್ಯಾಬ್‌ ಹಾಗೂ ಕರ್ನಾಟಕ ಪೇಪರ್‌ ಕಾರ್ಖಾನೆಗಳ ಕುರಿತು ಡಿಸಿಗೆ ವರದಿ ಸಲ್ಲಿಸಲಾಗುವುದು. ಯಾವುದೇ ಖಾಸಗಿ ವ್ಯಕ್ತಿಯನ್ನು ಪಿಎ ಎಂದು ನೇಮಕ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.