Udayavni Special

ಮುಂದಿನ ಪೀಳಿಗೆಗೆ ಜಲ ಉಳಿಸಿ

•ಪರಿಸರ ಸಂರಕ್ಷಣೆ-ಮಳೆ ನೀರು ಕೊಯ್ಲು; ಜನಜಾಗೃತಿ ಕಾರ್ಯಕ್ರಮ

Team Udayavani, Jul 23, 2019, 12:01 PM IST

bidar-tdy-1

ಬೀದರ: ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಶಾಹೀನ್‌ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಕೋಯ್ಲು ಕುರಿತ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.

ಬೀದರ: ಜೀವಕ್ಕೆ ಮೂಲ ಆಧಾರವಾದ ನೀರನ್ನು ಉಳಿಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ಕೊಡಬೇಕಿದೆ. ಸರ್ಕಾರ ಸ್ವಚ್ಛಮೇವ ಜಯತೆ, ಜಲಾಮೃತದಂತಹ ಕಾರ್ಯಕ್ರಮಗಳ ಮೂಲಕ ಸ್ವಚ್ಛತೆ ಹಾಗೂ ನೀರು ಸಂರಕ್ಷಣೆ ಕಾರ್ಯ ಕೈಗೊಳ್ಳುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗೆ ಹೇಳಿದರು.

ನಗರದಲ್ಲಿ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಶಾಹೀನ್‌ ಶಿಕ್ಷಣ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ಕುರಿತ ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಿಸರ್ಗದ ಉಳಿವಿಗಾಗಿ ವಿದ್ಯಾರ್ಥಿಗಳು ಜನಜಾಗೃತಿ ಮೂಡಿಸುತ್ತಿರುವುದು ಪ್ರಶಂಸನೀಯವಾಗಿದೆ. ವಿದ್ಯಾರ್ಥಿಗಳು ಇದೇ ರೀತಿ ಪರಿಸರ ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದರು.

ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ| ಅಬ್ದುಲ್ ಖದೀರ್‌ ಮಾತನಾಡಿ, ಈಚಿನ ವರ್ಷಗಳಲ್ಲಿ ಮಳೆ ಕೊರತೆ ಹೆಚ್ಚಾಗಿದೆ. ಹೀಗಾಗಿ ಬಿದ್ದಷ್ಟೂ ಮಳೆ ನೀರನ್ನು ಸಂಗ್ರಹಿಸಿ, ಮರು ಬಳಕೆ ಮಾಡಬೇಕಾಗಿದೆ. ಮಳೆ ನೀರು ಕೊಯ್ಲು ಕುರಿತು ಜಾಗೃತಿ ಆಂದೋಲನದ ಮಾದರಿಯಲ್ಲಿ ನಡೆಯಬೇಕಾಗಿದೆ. ಸಾರ್ವಜನಿಕರು ಕಟ್ಟಡಗಳಿಗೆ ಮಳೆ ನೀರು ಕೊಯ್ಲು ವಿಧಾನ ಅಳವಡಿಸಬೇಕು. ನೀರನ್ನು ಹಿತ ಮಿತವಾಗಿ ಬಳಸಬೇಕು ಎಂದು ಸಲಹೆ ನೀಡಿದರು.

ಪರಿಸರ ಸಮತೋಲನ ಕಾಪಾಡಲು ಮನೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸಬೇಕು. ನಿಸರ್ಗ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಕಾಲೇಜು ವಿದ್ಯಾರ್ಥಿಗಳು ಪಾಕೇಟ್ ಮನಿ ಬಳಸಿ ನಿಸರ್ಗ ಜಾಗೃತಿ ಅಭಿಯಾನ ನಡೆಸಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.

ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಏಕಕಾಲಕ್ಕೆ ಮಾನವ ಸರಪಳಿ ರಚಿಸಿ ನೀರು ಮಿತ ಬಳಕೆ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಮೂಡಿಸಿದರು. ಅಂಬೇಡ್ಕರ್‌ ವೃತ್ತದಿಂದ ಶಹಾಗಂಜ್‌ ಕಮಾನ್‌, ಗವಾನ್‌ ಚೌಕ್‌, ಚೌಬಾರಾ, ನಯಿ ಕಮಾನ್‌, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‌ಸಿಂಗ್‌ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ಮತ್ತೆ ಅಂಬೇಡ್ಕರ್‌ ವೃತ್ತದ ವರೆಗೆ ಮಾನವ ಸರಪಳಿ ರಚಿಸಿದರು. ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ನಿರ್ದೇಶಕ ಮಹಮ್ಮದ್‌ ಆರಿಫ್‌, ಕಾರ್ಯಕ್ರಮದ ಉಸ್ತುವಾರಿ ಮಹಮ್ಮದ್‌ ಖುರ್ಷಿದ್‌, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಸೋಂಕು

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಪಾಸಿಟಿವ್

ದ.ಕ. ಜಿಲ್ಲೆ: ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

yyyeeee

ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ  ಇಸ್ರೇಲ್ ಸರ್ಕಾರ

13-11

ಅದ್ಧೂರಿ ಕಲ್ಯಾಣ ಮಹೋತ್ಸವ ಕನಸಿಗೆ ಕೊರೊನಾ ಕೊಕ್ಕೆ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ytregfdkjfghnvmcsjk

ಬ್ರಿಡ್ಜ್ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ

ytre

ಹಳ್ಳಿಗಳಲ್ಲಿ ಕೋವಿಡ್‌ ಮುಂಜಾಗ್ರತೆಗೆ ಸೂಚನೆ

rrrrrrrrrrrrrrrrrrrrrrrrrrrr

“ಕೈ ಮುಗಿಯುವೆ, ಅನಗತ್ಯ ಸಂಚರಿಸಬೇಡಿ’

gfrtfdfd

ಕೋವಿಡ್‌ ಬೆಡ್‌ಗಳ ಸಂಖ್ಯೆ 250ಕ್ಕೆ ಏರಿಕೆ!

hgfdfghgfd

ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನೂತನ ಶಾಸಕ ಸಲಗರ್

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

13-22

ಹಬ್ಬದಾಚರಣೆಯಲ್ಲಿ ಗೊಂದಲ ಬೇಡ

13-21

ದಾದಿಯರ ಸೇವೆ ಅವಿಸ್ಮರಣೀಯ

13-20

ಕೊರೊನಾ ತಡೆಗೆ ತಂಡವಾಗಿ ಕೆಲಸ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.