ನೂತನ ಅನುಭವ ಮಂಟಪ ನಾನೇ ಉದ್ಘಾಟನೆ ಮಾಡುತ್ತೇನೆ: ಸಿದ್ದರಾಮಯ್ಯ
Team Udayavani, Feb 3, 2023, 4:19 PM IST
ಬೀದರ್: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಬಸವ ಕಲ್ಯಾಣದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಅನುಭವ ಮಂಟಪನ್ನು ನಾನೇ ಉದ್ಘಾಟನೆ ನೆರವೇರಿಸಲಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.
ಬಸವಕಲ್ಯಾಣದಲ್ಲಿ ಶುಕ್ರವಾರ ಅನುಭವ ಮಂಟಪದಲ್ಲಿ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ನಾನು ಮುಖ್ಯ ಮಂತ್ರಿಯಾಗಿದ್ದಾಗ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ರೂಪರೇಷ ಸಿದ್ಧಪಡಿಸಿ ಬಜೆಟ್ ನಲ್ಲಿ ಪೂರಕ ಅನುದಾನ ಸಹ ಮೀಸಲಿಟ್ಟಿದ್ದೆ. ಆದರೆ, ನಂತರ ಸರ್ಕಾರ ಹೋಯಿತು. ಅನುಭವ ಮಂಟಪ ಉದ್ಘಾಟನೆ ಮಾಡಿದರೆ ನನಗೆ ಪುಣ್ಯ ಬರುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ನಾನು ಬಸವ ಜಯಂತಿ ದಿನದಂದು ಪ್ರಮಾಣ ವಚನ ಸ್ವೀಕರಿಸಿದ್ದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಒಂದೆರಡು ಗಂಟೆಯಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ದಾಸೋಹದ ಪರಿಕಲ್ಪನೆ, ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕೆಂಬುದು ನಮ್ಮ ಆಶಯವಾಗಿತ್ತು ಎಂದರು.
ನಾನು ಬಸವಾದಿ ಶರಣರ ತತ್ವದ ಮೇಲೆ ನಂಬಿಕೆಯಿಟ್ಟವನು. ಎಲ್ಲರಿಗೂ ಸಮಾನ ಹಕ್ಕು, ಅವಕಾಶಗಳು ಇರಬೇಕು ಎಂಬುದು ನನ್ನ ಸಿದ್ಧಾಂತವಾಗಿದೆ ಎಂದ ಅವರು, ಬಸವಾದಿ ಶರಣರ ವಿಚಾರಗಳು ಎಲ್ಲರಿಗೂ ಗೊತ್ತಿರಬೇಕು ಅವರ ಬದುಕಿನ ಬಗ್ಗೆ ಎಲ್ಲರಿಗೂ ಗೊತ್ತಿರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು
ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ ಫೈಟ್ ಇಲ್ಲ
ಕುಂದಗೋಳ: ಕಾಂಗ್ರೆಸ್ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ
ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ
ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್