ಮದ್ಯ ಮಾರಾಟ ನಿಷೇಧಕ್ಕೆ ಒತ್ತಾಯ

ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ

Team Udayavani, May 6, 2020, 12:36 PM IST

5-May-07

ಸಾಂದರ್ಭಿಕ ಚಿತ್ರ

ಸಿಂಧನೂರು: ತಾಲೂಕಿನಾದ್ಯಂತ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಕ್ರಾಂತಿಕಾರಿ ಯುವಜನ ರಂಗದ ನೇತೃತ್ವದಲ್ಲಿ ಮಹಿಳೆಯರು ಮಂಗಳವಾರ ತಹಶೀಲ್ದಾರ್‌ ಹಾಗೂ ಅಬಕಾರಿ ಸಬ್‌ಇನ್ಸ್‌ಪೆಕ್ಟರ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಗಂಗಮ್ಮ, ಕೋವಿಡ್ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ವಿಷಾದದ ಸಂಗತಿ. ಕೋವಿಡ್ ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಅನ್ನ ಆಹಾರ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಕೊರತೆಯಿಂದ ಯಾತನೆ ಪಡುವಂತಾಗಿದೆ. ಇದರಿಂದ ರೈತರು, ಕೃಷಿಕೂಲಿ ಕಾರ್ಮಿಕರು, ಬಡವರು, ಸಣ್ಣ ಉದ್ಯಮಿಗಳು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕುಶಲಕರ್ಮಿಗಳು ಸಂಕಷ್ಟದ ಕುಲುಮೆಯಲ್ಲಿ ಬೇಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕಾದ ಸರ್ಕಾರ ಮದ್ಯ ಮಾರಾಟದ ಅಂಗಡಿ ತೆರೆಯಲು ಅನುಮತಿ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ನಾಗರಾಜ ಪೂಜಾರ ಮಾತನಾಡಿ, ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ನೀಡಿದ ಆದೇಶವನ್ನು ಕೂಡಲೇ ರದ್ದು ಮಾಡಬೇಕು. ಸಿಂಧನೂರು ತಾಲೂಕು ಜಾಲವಾಡಿಗಿ ಸೇರಿ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಿದೆ. ದಿನವೂ ಸಣ್ಣಪುಟ್ಟ ಜಗಳಗಳು ನಡೆಯುತ್ತಿವೆ. ಇದರಿಂದ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಬಸವರಾಜ ಏಕ್ಕಿ, ಬಿ.ಎನ್‌. ಯರದಿಹಾಳ, ಮೌನೇಶ ಜಾಲವಾಡಗಿ, ಮಲ್ಲಿಕಾರ್ಜುನ ಕುರುಗೋಡು, ಅಮೀನಸಾಬ ನದಾಫ್‌ ಸೇರಿದಂತೆ ಇತರ ಮಹಿಳೆಯರು ಇದ್ದರು.

ಟಾಪ್ ನ್ಯೂಸ್

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

13pejavara

ಗೋವನ್ನು ಮಾತೆಯಂತೆ ಗೌರವಿಸಲು ಪೇಜಾವರ ಶ್ರೀ ಸಲಹೆ

11kaluve

ಹೂಳು; ಕಾಲುವ್ಯಾಗ ನೀರು ಹೆಂಗ್‌ ಹರಿತಾದ್ರಿ?

10flood

ಬೀದರ ಈಗ ಪ್ರವಾಹ ಪೀಡಿತ ಜಿಲ್ಲೆ!

9rss

ದೇಶದಲ್ಲೇ ಆರೆಸ್ಸೆಸ್ ಬಲಿಷ್ಠ ಸಂಘಟನೆ: ದಿಲೀಪ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.