ಎಸ್ಸೆಸ್ಸೆಲ್ಸಿ ಸುಧಾರಣೆ ಕಾರ್ಯಾಗಾರ


Team Udayavani, Feb 1, 2022, 2:19 PM IST

19sslc

ಭಾಲ್ಕಿ: ಪ್ರಸ್ತುತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಮಾಡುವಲ್ಲಿ ಮುಖ್ಯಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಬಾರಾಟಕ್ಕೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ನಿಮಿತ್ತ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮುಖ್ಯಶಿಕ್ಷಕರಿಗಾಗಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

ಮುಖ್ಯಶಿಕ್ಷಕರು ಶಾಲೆಯ ಕನ್ನಡಿಯಾಗಿದ್ದಾರೆ. ಮುಖ್ಯಶಿಕ್ಷಕರು ಮನಸ್ಸು ಮಾಡಿದರೆ ತಮ್ಮ ಶಾಲೆಯ ಫಲಿತಾಂಶ ಪ್ರತಿಶತ ತರುವಲ್ಲಿ ಯಾವುದೇ ಸಂಶಯವಿಲ್ಲ. ಪ್ರತಿಶತ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳ ಫಲಿತಾಂಶದ ಗುಣಮಟ್ಟವೂ ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಮುಖ್ಯಶಿಕ್ಷಕರು ಕಾರ್ಯ ಪ್ರವರ್ತರಾಗಬೇಕು. ಹಾಗೆಯೇ ರಾಷ್ಟ್ರೀಯ ಕಾರ್ಯಕ್ರಮವಾದ 15+ ವಿದ್ಯಾರ್ಥಿಗಳ ಲಸಿಕಾಕರಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಉಪನಿರ್ದೇಶಕರ ಕಚೇರಿಯ ಎಸ್ಸೆಸ್ಸೆಲ್ಸಿ ಪರೀûಾ ನೋಡಲ್‌ ಅಧಿಕಾರಿ ಸಯ್ಯದ ಫುರಖಾನ ಪಾಶ್ಯಾ ಮಾತನಾಡಿ, ಸದ್ಯದಲ್ಲಿಯೇ ಫೆ.21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಮುಖ್ಯ ಪರೀಕ್ಷೆಗೆ ನೋಂದಾಯಿಸಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು. ಪೂರಕ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಮಗುವಿನ ಕಡೆ ಹೆಚ್ಚಿನ ಗಮನ ಹರಿಸಿ ಮುಖ್ಯ ಪರೀಕ್ಷೆಯಲ್ಲಿ ಎಲ್ಲರೂ ಉತ್ತೀರ್ಣರಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ಮಾತನಾಡಿ, ಫಲಿತಾಂಶದಲ್ಲಿ ಪ್ರತಿಸಲವೂ ತಾಲೂಕಿನಲ್ಲಿ ಉತ್ತಮ ವಾತಾವರಣ ಇದೆ. ಈ ವರ್ಷವೂ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಇದೆ. ಇನ್ನೂ ಪರೀಕ್ಷೆ ಬರೆಯಲು 50 ದಿನ ಬಾಕಿ ಇದೆ. ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮಾಡುವುದರೊಂದಿಗೆ ಉತ್ತಮ ಫಲಿತಾಂಶ ತರುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕರಾದ ಪ್ರಕಾಸ ರಾಠೊಡ, ಜಯರಾಜ ದಾಬಶೆಟ್ಟಿ, ಲಕ್ಷ್ಮಣ ಮೇತ್ರೆ ತಮ್ಮ-ತಮ್ಮ ಪ್ರೌಢಶಾಲೆಯ 2020ನೇ ಸಾಲಿನ ಫಲಿತಾಂಶ ವಿಶ್ಲೇಷಣೆ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ ಮಾತನಾಡಿದರು. ಕಾರ್ಯಾಗಾರದಲ್ಲಿ ದೈಹಿಕ ಶಿಕ್ಷಣಾಧಿಕಾರಿ ರಾಠೊಡ, ತಾಲೂಕು ಎಸ್‌ಎಸ್‌ಎಲ್‌ಸಿ ನೋಡಲ್‌ ಅಧಿಕಾರಿ ಇಸಿಒ ಸಹದೇವ.ಜಿ, ಜಯರಾಮ ಬಿರಾದಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.