ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ದಾಖಲೆ ಸಿದ್ಧಪಡಿಸಿಕೊಳ್ಳಿ
Team Udayavani, Aug 4, 2020, 1:48 PM IST
ಸಾಂದರ್ಭಿಕ ಚಿತ್ರ
ಬೀದರ: ಈಗಾಗಲೇ ಪ್ರಸ್ತುತ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಉಚಿತ ಪ್ರವೇಶಕ್ಕಾಗಿ ಅಗತ್ಯ ದಾಖಲೆ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಡಿಸಿ ರಾಮಚಂದ್ರನ್ ಆರ್. ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷದ ಮಾದರಿಯಲ್ಲಿಯೇ ಈ ವರ್ಷವೂ ಎಲ್ಲ ಪ್ರಕ್ರಿಯೆಯು ತೀವ್ರವಾಗಿ ನಡೆದು ಜಿಲ್ಲೆಯಲ್ಲಿನ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಕನ್ನಡ, ಉರ್ದು, ಮರಾಠಿ ಮಾಧ್ಯಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಅನುದಾನಿತ ಹಾಗೂ ಅನುದಾನ ರಹಿತ ಪಿಯುಸಿ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮತ್ತು ಪ್ರಾಂಶುಪಾಲರ ಸಹಕಾರದಿಂದ 2020-21ನೇ ಸಾಲಿಗಾಗಿ ಉಚಿತ ಪ್ರವೇಶ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸಲು ಕಾಳಜಿ ವಹಿಸಬೇಕು ಎಂದರು.
ಈ ವಿಷಯವು ವಿದ್ಯಾರ್ಥಿಗಳಿಗೆ ತಿಳಿಯಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಂಬಂಧಪಟ್ಟ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಅರ್ಜಿ ಹಾಗೂ ಸಂಪೂರ್ಣ ಮಾಹಿತಿಯನ್ನು ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದ ನಂತರ ಪಡೆಯಲು ಕ್ರಮ ವಹಿಸಲಾಗುವುದು ಎಂದು ಶಿಕ್ಷಣಾಧಿಕಾರಿ ಇನಾಯತ್ ಅಲಿ ಶಿಂಧೆ ಅವರು ಸಭೆಗೆ ಮಾಹಿತಿ ನೀಡಿದರು. ಸಹಾಯಕ ಆಯುಕ್ತ ಅಕ್ಷಯ್ ಶ್ರೀಧರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ