ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ
Team Udayavani, Apr 4, 2021, 7:31 PM IST
ಬೀದರ: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ ನೀಡಿದರು.
ನಗರದ ತಮ್ಮ ನಿವಾಸದಲ್ಲಿ ನಡೆದ ಜೆಡಿಎಸ್ ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಕಾರ್ಯಕರ್ತರು, ಮುಖಂಡರು ಪಕ್ಷದ ಅಭ್ಯರ್ಥಿಗಳೊಂದಿಗೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಬೇಕು. ಪಕ್ಷದ ಗೆಲುವಿಗೆ ಕಾರ್ಯಕರ್ತರ ಶ್ರಮ ಮುಖ್ಯವಾಗಿದ್ದು, ಜೆಡಿಎಸ್ ಪಕ್ಷದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡಬೇಕೆಂದು ಹೇಳಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಮೇಶ ಪಾಟೀಲ ಸೋಲಪುರ್ ಸೇರಿದಂತೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಶಾಸಕ ಬಂಡೆಪ್ಪ ಮತಯಾಚನೆ: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಅವರು ಈ ಕ್ಷೇತ್ರದ ಶಾಸಕರಾಗಲಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್ ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ಕ್ಷೇತ್ರ ವ್ಯಾಪ್ತಿಯ ಗೌರ, ಗುತ್ತಿ, ಕೋಟಮಾಳ, ಪ್ರತಾಪೂರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಬಡವರ, ರೈತರ, ಶ್ರಮಿಕರ ಪರವಾಗಿ ಕೆಲಸ ಮಾಡಿದ್ದೇವೆ.
ದೇವೇಗೌಡರು, ಕುಮಾರಸ್ವಾಮಿಯವರು ಬಡವರ, ಶ್ರಮಿಕರ, ರೈತರ ಪರವಾಗಿ ಕೆಲಸ ಮಾಡುವ ನಾಯಕರಾಗಿದ್ದಾರೆ ಎಂದರು. ಜೆಡಿಎಸ್ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಮಾತನಾಡಿ, ಜೆಡಿಎಸ್ ಗೆ ಮತ ನೀಡುವ ಮೂಲಕ ತಮಗೆ ಬಸವಕಲ್ಯಾಣ ಜನರ ಸೇವೆಗೆ ಅವಕಾಶ ನೀಡಲು ಮನವಿ ಮಾಡಿದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ
ಕಂಪ್ಲಿಯಲ್ಲಿ ಎಸಿಬಿ ದಾಳಿ: ಪಿಡಿಒ, ಗ್ರಾ.ಪಂ.ಸದಸ್ಯ ಸೇರಿ ಮೂವರ ಬಂಧನ
ಉದ್ಯಾವರ: ಬಸ್ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್ ಸಿಬಂದಿ ಸಾವು
ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು