ಅನ್ನದಾತರ ಮಕ್ಕಳಿಗೆ ವಿದ್ಯಾರ್ಥಿ ನಿಧಿ ಆಸರೆ

Team Udayavani, Dec 23, 2021, 1:19 PM IST

23vidyanidhi

ಬೀದರ: ಅನ್ನದಾತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿಜಾರಿಗೆ ತಂದಿರುವ “ಮುಖ್ಯಮಂತ್ರಿ ರೈತ ವಿದ್ಯಾ ನಿಧಿ’ ಯೋಜನೆಗೆ ಗಡಿ ನಾಡು ಬೀದರನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಜಿಲ್ಲೆಯಲ್ಲಿ ಕೇವಲ ಮೂರು ತಿಂಗಳಲ್ಲಿ 3722 ವಿದ್ಯಾರ್ಥಿಗಳು 1.02 ಕೋಟಿ ರೂ. ಸ್ಕಾಲರ್‌ಶಿಪ್‌ ಪಡೆದಿದ್ದಾರೆ.

ಸದಾ ಪ್ರಕೃತಿ ವಿಕೋಪದ ಹೊಡೆತಕ್ಕೆ ಸಿಲುಕಿ ರೈತ ವರ್ಗ ಆರ್ಥಿಕ ಸಂಕಷ್ಟಕ್ಕೆ ಒಳಗಾಗುವ ಹಿನ್ನೆಲೆ ಅವರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಕೃಷಿಕರಿಗೆ ನೆರವಾಗಲು ಬಸವರಾಜ ಬೊಮ್ಮಾಯಿ ಅವರು ಸಿಎಂಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ “ವಿದ್ಯಾ ನಿಧಿ’ ಮಹತ್ವಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದು, ಸೆ.5ರಂದು ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಅವರಿಂದ ಚಾಲನೆ ದೊರೆತಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ರೈತರ ಮಕ್ಕಳು ಮುಂದಿನ ವಿದ್ಯಾಭ್ಯಾಸದ ಕನಸು ಕೈಗೂಡಲು ಪ್ರತಿ ವರ್ಷ ಶಿಷ್ಯವೇತನ ಒದಗಿಸುವ ನೆರವಿನ ಕಾರ್ಯಕ್ರಮ ಇದಾಗಿದ್ದು, ವಾರ್ಷಿಕ ಶಿಷ್ಯವೇತನವನ್ನು ರೈತರ ಮಕ್ಕಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡಲಾಗುತ್ತಿದೆ. ಯೋಜನೆಯ ಲಾಭ ಪಡೆಯಬೇಕಾದರೆ ಎಲ್ಲ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್‌ ಖಾತೆಯನ್ನು ಕಡ್ಡಾಯವಾಗಿ ತಮ್ಮ ಆಧಾರ್‌ ಸಂಖ್ಯೆಗೆ ಜೋಡಣೆ ಮಾಡಿಸುವುದು ಕಡ್ಡಾಯವಾಗಿದೆ.

ಈ ಮಹತ್ವಕಾಂಕ್ಷಿ ಯೋಜನೆಯಡಿ ರಾಜ್ಯದ 17 ಲಕ್ಷ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಅಗತ್ಯ ಅನುದಾನ ಮೀಸಲಿಟ್ಟಿದೆ. ಬೀದರ ಜಿಲ್ಲೆಯಲ್ಲಿ ಈವರೆಗೆ 5328 ರೈತರ ಮಕ್ಕಳು ಅರ್ಜಿಹಾಕಿದ್ದು,ಅದರಲ್ಲಿ3722ಮಕ್ಕಳಿಗೆ1.02ಕೋಟಿ ರೂ. ಸ್ಕಾಲರ್‌ಶಿಪ್‌ ಪಡೆದಿದ್ದಾರೆ. ಬೀದರ ತಾಲೂಕಿನಲ್ಲಿ ಅತಿ ಹೆಚ್ಚು 1188 ಮಕ್ಕಳಿಗೆ 32.27 ಲಕ್ಷ ರೂ. ಹಣ ಬಿಡುಗಡೆ ಆಗಿದೆ. ಇನ್ನುಳಿದಂತೆ ಭಾಲ್ಕಿ ತಾಲೂಕಿನಲ್ಲಿ 963 ಮಕ್ಕಳಿಗೆ26.66 ಲಕ್ಷ ರೂ. ಬಸವಕಲ್ಯಾಣದ 662 ವಿದ್ಯಾರ್ಥಿಗಳಿಗೆ 18.38 ಲಕ್ಷ ರೂ., ಹುವåನಾಬಾದ್‌ ನಲ್ಲಿ 641 ಮಕ್ಕಳಿಗೆ 18.04 ಲಕ್ಷ ರೂ. ಮತ್ತು ಔರಾದ ತಾಲೂಕಿನಲ್ಲಿ 267 ವಿದ್ಯಾರ್ಥಿಗಳಿಗೆ 7.52 ಲಕ್ಷ ರೂ. ಬ್ಯಾಂಕ್‌ ಖಾತೆಗೆ ಜಮೆ ಆಗಿದೆ. “ವಿದ್ಯಾರ್ಥಿ ನಿಧಿ’ ಕಾರ್ಯಕ್ರಮ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.

ಮಕ್ಕಳು ಬೇರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ಈ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ಇದಕ್ಕಾಗಿ ಜಾತಿ ಅಥವಾ ಆದಾಯದ ಮಿತಿ ಇಲ್ಲ. ಎಲ್ಲ ವರ್ಗದವರಿಗೂ ಅನ್ವಯವಾಗಲಿದೆ. ಆದರೆ, ವಿದ್ಯಾರ್ಥಿ ತಂದೆ ಅಥವಾ ತಾಯಿ ಹೆಸರಿನಲ್ಲಿ ನಿರ್ದಿಷ್ಟ ಕೃಷಿ ಜಮೀನು ಹೊಂದಿದ್ದರೆ ಮಾತ್ರ ಅವರ ಮಕ್ಕಳು ವಿದ್ಯಾ ನಿಧಿ ಪಡೆಯಲು ಅರ್ಹರೆಂಬ ಷರತ್ತು ವಿದ್ಯಾರ್ಥಿಗಳಗೆ ಸಂಕಷ್ಟ ತಂದೊಡ್ಡಿದೆ.

ಯಾರಿಗೆ ಎಷ್ಟು ವೇತನ?

ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ., ಇನ್ನು ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಯರಿಗೆ 5,500 ರೂ., ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್‌, ಬಿ-ಫಾರ್ಮ್, ನರ್ಸಿಂಗ್‌, ವೃತ್ತಿಪರಕೋರ್ಸ್‌ ಗಳ ವಿದ್ಯಾರ್ಥಿಗಳಿಗೆ 7,500 ರೂ. ನೀಡಿದರೆ, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ.ಹಣವನ್ನು ರಾಜ್ಯ ಸರ್ಕಾರ ನೀಡುತ್ತದೆ. ಜತೆಗೆ ಎಂಬಿಬಿಎಸ್‌, ಬಿಇ, ಬಿ.ಟೆಕ್‌ ಸ್ನಾತಕೋತ್ತರ ಕೋರ್ಸ್‌ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಸಾವಿರ ಮತ್ತು ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯವೇತನ ನೀಡಲಾಗುತ್ತಿದೆ. ರಾಜ್ಯದಲ್ಲಿ ನೋಂದಣಿಯಾದ ಯಾವುದೇ ಶಿಕ್ಷಣಸಂಸ್ಥೆಗಳಲ್ಲಿ ಪ್ರವೇಶ ಪಡೆದವರಿಗೆ ಯೋಜನೆಯ ಲಾಭ ದೊರೆಯಲಿದೆ.

-­ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.