Udayavni Special

ಬಾಕಿ ಬೆಳೆ ವಿಮೆ ಪಾವತಿಗೆ ಕ್ರಮ ವಹಿಸಿ: ಡಿಸಿ

ವಿಮಾ ಸಂಸ್ಥೆಯವರು ಹೆಚ್ಚಿನ ಗಮನ ಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Team Udayavani, Mar 17, 2021, 6:34 PM IST

DC

ಬೀದರ: ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದಾದ ಹಾನಿಗೆ ಬೆಳೆವಿಮೆ ಮಾಡಿಸಿಕೊಂಡ ಜಿಲ್ಲೆಯ ಅಂದಾಜು 1.98 ಲಕ್ಷ ರೈತರಿಗೆ ತಕ್ಷಣ ಬೆಳೆ ವಿಮಾ ಮೊತ್ತ ಪಾವತಿಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು ಸಂಬಂಧಿಸಿದ ವಿಮಾ ಸಂಸ್ಥೆ ಅಧಿಕಾರಿಗಳು ಮತ್ತು ಕೃಷಿ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆಯಡಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕುಂದುಕೊರತೆ ನಿವಾರಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2016-17, 2018-2019 ಮತ್ತು 2019-20ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿಕೊಂಡಿರುವ ರೈತರಿಗೆ ಬೆಳೆ ವಿಮೆ ಪರಿಹಾರ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಬೇಕು.

ಈ ಮೂರು ವರ್ಷಗಳ ಅವಧಿಯಲ್ಲಿ ಉಳಿಸಿಕೊಂಡಿರುವ ಬಾಕಿ ವಿಮಾ ಪರಿಹಾರ ಮೊತ್ತವನ್ನು ಕೂಡಲೇ ರೈತರಿಗೆ ಸಂದಾಯ ಮಾಡಲು ಸಂಬಂಧಿಸಿದ ವಿಮಾ ಸಂಸ್ಥೆಯವರು ಹೆಚ್ಚಿನ ಗಮನ ಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿಯೇ ರೈತರ ಆದಾಯದ ಮೂಲವಾಗಿದೆ. ಸಾಕಷ್ಟು ಖರ್ಚು ವೆಚ್ಚ ಮಾಡಿ ಬಿತ್ತನೆ ಮಾಡುವ ರೈತನಿಗೆ ನಿರೀಕ್ಷಿಸಿದಷ್ಟು ಆದಾಯ ಬರದೇ ಇದ್ದಾಗ ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಇದ್ದನ್ನರಿತು ಜಿಲ್ಲೆಯ ರೈತರ ಹಿತ ಕಾಪಾಡಲು ಅವರಿಗೆ ಬಾಕಿ ಇರುವ ವಿಮಾ ಮೊತ್ತ ರೈತರ ಕೈಸೇರುವಂತೆ ಅನುಕೂಲವಾಗಲು ತಾವುಗಳು ಉತ್ತಮ ಸಮನ್ವಯ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೆ ವೇಳೆ ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್‌., ಉಪ ನಿರ್ದೇಶಕರಾದ ಸೋಮಶೇಖರ ಬಿರಾದಾರ, ಸೂರ್ಯಕಾಂತ ಬಿರಾದಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ ಯದಲಾಪುರೆ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಬಿ.ಎಂ. ಕಮತಗಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಇದ್ದರು.

2016-17ನೇ ಸಾಲಿನಲ್ಲಿ ಬಾಕಿ ಇರುವ 33 ರೈತರ ಉಳಿತಾಯ ಖಾತೆ ಮತ್ತು ಆಧಾರ್‌ ಸಂಖ್ಯೆ ಜೋಡಣೆ ಪ್ರಕ್ರಿಯೆ ತೀವ್ರ ನಡೆಸಬೇಕು. 2018-19ನೇ ಸಾಲಿನಲ್ಲಿ 8076 ರೈತರ ಅರ್ಜಿಗಳನ್ನು ವಿಮಾ ಕಂಪನಿಯವರು ತಿರಸ್ಕರಿಸಿದ್ದು, ವಿಮಾ ಕಂಪನಿಯವರು ಈ ಮಾಹಿತಿಯನ್ನು ಕೂಡಲೇ ಎಲ್ಲ ರೈತರಿಗೆ ತಿಳಿಸಿ ಅವರಿಂದ ಆಕ್ಷೇಪಣೆ ಇದ್ದರೆ ವಿಮಾ ಕಂಪನಿಯ ಪ್ರತಿನಿಧಿಗಳು ಅದನ್ನು ಕೂಡಲೇ ಪಡೆಯಬೇಕು.
ರಾಮಚಂದ್ರನ್‌ ಆರ್‌., ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

ghhrre

ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

ಧರ್ಮಶಾಲಾದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆ, ಮನೆಗೆ ತೆರಳಿ ಮತಯಾಚಿಸಿದ ಜನಪ್ರತಿನಿಧಿಗಳು

Anubhava

ರಾಜಕೀಯದ “ಅನುಭವ’ಕ್ಕೆ “ಮಂಟಪ’ವೇ ವೇದಿಕೆ!

we

ಬೀದರ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ..!

Laxman

ಕಲ್ಯಾಣದ ಹಿಂದುಳಿದ ಹಣೆಪಟ್ಟಿ ಅಳಿಸುತ್ತೇವೆ: ಲಕ್ಷ್ಮಣ ಸವದಿ

ಬದುಕು ಹಸನಾಗಿಸಿದ ಕಾಂಗ್ರೆಸ್‌

ಬದುಕು ಹಸನಾಗಿಸಿದ ಕಾಂಗ್ರೆಸ್‌

MUST WATCH

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

ಹೊಸ ಸೇರ್ಪಡೆ

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

gjtrjrt

ಕಷ್ಟ ನಿವಾರಿಸಬಲ್ಲದೇ ಬಹುಗ್ರಾಮ ನೀರು ಪೂರೈಕೆ ಯೋಜನೆ?

ghhrre

ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

dfgtgetger

ಯುಗಾದಿಯ ಮುಳ್ಳು ಹರಕೆ ಉತ್ಸವ

15-9

ಪ್ರತಿಷ್ಠೆ ಕೈಬಿಟ್ಟು ಸಮಸ್ಯೆ ಬಗೆಹರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.