ಕೋವಿಡ್ ಲಸಿಕೆ ಪಡೆದ ಬೀದರ ಡಿಸಿ ರಾಮಚಂದ್ರನ್
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಫೆ.8ರಂದು ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
Team Udayavani, Feb 9, 2021, 5:01 PM IST
ಬೀದರ: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಸೋಮವಾರ ಕೋವಿಡ್-19 ಲಸಿಕೆ (ಕೋವಿ ಶಿಲ್ಡ್) ಪಡೆದುಕೊಂಡರು. ಲಸಿಕೆ ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ನಗರದ ಮಂಗಲಪೇಟದಲ್ಲಿರುವ ಪೊಲೀಸ್ ಆರೋಗ್ಯ ಕೇಂದ್ರಕ್ಕೆ ಬೆಳಗ್ಗೆ ಖುದ್ದು ಆಗಮಿಸಿದರು. ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ವಿ.ಜಿ. ರೆಡ್ಡಿ ಅವರು ಜಿಲ್ಲಾಧಿಕಾರಿಗೆ ಮೊದಲನೇ ಲಸಿಕೆ ನೀಡಿದರು.
ಬಳಿಕ ಜಿಲ್ಲೆಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕೋವಿಶಿಲ್ಡ್ ಲಸಿಕೆ ಬಗ್ಗೆ ಯಾವುದೇ ಭಯ ಭೀತಿಗೆ ಅವಶ್ಯಕತೆ ಇರುವುದಿಲ್ಲ. ಅತ್ಯಂತ ಸುರಕ್ಷಿತವಾದ ಕೋವಿಶಿಲ್ಡ್ ಲಸಿಕೆಯನ್ನು ಈಗಾಗಲೇ ಗುರುತಿಸಿದ, ಮುಂಚೂಣಿಯಲ್ಲಿರುವ ಇಲಾಖೆಗಳ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯು ತಪ್ಪದೇ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಡಾ| ವಿ.ಜಿ. ರೆಡ್ಡಿ, ಮೊದಲ ಹಂತದಲ್ಲಿ ಗುರುತಿಸಿದ ಇಲಾಖೆಗಳಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಫೆ.8ರಂದು ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಲಸಿಕೆ ನೀಡುವ ಮೊದಲು ಆರೋಗ್ಯ ಇಲಾಖೆಯ ಸಿಬ್ಬಂದಿಯು ಜಿಲ್ಲಾಧಿಕಾರಿಗಳಿಂದ ಅವರ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಸೇರಿದಂತೆ
ಅಗತ್ಯ ವಿವರ ಪಡೆದುಕೊಂಡರು. ತಾಲೂಕು ಆರೋಗ್ಯಾಧಿಕಾರಿ ಲಕ್ಷ್ಮಣ ಜಾದವ್, ಪೊಲೀಸ್ ಆರೋಗ್ಯದ ಕೇಂದ್ರದ ವೈದ್ಯಾಧಿಕಾರಿ ಅನಿಲಕುಮಾರ ಚತುರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಓಂಕಾರ ಮಲ್ಲಿಗೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ
ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್ ದಿನಾಂಕ ಖುದ್ದಾಗಿ ಅಪ್ಡೇಟ್ ಮಾಡಿ!
ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!
ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ
ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ