ಸಿಂಗಾಪುರ ಕನಸು ಬಿತ್ತಿ ಅಭಿವೃದ್ಧಿ ಬರ ಸೃಷ್ಟಿಸಿದರು!


Team Udayavani, Apr 7, 2018, 12:04 PM IST

bid-1.jpg

ಬೀದರ: ಅಪ್ಪಟ ಹಳ್ಳಿಗಳನ್ನು ಹೊಂದಿರುವ ಬೀದರ ದಕ್ಷಿಣ ಕ್ಷೇತ್ರ ವಿಭಿನ್ನವಾಗಿ ಗುರುತಿಸಿಕೊಂಡಿದೆ. ರಾಜಕಾರಣಿಗಳ ಆರಾಧ್ಯ ದೇವ ರೇಕುಳಗಿಯ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳನ್ನು ಹೊಂದಿದೆ. ಶಾಸಕ ಅಶೋಕ ಖೇಣಿ ಸಿಂಗಾಪುರದ ಕನಸನ್ನು ಬಿತ್ತಿದ್ದ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಕೃಷಿಗೆ ಉತ್ತೇಜನ ನೀಡುವಂಥ ಯಾವುದೇ ಕೆಲಸಗಳು ಆಗಿಲ್ಲ. ಹಾಗಾಗಿ ರೈತರು ಹಗ್ಗಕ್ಕೆ ಕೊರಳೊಡ್ಡುವುದು ನಿಂತಿಲ್ಲ.

ನೈಸ್‌ ಸಂಸ್ಥೆ ಮುಖ್ಯಸ್ಥರೂ ಆಗಿರುವ ಅಶೋಕ ಖೇಣಿ ಈ ಕ್ಷೇತ್ರವನ್ನು ಪ್ರತಿನಿಧಿ ಸುತ್ತಿದ್ದಾರೆ. ಒಟ್ಟು 124 ಹಳ್ಳಿಗಳನ್ನು ಹೊಂದಿರುವ ಈ ಕ್ಷೇತ್ರ ರಾಷ್ಟ್ರೀಯ ಹೆದ್ದಾರಿ 9ಕ್ಕೆ ಹೊಂದಿಕೊಂಡಿದ್ದು, ಬೀದರ ದಕ್ಷಿಣ ನಿರ್ಣಾ, ಬೆಮಳಖೇಡಾ, ಸಿರ್ಸಿ ಔರಾದ, ಬಗದಲ್‌, ಮನ್ನಳ್ಳಿ ಮತ್ತು ಚಿಟ್ಟಾ ಸೇರಿದಂತೆ 7 ಜಿಪಂ ಕ್ಷೇತ್ರಗಳನ್ನು ಒಳಗೊಂಡಿದೆ. ಇಲ್ಲಿನ ಜನ ಕೃಷಿ ಮೇಲೆ ಹೆಚ್ಚು ಅವಲಂಬಿತರಾಗಿದ್ದು, ಹೆಚ್ಚಾಗಿ ಮಳೆಯನ್ನೇ ಆಶ್ರಯಿಸಿದ್ದಾರೆ. ರೈತರ ಜೀವನಾಡಿ ಆಗಬೇಕಿದ್ದ ಕಾರಂಜಾ ಜಲಾಶಯದ ಲಾಭ ಕೊನೆಯಂಚಿನ ರೈತರಿಗೆ ತಲುಪುತ್ತಿಲ್ಲ. ತಾಲೂಕಿನಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯಲಾಗುತ್ತದೆ. ಆದರೆ, ವೈಜ್ಞಾನಿಕ ಬೆಲೆ ಸಿಗದೇ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಬೀದರ ದಕ್ಷಿಣ ಈವರೆಗೆ ಕೇವಲ ಎರಡು ಚುನಾವಣೆಗಳನ್ನು ಮಾತ್ರ ಎದುರಿಸಿದೆ. ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ಹುಲಸೂರ ಮೀಸಲು ಕ್ಷೇತ್ರ ಬದಲಾಗಿ ಬೀದರ ದಕ್ಷಿಣ ಅಸ್ತಿತ್ವಕ್ಕೆ ಬಂದಿದೆ. ಹೊಸ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಬಳಿಕ 2008ರಲ್ಲಿ ಮೊದಲ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ ತನ್ನ ಪ್ರಾಬಲ್ಯ ಮೆರೆದಿತ್ತು. 2004ರಲ್ಲಿ ಬೀದರ ಕ್ಷೇತ್ರದಿಂದ ಗೆದ್ದು ಕುಮಾರಸ್ವಾಮಿ ಸರ್ಕಾರದಲ್ಲಿ ಕೃಷಿ ಖಾತೆ ಸಚಿವರಾಗಿದ್ದ ಬಂಡೆಪ್ಪ ಖಾಶೆಂಪುರ ದಕ್ಷಿಣದತ್ತ ಮುಖ ಮಾಡಿ ಬಿಜೆಪಿಯ ಸಂಜಯ ಖೇಣಿ ವಿರುದ್ಧ ಗೆದ್ದಿದ್ದರು.

ನಂತರ 2013ರ ಚುನಾವಣೆಯಲ್ಲಿ ಉದ್ಯಮಿ ಅಶೋಕ ಖೇಣಿ ಕ್ಷೇತ್ರಕ್ಕೆ ಪ್ರವೇಶಿಸಿದರು. ನೈಸ್‌ ಅಕ್ರಮಗಳ ಮಸಿ ಬಳಿದುಕೊಂಡಿದ್ದ ಖೇಣಿ ಕರ್ನಾಟಕ ಮಕ್ಕಳ ಪಕ್ಷದ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಭರವಸೆ ಮಾತುಗಳಾಗಿ ಮತಗಳನ್ನು ಪಡೆದ ಖೇಣಿ ನಂತರ ಮಾತು ಉಳಿಸಿಕೊಳ್ಳುವ ಪ್ರಯತ್ನವೇ ಮಾಡಲಿಲ್ಲ. 15,778 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ಖೇಣಿ ಕ್ಷೇತ್ರವನ್ನು ಎರಡೇ ವರ್ಷದಲ್ಲಿ ಸಿಂಗಾಪುರನಂತೆ ಅಭಿವೃದ್ಧಿ ಮಾಡುವೆ ಎಂದು ಭರವಸೆ ನೀಡಿದ್ದರು. ಆದರೆ, ಐದು ವರ್ಷದಲ್ಲಿ ಹೇಳಿಕೊಳ್ಳುವಂಥ ಯಾವುದೇ ಪ್ರಗತಿ ಈ ಕ್ಷೇತ್ರದಲ್ಲಿ ಕಾಣಿಸಲಿಲ್ಲ. ಇಂದಿಗೂ ಪ್ರತಿ ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ. ಕೆಲವೆಡೆ ಇತ್ತೀಚೆಗಷ್ಟೇ ಕೆಲವೆಡೆ ರಸ್ತೆಗಳ ಅಭಿವೃದ್ಧಿ, ಸೋಲಾರ್‌ ಘಟಕಗಳ ಸ್ಥಾಪನೆ, ಶುದ್ದ ಕುಡಿಯುವ ನೀರಿನ ಘಟಕ ಮತ್ತು ಬ್ರಿಡ್ಜ್ಗಳ ನಿರ್ಮಾಣ ಕೆಲಸ
ಆಗಿದೆ.

ಯಶಸ್ವಿ ಉದ್ಯಮಿಯಾಗಿರುವ ಖೇಣಿ ಕ್ಷೇತ್ರದ ಜನರ ಕೈ ಸಿಗುವುದಿಲ್ಲ. ಬೆಂಗಳೂರು ಇಲ್ಲವೇ ವಿದೇಶಗಳಲ್ಲಿ ಹೆಚ್ಚಿರುತ್ತಾರೆ ಎಂಬ ಆರೋಪ ಇದೆ. ಸದಾ ಒಂದಿಲ್ಲೊಂದು ವಿಭಿನ್ನ ಹೇಳಿಕೆ ನೀಡುವ ಮೂಲಕ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಕ್ಷೇತ್ರದಿಂದ ಅಂತರ ಕಾಯ್ದುಕೊಂಡಿರುವ ಶಾಸಕರು ಸ್ಥಳೀಯ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂಬ ನೋವು ಇಲ್ಲಿನವರದ್ದು. ಭಾರಿ ವಿರೋಧದ ನಡುವೆಯೂ ಈಗ ಖೇಣಿ ಕಾಂಗ್ರೆಸ್‌ನ ಸೇರಿದ್ದು, ಮತ್ತೂಮ್ಮೆ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಆದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ನ್ನು ಸಂಘಟಿಸಿರುವ ಮಾಜಿ ಸಿಎಂ ದಿ| ಧರ್ಮಸಿಂಗ್‌ ಪುತ್ರ ಚಂದ್ರಾಸಿಂಗ್‌ ಅಡ್ಡಗಾಲಾಗಿದ್ದಾರೆ. ಸರಳ ವ್ಯಕ್ತಿತ್ವದ ಬಂಡೆಪ್ಪ ಖಾಶೆಂಪುರ ಜೆಡಿಎಸ್‌ನಿಂದ ಸ್ಪರ್ಧೆಗಳಿದಿದ್ದರೆ, ಬಿಜೆಪಿಯಿಂದ ಶೈಲೇಂದ್ರ ಬೆಲ್ದಾಳೆ ಮುಖ್ಯ ಆಕಾಂಕ್ಷಿಯಾಗಿದ್ದಾರೆ.

ತೆಲಂಗಾಣಕ್ಕೆ ಹೊಂದಿಕೊಂಡಿರುವ ಈ ಕ್ಷೇತ್ರದಲ್ಲಿ ಕೃಷಿಯೇ ಮೂಲ. ಆದರೆ, ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಮತ್ತು ರೈತರಿಗೆ ಪ್ರೋತ್ಸಾಹ ಸಿಗುವಂಥ ಯಾವುದೇ ಯೋಜನೆ ರೂಪಿಸಲಿಲ್ಲ. ವೈಜ್ಞಾನಿಕ ಪರಿಹಾರಕ್ಕಾಗಿ ಕಾಯುತ್ತಿರುವ ಕಾರಂಜಾ ಸಂತ್ರಸ್ತರ ಕಣ್ಣೀರೋರೆಸುವ ಕೆಲಸ ಆಗಿಲ್ಲ. ಉದ್ಯಮಿ ಖೇಣಿ ಅವರಿಂದ ಕೈಗಾರಿಕೆಗಳು ಸ್ಥಾಪನೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿ ನಿರುದ್ಯೋಗ ಸಮಸ್ಯೆ ಹಾಗೆಯೇ ಉಳಿಯಿತು.

ಕ್ಷೇತ್ರದ ಬೆಸ್ಟ್‌ ಏನು?
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಪ್ರಯತ್ನ ಆಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ಬೀದರ- ಮನ್ನಾಎಖ್ಖೇಳ್ಳಿ ಮುಖ್ಯ ರಸ್ತೆಗೆ ದುರಸ್ತಿ ಯೋಗ ಕೂಡಿಬಂದಿದ್ದು, ಅರ್ಧದಷ್ಟು ಪೂರ್ಣಗೊಂಡಿದೆ. ರಂಜೇರಿದಿಂದ ಹಳ್ಳಿಖೇಡವರೆಗೆ ಬಹುಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸಿರುವುದು ವಿಶೇಷ. ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಕ್ಷೇತ್ರದ ಕೆಲವೆಡೆ ಉಚಿತ ವೈಫೈ ಸೇವೆ ಅವಕಾಶ ಮಾಡಿಕೊಡಲಾಗಿದೆ.

ಕ್ಷೇತ್ರದ ದೊಡ್ಡ ಸಮಸ್ಯೆ?
ಶಾಸಕರ ಅವಧಿಯಲ್ಲಿ 2000 ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಅಭಿವೃದ್ಧಿ ಮಾಡಿರುವೆ
ಎಂಬುದು ಖೇಣಿ ವಾದ. ಆದರೆ, ವಾಸ್ತವದಲ್ಲಿ ಅಭಿವೃದ್ಧಿ ಕಣ್ಣಿಗೆ ಕಾಣಿಸುತ್ತಿಲ್ಲ. ಕಾರಂಜಾ ಜಲಾಶಯದ ಕಾಲುವೆಗಳು ಹದಗೆಟ್ಟಿದ್ದು, ಕೊನೆಯಂಚಿನ ರೈತರಿಗೆ ನೀರು ತಲುಪುತ್ತಿಲ್ಲ. ಕೆಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಕೃಷಿಗೆ  ಉತ್ಸಾಹ ಸಿಗದಿರುವುದು, ಕಬ್ಬಿಗೆ ಉತ್ತಮ ಬೆಲೆ ಇಲ್ಲದೇ ಕ್ಷೇತ್ರದಲ್ಲಿ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯೋಗ ಅರಸಿ ಇಲ್ಲಿನ ಜನರು ಹೈದ್ರಾಬಾದ, ಬೆಂಗಳೂರಿಗೆ ವಲಸೆ ಹೋಗಿದ್ದು, ವಲಸೆ ತಪ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಆಗಲೇ ಇಲ್ಲ.

ಶಾಸಕರು ಏನಂತಾರೆ?
ಬೀದರ ದಕ್ಷಿಣ ಕ್ಷೇತ್ರದಲ್ಲಿ ಜನರು ನನ್ನ ಮೇಲಿಟ್ಟಿದ್ದ ನಿರೀಕ್ಷೆಯಂತೆ ನಾನು ಐದು ವರ್ಷ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಪ್ರತಿ ಹಳ್ಳಿಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ ಸೇರಿದಂತೆ ಮೂಲಭೂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನ ಪಟ್ಟಿದ್ದೇನೆ. ವಿವಿಧ ಕಡೆಗಳಲ್ಲಿ ಉಚಿತ ವೈಫೈ ಸೇವೆ ಒದಗಿಸಿದ್ದೇನೆ. ಬಹು ಕೋಟಿ ರೂ.ಗಳ ವೆಚ್ಚದಲ್ಲಿ ಮುಖ್ಯ ರಸ್ತೆಗಳು, ಹೆದ್ದಾರಿಗಳ
ನಿರ್ಮಾಣ ಕಾರ್ಯ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗಳ ದುರಸ್ತಿಗೆ ಅನುದಾನ ಮಂಜೂರಾಗಿದೆ.
ಅಶೋಕ ಖೇಣಿ 

ಕ್ಷೇತ್ರ ಮಹಿಮೆ
ರಾಷ್ಟ್ರಪತಿ ಸೇರಿದಂತೆ ರಾಜಕಾರಣಿಗಳು ಮತ್ತು ದೊಡ್ಡ ಉದ್ಯಮಿಗಳು ಆರಾಧಿಸುವ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ ಬೀದರ ದಕ್ಷಿಣದಲ್ಲಿದೆ. ಇಲ್ಲಿ ಹರಕೆ ಹೊತ್ತರೆ ಈಡೇರುವುದು ಖಚಿತ ಎಂಬ ಪ್ರತೀತಿ ಇದೆ. ಬಗದಲ್‌ನ ಖಾದ್ರಿ ಸಾಹೇಬ್‌ ದರ್ಗಾಕ್ಕೆ ದೇಶ- ವಿದೇಶಗಳಿಂದ ಮುಸ್ಲಿಂ ಬಾಂಧವರು ಬರುತ್ತಾರೆ. ಅಷ್ಟೇ ಅಲ್ಲ, ಚಾಂಗಲೇರಾದ ಶ್ರೀ ವೀರಭದ್ರೇಶ್ವರ, ಕರಕನಳ್ಳಿಯ ಶ್ರೀ ಬಕ್ಕಪ್ರಭು,
ರೇಕುಳಗಿಯ ಬೌದ್ಧ ವಿಹಾರ ಮತ್ತು ನಿರ್ಣಾದ ಬುತ್ತಿ ಬಸವಣ್ಣ ದೇವಸ್ಥಾನಗಳು ಪ್ರಮುಖ ಧಾರ್ಮಿಕ ಕೇಂದ್ರಗಳಾಗಿ ಬೆಳೆದು ನಿಂತಿವೆ. 

ಬೀದರ ದಕ್ಷಿಣ ಕ್ಷೇತ್ರದಲ್ಲಿ ರಸ್ತೆಗಳ ನಿರ್ಮಾಣ ಕೆಲಸ ಆಗಿರುವುದು ಬಿಟ್ಟರೇ ಮತ್ತಾವ ಕೆಲಸಗಳಾಗಿಲ್ಲ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆ ಇದೆ. ಉದ್ಯೋಗ ಮಾಡುವಂಥ ನಿರುದ್ಯೋಗಗಳು ಹೆಚ್ಚಿದ್ದಾರೆ. ಆದರೆ, ಖಾಸಗಿ ಸಕ್ಕರೆ ಕಾರ್ಖಾನೆಗಳು ಬಿಟ್ಟರೆ ಒಂದು ಒಂದು ಕೈಗಾರಿಕೆ ಸ್ಥಾಪಿಸುವ ಪ್ರಯತ್ನಗಳು ಆಗಿಲ್ಲ.
ಉಮೇಶ ರಾಮಣ್ಣ

ಕ್ಷೇತ್ರದ ವಿವಿಧ ಗ್ರಾಮೀಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಉತ್ತಮ ರಸ್ತೆಗಳು ನಿರ್ಮಾಣ ಆಗಿವೆ. ಆದರೆ, ಶಾಸಕ ಖೇಣಿ ಕ್ಷೇತ್ರದತ್ತ ಮುಖ ಮಾಡದೇ, ಜನರಿಂದ ದೂರ ಉಳಿದಿದ್ದಾರೆ. ಇಲ್ಲಿನವರ ಸಮಸ್ಯೆಗಳನ್ನು ಆಲಿಸುವುದಿಲ್ಲ. ನಮ್ಮ ನೋವಿಗೆ ದನಿಯಾಗದಿದ್ದರೆ ಸರ್ಕಾರಕ್ಕೆ ನಮ್ಮ ಬೇಡಿಕೆಗಳು ಹೇಗೆ ಅರಿಯಲು ಸಾಧ್ಯ?
ಪ್ರಭು ಬಿರಾದಾರ 

ಬೀದರ ದಕ್ಷಿಣ ತೆಲಂಗಾಣ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕ್ಷೇತ್ರ. ಆದರೆ, ಖಾಸಗಿ ಸಕ್ಕರೆ ಕಾರ್ಖಾನೆ ಹೊರತುಪಡಿಸಿದರೆ ಒಂದು ಕೈಗಾರಿಕೆ ಸಹ ಇಲ್ಲ. ಹಾಗಾಗಿ ಉದ್ಯೋಗಕ್ಕಾಗಿ ಯುವಕರು ಸಲಹೆ ಹೋಗುತ್ತಿದ್ದಾರೆ. ಕ್ಷೇತ್ರದಲ್ಲಿ ಕೈಗೆ ಕೆಲಸ ಕೊಡುವಂಥ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ಕೊಡಬೇಕಿದೆ.
ನಾಗನಾಥ ಅಂಬ್ರೆಪ್ಪ

ಬೀದರ ದಕ್ಷಿಣ ಕ್ಷೇತ್ರವನ್ನು ಎರಡೇ ವರ್ಷದಲ್ಲಿ ಸಿಂಗಾಪುರ ಮಾದರಿ ಅಭಿವೃದ್ಧಿ ಮಾಡುವುದಾಗಿ ಶಾಸಕರು ಭರವಸೆ ನೀಡಿದ್ದರು. ಆದರೆ, ಒಂದು ಗ್ರಾಮ ಸಹ ಪ್ರಗತಿ ಮಾಡಲು ಸಾಧ್ಯವಾಗಿಲ್ಲ. ಶಾಸಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಕೆಲವು ಗ್ರಾಮಗಳಲ್ಲಿ ಮಾತ್ರ ಮೂಲ ಸೌಕರ್ಯಗಳು ಸಿಕ್ಕಿದ್ದು, ಬಹುತೇಕ ಹಳ್ಳಿಗಳು ವಂಚಿತವಾಗಿವೆ. ಅಲ್ಲಿಯ ಜನರಿಗೆ ಸವಲತ್ತುಗಳು ಸಿಗಬೇಕು.
ಧೂಳಪ್ಪ ಬುಕ್ಕಾ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.