ಹುತಾತ್ಮರಾದ ಹುಮನಾಬಾದ ಮಹನೀಯರು

Team Udayavani, Sep 17, 2019, 3:13 PM IST

BIDAR-TDY-2

ಹುಮನಾಬಾದ: ಆರ್ಯ ಸಮಾಜದ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದ್ದ ಈಗಿನ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಪ್ರವೇಶ ದ್ವಾರ.

ಹುಮನಾಬಾದ: ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಹುಮನಾಬಾದ ಪಟ್ಟಣದ ಹೆಜ್ಜೆಗುರುತುಗಳೂ ಕಾಣುತ್ತವೆ. ನಿಜಾಮನ ದೌರ್ಜನ್ಯದಿಂದ ಈ ಭಾಗ ಮುಕ್ತಗೊಳಿಸುವುದಕ್ಕಾಗಿ ಯಾರ್ಯಾರು ಎಷ್ಟೆಲ್ಲ ಸಂಕಷ್ಟ ಅನುಭವಿಸಿ, ಹುತಾತ್ಮರಾದರು ಎಂಬುದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಕರ್ನಾಟಕದ ಬೀದರ, ಕಲಬುರಗಿ, ರಾಯಚೂರು ಸೇರಿ ಮೂರು ಜಿಲ್ಲೆಗಳು ಹಾಗೂ ಮಹಾರಾಷ್ಟ್ರದ ಉಸ್ಮಾನಾಬಾದ, ಲಾತೂರ, ಜಾಲ್ನಾ, ಬೀಡ್‌, ನಳದುರ್ಗ 5 ಜಿಲ್ಲೆ ಹಾಗೂ ಆಂಧ್ರ ಪ್ರದೇಶದ 8 ಜಿಲ್ಲೆಗಳು ನಿಜಾಮನ ಆಡಳಿತ ವ್ಯಾಪ್ತಿಗೆ ಒಳಪಟ್ಟಿದ್ದವು. ಈ ವ್ಯಾಪ್ತಿಯಲ್ಲಿ 2,250 ಗ್ರಾಮ, 100 ತಹಶೀಲ್ದಾರ್‌ ಕಚೇರಿ ಇದ್ದವು.

ನಿಜಾಮನ ಆಡಳಿತದಿಂದ ಮುಕ್ತಿ ಪಡೆಯಲು ಈ ಭಾಗದ ತಾಲೂಕಿನ ಹಳ್ಳಿಖೇಡ(ಬಿ)ದ ಭಾಯಿ ಶಾಮಲಾಲ್ ಮತ್ತು ಭಾಯಿ ಬನ್ಸಿಲಾಲ್, ವಿದ್ಯಾಧರ ಗುರೂಜಿ, ವಿಶ್ವನಾಥರೆಡ್ಡಿ ಮುದ್ನಾಳ, ಪಂ| ಶಿವಚಂದ್ರ ನೆಲೋಗಿ, ಬಸವರಾಜ ಉಮ್ಮರ್ಗೆ, ಶಂಕ್ರೆಪ್ಪ ಚಿದ್ರಿ, ಭೀಮಣ್ಣ ಖಂಡ್ರೆ, ರಾಮಚಂದ್ರ ಆರ್ಯ, ಲಕ್ಷ್ಮಣರಾವ್‌ ಆರ್ಯ, ನರೇಂದ್ರ ಜಿ, ವಿನಾಯಕರಾವ್‌ ವಿದ್ಯಾಲಂಕಾರ ಇನ್ನೂ ಅನೇಕರು ಹೋರಾಟ ನಡೆಸಿ ಕೆಲವರು ಪ್ರಾಣ ಕಳೆದುಕೊಂಡರೆ ಕೆಲವರು ಕಾರಾಗೃಹ ವಾಸ ಅನುಭವಿಸಿದ್ದಾರೆ.

ಮಾಜಿ ಸಂಸದ ದಿ.ರಾಮಚಂದ್ರ ಆರ್ಯ ಅವರ ಸಾಹಸದ ಕೃತ್ಯವನ್ನು ಸ್ಮರಿಸದಿರಲು ಆಗದು. ಗೌರವಾನ್ವಿತ ಮನೆತನದ ಮಹಿಳೆಯೊಬ್ಬರು ಪಟ್ಟಣದ ಪರ್ವತ ಮಲ್ಲಣ್ಣ (ಬಸವಣ್ಣನ) ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ಬರುತ್ತಿರುವುದನ್ನು ನೋಡಿದ ರಜಕಾರರ ಗುಂಪು ನಡು ಬೀದಿಯಲ್ಲೇ ಮಾನಹರಣಕ್ಕೆ ಮುಂದಾಗುತ್ತದೆ. ಅದೇ ವೇಳೆ ಅಲ್ಲಿಂದ ತೆರಳುತ್ತಿದ್ದ ರಾಮಚಂದ್ರ ಆರ್ಯ ಎಂಬ ತರುಣ ಜೀವದ ಹಂಗು ತೊರೆದು ಮಹಿಳೆಯನ್ನು ರಕ್ಷಿಸುತ್ತಾನೆ. ಇವರ ಮೇಲೆ ಮಾರಣಾಂತಿಕ ಹಲ್ಲೆಗೈದು ಸತ್ತನೆಂದು ಭಾವಿಸಿ, ರಜಾಕಾರರು ಅಲ್ಲಿಂದ ತೆರಳುತ್ತಾರೆ. ಅವರು ತೆರಳಿದ ನಂತರ ಬದುಕುಳಿದ ಆರ್ಯ 2004ರ ವರೆಗೂ ಜೀವಿತವಿದ್ದು, ನಾಲ್ಕೈದು ಬಾರಿ ಸೋಲಿಲ್ಲದ ಸರದಾರರಂತೆ ಸಂಸದರಾಗಿ ಆಯ್ಕೆಗೊಂಡು ಇತಿಹಾಸ ಸೃಷ್ಟಿಸಿದರು.

1938ರ ಘಟನೆ ಸ್ಮರಣೀಯ: ಪಟ್ಟಣದಲ್ಲಿ ಹೋಳಿ ಆಚರಣೆ ಸಂದರ್ಭ. ಪಟ್ಟಣದ ಈಗಿನ ಲಕ್ಷ್ಮೀವೆಂಟೇಶ್ವರ ದೇವಸ್ಥಾನ ಅಂದಿನ ಆರ್ಯ ಸಮಾಜಿಗಳ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿತ್ತು. ಆರ್ಯ ಸಮಾಜದ ಪ್ರಮುಖರಾದ ಶಿವಚಂದ್ರ ನೆಲ್ಲೊಗಿ, ಲಕ್ಷ್ಮಣರಾವ್‌, ಮಾಣಿಕರಾವ್‌ ಭಂಡಾರಿ ಅನೇಕರು ಭಗವಾ ಧ್ವಜ ಹಿಡಿದು ಮೆರವಣಿಗೆ ನಡೆಸುತ್ತಿದ್ದ ಪ್ರಸಂಗ ಅದು. ಬಸವೇಶ್ವರ ವೃತ್ತದಿಂದ ಭಗವಾ ಧ್ವಜಹಿಡಿದು ಬಪ್ಪಣ್ಣ ಓಣಿಯ ಮೂಲಕ ಜೈಘೋಷ ಹೇಳುತ್ತ ಹೊರಡುತ್ತಿದ್ದಾಗ ಎದುರಾದ ರಜಾಕಾರರು ಎಲ್ಲರನ್ನೂ ಘೇರಾವ್‌ ಹಾಕಿ ಪಂ. ಶಿವಚಂದ್ರ ನೆಲ್ಲೊಗಿ, ನರಸಿಂಗರಾವ್‌ ಲಕ್ಷ್ಮಣರಾವ್‌, ರಾವಜಿರಾವ್‌ ಅವರನ್ನು ಬಲಿತೆಗೆದುಕೊಳ್ಳುತ್ತಾರೆ.

ನರೇಂದ್ರಜಿ ನೇತೃತ್ವದ ತಂಡ ಅಂದಿನ ಗೃಹ ಸಚಿವ ಸರ್ದಾರ ವಲ್ಲಭಭಾಯಿ ಪಟೇಲ ಅವರ ಮೊರೆ ಹೋದಾಗ ನಡೆಸಲಾದ ಕಾರ್ಯಚರಣೆ ನಂತರ ನಿಜಾಮ ಸರ್ದಾರ ವಲ್ಲಭಭಾಯಿ ಪಟೇಲ ಅವರಿಗೆ ಶರಣಾಗುವ ಮೂಲಕ ಭಾರತ ಒಕ್ಕೂಟಕ್ಕೆ ಸೇರ್ಪಡೆಯಾಗುತ್ತಾನೆ.

•ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.