ಬೀದರ್‌ನಲ್ಲಿ ಬೇರು ಬಿಟ್ಟ ಡ್ರಗ್ಸ್‌ ಮಾಫಿಯಾ ಜಾಲ


Team Udayavani, Jan 12, 2019, 5:53 AM IST

gul-7.jpg

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಮಾದಕವಸ್ತು (ಡ್ರಗ್ಸ್‌) ಹಾವಳಿ ಪ್ರಕರಣಗಳು ಪದೇ ಪದೇ ಪತ್ತೆಯಾಗುತ್ತಿದ್ದು, ಡ್ರಗ್ಸ್‌ ಮಾಫಿಯಾ ಜಿಲ್ಲೆಯಲ್ಲಿ ತನ್ನ ವಿಷ ಜಾಲದ ಬೇರು ಗಟ್ಟಿಗೊಳಿಸಿಕೊಂಡಿದೆ ಎನ್ನುವ ಅನುಮಾನ ಕಾಡತೊಡಗಿದೆ.

ಡ್ರಗ್ಸ್‌, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಪ್ರತಿ ವರ್ಷ ಸಾವಿರಾರು ಜನ ಬಲಿಯಾಗುತ್ತಿರುವ ಬೆನ್ನಲ್ಲೇ ಅಮಲು ಮಿಶ್ರಿತ ಔಷಧ, ಮಾತ್ರೆ, ಇಂಜೆಕ್ಷನ್‌ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬರುತ್ತಿವೆ. ಅಮಲು ಮಿಶ್ರಿತ ಔಷಧ, ಮಾತ್ರೆ, ಇಂಜೆಕ್ಷನ್‌ಗಳನ್ನು ವೈದ್ಯರ ಚೀಟಿ ಇಲ್ಲದೆ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮವಿದ್ದರೂ, ಇದನ್ನು ಉಲ್ಲಂಘಿಸುವ ಕೆಲ ಔಷಧ ಮಳಿಗೆಗಳು, ಖಾಸಗಿ ವ್ಯಕ್ತಿಗಳು ಹಣದ ಆಸೆಗೆ ಅಪಾಯಕಾರಿ ಔಷಧಗಳನ್ನು ಸುಲಭವಾಗಿ ಗ್ರಾಹಕರಿಗೆ ಮಾರುತ್ತಿದ್ದಾರೆ.

ಎರಡು ತಿಂಗಳ ಹಿಂದೆ ಭಾಲ್ಕಿ ನಗರದಲ್ಲಿ ಅಮಲು ಮಿಶ್ರಿತ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಔಷಧ ಜಪ್ತಿ ಮಾಡಿದ್ದರು. ಅದೇ ರೀತಿ ಜ.9ರಂದು ನಗರದ ಮಾಂಗರವಾಡಿ ರೈಲು ಹಳಿ ಸಮೀಪದಲ್ಲಿ ಮಾದಕ ಔಷಧಗಳು ಹಾಗೂ ಕ್ಯಾಪ್ಸೂಲ್‌ಗ‌ಳು ಪತ್ತೆಯಾಗಿದ್ದವು. ಅಬಕಾರಿ ಉಪ ಆಯುಕ್ತ ಶಿವಪ್ರಸಾದ, ಔಷಧ ನಿಯಂತ್ರಣ ಅಧಿಕಾರಿ ಶರಣಬಸಪ್ಪ ಹನುಮನಾಳ, ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಔಷಧಗಳನ್ನು ಜಪ್ತಿ ಮಾಡಿ ತನಿಖೆ ನಡೆಸಲಾಗುತ್ತಿದೆ.

ಮಾದಕ ಔಷಧಗಳ ಅಕ್ರಮ ವ್ಯವಹಾರ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಜೀವವನ್ನೇ ತೆಗೆಯುವ ಔಷಧವನ್ನು ಯಾರ ಭಯವೂ ಇಲ್ಲದೆ ಮಾರಾಟ ಮಾಡಲಾಗುತ್ತಿದೆ. ವ್ಯವಸ್ಥಿತ ಜಾಲವೊಂದು ಈ ಕಾರ್ಯದಲ್ಲಿ ತೊಡಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಅನೇಕ ಯುವಕರು ಅಮಲಿಗೆ ಶರಣಾಗುತ್ತಿದ್ದಾರೆ. ವಿವಿಧ ಒತ್ತಡಗಳಿಗೆ ಇದೇ ಮದ್ದು ಎಂದು ನಂಬಿಸಿ ಯುವಕರನ್ನು ದುಶ್ಚಟಕ್ಕೆ ತಳ್ಳಲಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹೇಳುತ್ತಿದ್ದಾರೆ.

ಮಾತಿಗೆ ಬೆಲೆ ಇಲ್ಲ: ವೈದ್ಯರ ಚೀಟಿ ಇಲ್ಲದೆ ನಶೆ ಅಥವಾ ಅಮಲು ಬರಿಸುವ ಔಷಧ ಮಾರುವಂತಿಲ್ಲ ಎಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಅನೇಕ ಬಾರಿ ನೋಟಿಸ್‌ ನೀಡಿದರೂ ಔಷಧ ಅಂಗಡಿಗಳು ಅಧಿಕಾರಿಗಳ ಮಾತಿಗೆ ಬೆಲೆ ನೀಡದೆ ಅಕ್ರಮ ದಂಧೆ ನಿರಂತರವಾಗಿ ನಡೆಸುತ್ತಿವೆ. ಕೆಲ ಔಷಧ ಅಂಗಡಿಗಳ ಮಾಲೀಕರ ಪ್ರಕಾರ ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಔಷಧಗಳು ಬೇರೆ ರಾಜ್ಯದಿಂದ ಬಂದಿದ್ದು ಎನ್ನಲಾಗಿದೆ. ಅನೇಕ ಕಡೆಗಳಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದಾಗ ಔಷಧಗಳು ಪತ್ತೆಯಾದ ವೇಳೆ ಔಷಧ ನಿಯಂತ್ರಣ ಇಲಾಖೆಗೆ ಪ್ರಕರಣವನ್ನು ಒಪ್ಪಿಸಿದ್ದಾರೆ. ಆದರೆ, ನೇರವಾಗಿ ಔಷಧ ನಿಯಂತ್ರಣ ಇಲಾಖೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ ಉದಾಹರಣೆಗಳು ಇಲ್ಲ. ಸದ್ಯ ಜಿಲ್ಲೆಯಲ್ಲಿ ಹಬ್ಬುತ್ತಿರುವ ಮಾದಕ ಔಷಧಗಳ ಮಾರಾಟ ಕಡಿವಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕಾಗಿದೆ.

ಯುವಕರನ್ನು ಅಮಲು ಔಷಧಗಳ ಕಡೆಗೆ ಸೆಳೆಯುವ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ಯುವಕರು ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ನಿಯಂತ್ರಿಸುವ ಕಾರ್ಯ ಮಾಡಬೇಕು. ಕಾಲೇಜು ಹಂತದಲ್ಲಿ ಸಮಿತಿಗಳನ್ನು ರಚಿಸಿ ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಅಲ್ಲದೇ ಕಾಲೇಜು ಹಂತದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಬೇಕು. ದುಶ್ಚಟಗಳಿಂದ ಆಗುವ ಅನಾಹುತಗಳ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕು.

ರಮೇಶ ಕುಲಕರ್ಣಿ, ಮಾತೆ ಮಾಣಿಕೇಶ್ವರಿ ಸಂಸ್ಥೆ ಅಧ್ಯಕ್ಷ

ಕೆಲ ತಿಂಗಳಲ್ಲಿ ಜಿಲ್ಲೆಯಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಭಾಲ್ಕಿಯಲ್ಲಿನ ಮೂರು, ಬೀದರ್‌ನಲ್ಲಿನ ಎರಡು ಪ್ರಕರಣಗಳ ತನಿಖೆ ನಡೆಯುತ್ತಿದೆ. ಔಷಧ ಅಂಗಡಿಗಳ ಮೂಲಕ ಈ ಧಂದೆ ನಡೆಯುತ್ತಿಲ್ಲ ಎನ್ನುವುದು ಮೇಲ್ನೊಟಕ್ಕೆ ಕಂಡುಬರುತ್ತಿದೆ. ಪತ್ತೆಯಾದ ಔಷಧಗಳ ಬ್ಯಾಚ್ ಸಂಖ್ಯೆ ಆಧಾರದಲ್ಲಿ ಕಂಪನಿಗಳಿಗೆ ಪತ್ರ ಬರೆಯಲಾಗಿದೆ. ಕಂಪನಿಯವರು ಈ ಮಾತ್ರೆಗಳನ್ನು ಎಲ್ಲಿಗೆ ಮಾರಾಟ ಮಾಡಿದ್ದಾರೆ. ಯಾರ ಮೂಲಕ ಜಿಲ್ಲೆಗೆ ಬರುತ್ತಿದೆ ಎನ್ನುವುದನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಮಾಹಿತಿ ಬಂದ ನಂತರ ದಾಳಿ ನಡೆಸಲಾಗುವುದು.

ಶರಣಬಸಪ್ಪ ಹನುಮನಾಳ, ಔಷಧ ನಿಯಂತ್ರಣ ಇಲಾಖೆ ಅಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.