ಹಳೆ ಕನಸು-ಹೊಸ ನಿರೀಕ್ಷೆ ಈಡೇರಲಿ

Team Udayavani, May 24, 2018, 5:48 PM IST

gul-2.jpg

ಬೀದರ: ಹತ್ತಾರು ಭರವಸೆಗಳನ್ನು ನೀಡಿದ ಜೆಡಿಎಸ್‌- ಕಾಂಗ್ರೆಸ್‌ ಪಕ್ಷಗಳ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಿಎಂ ಕುಮಾರಸ್ವಾಮಿ ಸಾರಥ್ಯ ವಹಿಸಿದ್ದಾರೆ. ಹಳೆ ಕನಸುಗಳ ಜತೆಗೆ ಅಭಿವೃದ್ಧಿಯ ಹೊಸ ನಿರೀಕ್ಷೆಗಳನ್ನು ನೂತನ ಸರ್ಕಾರ ಈಡೇರಿಸಲಿ ಎಂಬುದು ಗಡಿ ಜಿಲ್ಲೆಯ ಜನರ ಆಶಯ.

ಕಾಂಗ್ರೆಸ್‌ ಸರ್ಕಾರದ ಐದು ವರ್ಷಗಳ ಆಡಳಿತ ಅವಧಿಯಲ್ಲಿ ಜಿಲ್ಲೆ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಅಧಿಕಾರದ ಕೊನೆ ಹಂತದಲ್ಲಿ ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ಘೋಷಿಸಲಾಯಿತು. ಆದರೆ, ಅನುಷ್ಠಾನಕ್ಕೆ ಬಂದಿದ್ದು ಕೆಲವು ಮಾತ್ರ. ಇನ್ನುಳಿದ ಕಾರ್ಯಕ್ರಮಗಳು ಕೇವಲ ಸರ್ಕಾರದ ಕಡತಗಳಿಗೆ ಮಾತ್ರ ಸೀಮಿತವಾದವು.  ಹಾಗಾಗಿ ಹೊಸ ಮೈತ್ರಿ ಸರ್ಕಾರ ಹಳೆ ಭರವಸೆಗಳ ಜತೆಗೆ ಅಭಿವೃದ್ಧಿಯ ಹೊಸ ಯೋಜನೆಗಳನ್ನು ಜಾರಿಗೆ ತರಲಿ ಎಂಬುದು ಜನರ ನಿರೀಕ್ಷೆಯಾಗಿದೆ. ಮುಖ್ಯವಾಗಿ ಮೂಲಭೂತ ಸೌಕರ್ಯ, ಶೈಕ್ಷಣಿಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ಸಿಗಬೇಕಿದೆ.

ನಗರದ ಸೇರಿದಂತೆ ಜಿಲ್ಲಾದ್ಯಂತ ರಸ್ತೆಗಳು ಹದಗೆಟ್ಟಿದ್ದು, ಅವುಗಳಿಗೆ ದುರಸ್ತಿ ಭಾಗ್ಯ ಕರುಣಿಸಬೇಕಿದೆ. ಬೀದರನಲ್ಲಿ ಐದಾರು ವರ್ಷಗಳ ಹಿಂದೆ ಚಾಲನೆ ನೀಡಿರುವ ನೂರಾರು ಕೋಟಿ ರೂ. ವೆಚ್ಚದ 24ಗಿ7 ನೀರು ಮತ್ತು ಒಳಚರಂಡಿ ಕಾಮಗಾರಿ ಈವರೆಗೆ ಪೂರ್ಣಗೊಂಡಿಲ್ಲ. ಕೆಲಸದ ವೇಗ ಹೆಚ್ಚಿಸಿ ಜನರಿಗೆ ಲಾಭ ಸಿಗುವಂತೆ ಮಾಡಬೇಕಿದೆ. ಔರಾದ
ಸೇರಿದಂತೆ ವಿವಿಧೆಡೆ ಶಾಶ್ವತ ಕುಡಿಯುವ ನೀರಿಗೆ ಅಗತ್ಯ ಕ್ರಮ ವಹಿಸಬೇಕಿದೆ. 

ಮುಖ್ಯವಾಗಿ ನೀರಾವರಿ ಯೋಜನೆಗಳಿಗೆ ಆದ್ಯತೆ ಸಿಗಬೇಕಿದೆ. ಗೋದಾವರಿ ಬೇಸ್‌ನಿಂದ ಬೇಡಿಕೆಯಂತೆ ನೀರಿನ ಸದ್ಬಳಕೆಗೆ ಅಗತ್ಯ ಬ್ಯಾರೇಜ್‌ಗಳನ್ನು ನಿರ್ಮಿಸುವುದು ಮತ್ತು ಕೆರೆಗಳನ್ನು ತುಂಬಿಸಿ ನೀರಾವರಿ ಪ್ರದೇಶ ಹೆಚ್ಚಿಸಬೇಕಿದೆ. ಅಪೂರ್ಣ ಸ್ಥಿತಿಯಲ್ಲಿರುವ ಕಾರಂಜಾ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಬೇಕು ಮತ್ತು ಕಾಲುವೆಗಳ ಆಧುನಿಕರಣಕ್ಕೆ ಕ್ರಮ ಕೈಗೊಳ್ಳಬೇಕಿದೆ. 

ಜಿಲ್ಲೆಯ ರೈತರ ಜೀವನಾಡಿ ಆಗಿರುವ ಬಿಎಸ್‌ ಎಸ್‌ಕೆ ಕಾರ್ಖಾನೆ ಸಾಲದ ಹೊರೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬೀಗ ಹಾಕಲಾಗಿದ್ದು, ಕಾರ್ಮಿಕರು ಕೆಲಸ-ವೇತನ ಇಲ್ಲದೇ ಬೀದಿಗೆ ಬಿದ್ದಿದ್ದರೆ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ. ಮೈತ್ರಿ ಸರ್ಕಾರದ ಎರಡು ಪಕ್ಷಗಳು ನೀಡಿರುವ ಭರವಸೆಯಂತೆ ಬಿಎಸ್‌ ಎಸ್‌ಕೆ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಪ್ಯಾಕೇಜ್‌ ಘೋಷಿಸಬೇಕಿದೆ.

ಆಂಧ್ರ, ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿದ್ದರೂ ಜಿಲ್ಲೆಯಲ್ಲಿ ಕೈಗಾರಿಕೆಗಳೇ ಇಲ್ಲ. ಹಾಗಾಗಿ ಇಲ್ಲಿನ ಯುವ ಜನಾಂಗ ಉದ್ಯೋಗಕ್ಕಾಗಿ ಮಹಾನಗರಗಳತ್ತ ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕಿದೆ. ಸ್ಮಾರಕಗಳು, ಕೋಟೆ- ಕೊತ್ತಲಗಳನ್ನು ಹೊಂದಿರುವ ಜಿಲ್ಲೆ ಪ್ರವಾಸೋದ್ಯಮ ಬೆಳವಣಿಗೆಯಾಗಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಆದರೆ, ಇದಕ್ಕೆ ಪೂರಕವಾಗಿ ಬೀದರನಲ್ಲಿ ಗೈಡ್‌ಗಳ ವ್ಯವಸ್ಥೆ ಇಲ್ಲ.
ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಒದಗಿಸಿ, ಅಧಿಕಾರಿಗಳ ನೇಮಕ ಮಾಡಬೇಕು.

ಟರ್ಮಿನಲ್‌ ಇದ್ದರೂ ವಿಮಾನಯಾನ ಸೌಲಭ್ಯದಿಂದ ಬೀದರ ವಂಚಿತವಾಗಿದೆ. ಉಡಾನ್‌ ಯೋಜನೆಯಡಿ ಸೇರ್ಪಡೆಯಾದರೂ ವಿಮಾನ ಹಾರಾಟ ಶುರುವಾಗಿಲ್ಲ. ಇದಕ್ಕೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಈ ಸರ್ಕಾರವಾದರೂ ಬಗೆಹರಿಸಲಿ. ಐದು ತಾಲೂಕುಗಳಲ್ಲಿ ಮಿನಿ ವಿಧಾನಸೌಧಗಳಿದ್ದು, ಜಿಲ್ಲಾ ಕೇಂದ್ರ ಬೀದರನಲ್ಲಿ ಈವರೆಗೆ ಜಿಲ್ಲಾ ಕಚೇರಿಗಳ ಸಂಕೀರ್ಣ ಇಲ್ಲ. ಜಿಲ್ಲಾ ಧಿಕಾರಿ ಕಚೇರಿಯನ್ನೇ ಮಿನಿ ವಿಧಾನಸೌಧವಾಗಿ ಪುನರ್‌ ನಿರ್ಮಾಣಕ್ಕೆ ಈಗ ನಿರ್ಧರಿಸಿ ಹಲವು ದಿನಗಳು ಕಳೆದರೂ ಇನ್ನೂ ವಿನ್ಯಾಸವೇ ಸಿದ್ಧಗೊಂಡಿಲ್ಲ. ಹೊಸ ಸರ್ಕಾರ ಇತ್ತ
ಗಮನ ಹರಿಸಬೇಕಿದೆ.

ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಹಿಂದಿನ ಸರ್ಕಾರ 600 ಕೋಟಿ ರೂ. ಘೋಷಿಸಿ, ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ಕೊಡಬೇಕಿದೆ. ಜತೆಗೆ ಬಸವಾದಿ ಶರಣರ ಸ್ಮಾರಕಗಳ ಅಭಿವೃದ್ಧಿಗೆ ಸರ್ಕಾರ ರಚಿಸಿರುವ ಬಿಕೆಡಿಬಿಗೆ ಪೂರಕ ಅನುದಾನ ಸಿಕ್ಕಿಲ್ಲವಾದ್ದರಿಂದ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು, ಅಗತ್ಯ ಹಣ ಬಿಡುಗಡೆ ಮಾಡಿ ಕೆಲಸ ಚುರುಕುಗೊಳಿಸಬೇಕು. ಮತ್ತು ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಬೇಕು.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.