ಶುಶ್ರೂಷಾಧಿಕಾರಿಗಳ ಪ್ರತಿಭಟನೆ

Team Udayavani, Jan 17, 2022, 6:12 PM IST

21protest

ಬೀದರ: ಜೀವದ ಹಂಗು ತೊರೆದು ಕೋವಿಡ್‌ ಸೋಂಕು ರೋಗಿಗಳ ಚಿಕಿತ್ಸೆಗಾಗಿ ದುಡಿಯುತ್ತಿರುವ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರೂಷಾಧಿಕಾರಿಗಳಿಗೆ ಅಪಾಯ ಭತ್ಯೆ/ಪ್ರೋತ್ಸಾಹ ಧನ ಮಂಜೂರಾತಿಗೆ ಆಗ್ರಹಿಸಿ ಜ.17ರಿಂದ 23ರವರೆಗೆ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲು ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರೂಷಾಧಿಕಾರಿಗಳ ಸಂಘ ನಿರ್ಧರಿಸಿದೆ.

ಆರೋಗ್ಯ ಇಲಾಖೆ ಶುಶ್ರೂಷಾಧಿಕಾರಿ ಸೇರಿ ವೈದ್ಯರು ಮತ್ತು ಡಿ ಗ್ರೂಪ್‌ ನೌಕರರಿಗೆ ಸರ್ಕಾರ ಅಪಾಯ ಭತ್ಯೆಯನ್ನು ಘೋಷಿಸಿದೆ. ಆದರೆ, ಕೋವಿಡ್‌ ಆಸ್ಪತ್ರೆಗಳಲ್ಲಿ ಹಗಲು ರಾತ್ರಿ ಎನ್ನದೇ ರೋಗಿಗಳ ಆರೈಕೆ ಮಾಡುತ್ತಿರುವ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರೂಷಾಧಿಕಾರಿಗಳ ವಿಷಯದಲ್ಲಿ ತಾರತಮ್ಯ ಮಾಡಿದೆ. ಮೊದಲ ಅಲೆ ಹಂತದ ಆರು ತಿಂಗಳು ತಲಾ 5 ಸಾವಿರ ರೂ. ನಂತೆ ಮತ್ತು ಎರಡನೆ ಅಲೆ ಹಂತದ 6 ತಿಂಗಳು ತಲಾ 8 ಸಾವಿರ ರೂ.ಗಳಂತೆ ಪ್ರತಿಯೊಬ್ಬರಿಗೆ 78 ಸಾವಿರ ಪಾವತಿಸಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಬಿ. ಪ್ರಕಾಶ ಮತ್ತು ಜಿಲ್ಲಾಧ್ಯಕ್ಷ ವೇಣುರಾಜ್‌ ಜಿ. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಏಳು ದಿನಗಳ ಕಾಲ ಬೀದರನ ಬ್ರೀಮ್ಸ್‌ ಸೇರಿ ರಾಜ್ಯ 19 ವೈದ್ಯಕೀಯ ಕಾಲೇಜುಗಳಲ್ಲಿನ ಶುಶ್ರೂಷಾಧಿಕಾರಿಗಳು ಪ್ರತಿಭಟನೆ ನಡೆಸುವರು. ನಮ್ಮ ಹಕ್ಕೋತ್ತಾಯಕ್ಕೆ ಸರ್ಕಾರ ಕೂಡಲೇ ಸ್ಪಂದಿಸದಿದ್ದಲ್ಲಿ ಮುಂದೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿಮನ್ಯು, ಉಪಾಧ್ಯಕ್ಷ ಸಂತೋಷಕುಮಾರ ಸಿ., ರಾಜಶೇಖರ, ಸಹ ಕಾರ್ಯದರ್ಶಿ ಶರಣಬಸಪ್ಪ, ಕೋಶಾಧ್ಯಕ್ಷ ನರಸಿಂಗ್‌ ಕೆ., ಕಾರ್ಯಾಧ್ಯಕ್ಷ ಯಶವಂತ ಗಾದಗಿ, ರಾಘವೇಂದ್ರ, ಆನಂದ, ಸಂತೋಷ, ವಿಷ್ಣು ಬಿರಾದಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.