ಶೈಕ್ಷಣಿಕ ಕ್ಷೇತ್ರಕ್ಕೆ ಈ ಬಾರಿಯೂ ಹಿನ್ನಡೆ


Team Udayavani, Dec 11, 2018, 11:10 AM IST

bid-2.jpg

ಬೀದರ: ಪ್ರತಿವರ್ಷ ಎಸ್‌ಎಸ್‌ಎಲ್‌ಸಿ, ಪಿಯು ಫಲಿತಾಂಶದಲ್ಲಿ ಹಿಂದುಳಿಯುವ ಗಡಿ ಜಿಲ್ಲೆ ಬೀದರ್‌ ಈ ಬಾರಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆ ಹೆಚ್ಚಿದೆ ಎಂಬ ಆತಂಕ ಕಾಡುತ್ತಿದೆ. ಸರ್ಕಾರ ಶೈಕ್ಷಣಿಕ ಸುಧಾರಣೆಗೆ ವಿವಿಧ ಯೋಜನೆ ರೂಪಿಸುತ್ತಿದೆ. ಆದರೆ, ಅನುಷ್ಠಾನಗೊಳಿಸಬೇಕಾದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಹುದ್ದೆ ಮಾತ್ರ ಪ್ರಭಾರಿಯಾಗಿಯೇ ಉಳಿದಿದ್ದು, ಯಾವೊಬ್ಬ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತಿಲ್ಲ. ಪೂರ್ಣಾವಧಿಯ ಅಧಿಕಾರಿ ಇಲ್ಲದ ಕಾರಣ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆ ಆಗುತ್ತಿಲ್ಲ ಎಂಬ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಿವೆ. ಫಲಿತಾಂಶ ಬಂದ ಕೆಲ ದಿನಗಳ ಮಟ್ಟಿಗೆ ಈ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನು ಆಡುವ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಆ ನಂತರ ಮೌನಕ್ಕೆ ಶರಣಾಗುವುದು ಜಿಲ್ಲೆಯಲ್ಲಿ ಅನುಚಾನವಾಗಿ ನಡೆದುಕೊಂಡು ಬಂದ ಸಂಪ್ರದಾಯ.

ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿ ಪ್ರಭಾರಿ ಉಪ ನಿರ್ದೇಶಕರಿಂದ ಶಿಕ್ಷಣ ಇಲಾಖೆಯ ಕೆಲಸಗಳು ನಡೆಯುತ್ತಿವೆ. ಈ ಮಧ್ಯದಲ್ಲಿ ಕೆಲ ದಿನಗಳ ಕಾಲ ಉಮೇಶ ಶಿರಹಟ್ಟಿ ಮಠ ಅವರು ಪೂರ್ಣ ಅವಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ಸರ್ಕಾರ ಅವರನ್ನು ವರ್ಗಾವಣೆ ಮಾಡಿ, ಚಾಮರಾಜನಗರದಿಂದ ಎಚ್‌.ಸಿ. ಚಂದ್ರಶೇಖರ ಅವರನ್ನು ಬೀದರ್‌ ಉಪನಿರ್ದೇಶಕರಾಗಿ ಅ.10ರಂದು ಆದೇಶ ಹೊರಡಿಸಿತ್ತು. ಆದರೆ, ಆ ಅಧಿಕಾರಿ ಇಂದಿಗೂ ಕೂಡ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಸದ್ಯ ಪ್ರಭಾರಿ ಉಪನಿರ್ದೇಶಕರಿಂದಲೆ ಇಲಾಖೆ ಕಾರ್ಯಗಳು ನಡೆಯುತ್ತಿವೆ
ಎಂದು ಶಿಕ್ಷಣ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

ಶಾಲೆಯಿಂದ ದೂರ ಉಳಿದ ಮಕ್ಕಳು: 2018-19ನೇ ಸಾಲಿನ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆದಿದ್ದು, ಶಿಕ್ಷಣ ಇಲಾಖೆ ಪ್ರಕಾರ ಗಡಿ ಜಿಲ್ಲೆಯಲ್ಲಿ 147 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಈ ಪೈಕಿ 58 ಮಕ್ಕಳನ್ನು ಶಾಲೆಗೆ ಸೇರಿಸುವ ಕೆಲಸ ಮಾಡಿರುವುದಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಕಳೆದ ನವೆಂಬರ್‌ ತಿಂಗಳಲ್ಲಿ ನಡೆದ ಸಮೀಕ್ಷೆ ಪ್ರಕಾರ 147 ಮಕ್ಕಳು ಶಾಲೆ ಕಡೆಗೆ ಹೋಗೇ ಇಲ್ಲ. ಈ ಪೈಕಿ 58 ಮಕ್ಕಳನ್ನು ಈಗಾಗಲೆ ಶಿಕ್ಷಣ ಇಲಾಖೆ ಆಯಾ ತಾಲೂಕಿನ ಶಾಲೆಗಳಲ್ಲಿ ದಾಖಲಿಸುವ ಕೆಲಸ ಮಾಡಿದೆ. ಇನ್ನು 89 ಮಕ್ಕಳನ್ನು ಶಾಲೆಗೆ ದಾಖಲಿಸುವ ಕೆಲಸ ಮಾಡುವುದಾಗಿ ಪ್ರಭಾರಿ ಡಿಡಿಪಿಐ ಇನಾಯತ್‌ ಅಲಿ ಶಿಂಧೆ ತಿಳಿಸಿದ್ದಾರೆ.

ಈ ಹಿಂದೆ 5,766 ಮಕ್ಕಳು ಶಾಲೆಯಿಂದ ಹೊರಗುಳಿದ ಮಕ್ಕಳು ಎಂದು ಗುರುತಿಸಲಾಗಿತ್ತು. ನಂತರ ಶಾಲಾವಾರು ಶಾಲೆ ಬಿಟ್ಟ ಮಕ್ಕಳ ಪಟ್ಟಿಯ ಅನುಸಾರ 10-04-2018 ರಿಂದ ನವೆಂಬರ್‌ 30ರ ವರೆಗೆ ಸರ್ವೇ ಕಾರ್ಯ ನಡೆಸಿ ಮಕ್ಕಳ ದಾಖಲಾತಿಗೂ ಹಾಗೂ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಸಂಖ್ಯೆ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ.
 
ಈ ಪ್ರಕ್ರಿಯೆಯಲ್ಲಿ ಮರಣ, ವಲಸೆ, ನಕಲಿ ದಾಖಲಾತಿ ಇತ್ಯಾದಿ ಕಾರಣಗಳಿಂದ ದೂರ ಉಳಿದುಕೊಂಡಿರುವ ಬಗ್ಗೆ ಖಚಿತಪಡಿಸಿಕೊಂಡು ಸಿಆರ್‌ಪಿಗಳು ಪರಿಶೀಲನೆ ನಡೆಸಿ ದೃಢೀಕರಣಪಡಿಸಿದ್ದಾರೆ. ಅಲ್ಲದೆ, ಪರಿಷ್ಕೃತ ಪಟ್ಟಿ ಸಿದ್ಧಪಡಿಸಿ ಇಲಾಖೆಯ ತಂತ್ರಾಂಶದಲ್ಲಿ ದಾಖಲಾತಿ ಸಲ್ಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

12 ಶಾಲೆಗಳು ಬಂದ್‌
ಗಡಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 12 ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿದ್ದು, ಸರ್ಕಾರಕ್ಕೆ ಇಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಗಡಿಯಲ್ಲಿನ 7 ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಶೂನ್ಯ ಇರುವ ಕಾರಣ ಮುಚ್ಚುವ ಸ್ಥಿತಿಗೆ ಬಂದಿವೆ. ಅದೇ ರೀತಿ
ಮಹಾರಾಷ್ಟ್ರ ಗಡಿಯಲ್ಲಿರುವ ಔರಾದ್‌, ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನಲ್ಲಿ ಒಟ್ಟಾರೆ 12 ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿವೆ. ಈ ಪೈಕಿ ಮೂರು ಮರಾಠಿ ಶಾಲೆಗಳು, ಎರಡು ಉರ್ದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆ ಹಿನ್ನೆಲೆಯಲ್ಲಿ ಮುಚ್ಚುವ ಹಂತಕ್ಕೆ ಬಂದಿವೆ ಎಂದು ಪ್ರಭಾರಿ ಡಿಡಿಪಿಐ ಶಿಂಧೆ ಮಾಹಿತಿ ನೀಡಿದ್ದಾರೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.