ತೋರಿ ಬಸವಣ್ಣ ಜಾತ್ರೋತ್ಸವ

Team Udayavani, Jan 16, 2018, 12:29 PM IST

ಬಸವಕಲ್ಯಾಣ: ಹುಲಸೂರನಲ್ಲಿ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದೇಶ್ವರ ಸ್ವಾಮೀಜಿ ಅವರು ಒಂದು ತಿಂಗಳ ಕಾಲ ಪ್ರವಚನ ನಡೆಸಿಕೊಡಲು ಸಮ್ಮತಿಸಿದ್ದು, ಕಾರ್ಯಕ್ರಮಕ್ಕೆ ಬೇಕಾಗುವ ವ್ಯವಸ್ಥೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು ಎಂದು ಹುಲಸೂರನ ಡಾ| ಶಿವಾನಂದ ಸ್ವಾಮೀಜಿ ಹೇಳಿದರು.

ಹುಲಸೂರ ಸಮೀಪದ ತೋರಿ ಬಸವಣ್ಣ ದೇವಸ್ಥಾನದ ಜಾತ್ರಾಮಹೋತ್ಸವ ನಿಮಿತ್ತ ಆಯೋಜಿಸಿದ್ದ ಧರ್ಮ ಚಿಂತನ ಕಾರ್ಯಕ್ರಮದ ನೇತೃತ್ವ ವಹಿಸಿ ಆಶಿರ್ವಚನ ನೀಡಿದ ಶ್ರೀಗಳು, ಮಕರ ಸಂಕ್ರಾತಿಯ ಶುಭ ಸಂದರ್ಭದಲ್ಲಿ ನಂದಿ ಬಸವಣ್ಣನ ಜಾತ್ರೆ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಪಂ ಸದಸ್ಯ ಸುಧಿಧೀರ ಕಾಡಾದಿ ಮಾತನಾಡಿ, ತೋರಿ ಬಸವಣ್ಣ ದೇವಸ್ಥಾನ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಹಾಗೂ ಜನ ಪ್ರತಿನಿ ಧಿಗಳು ಗಮನ ಹರಿಸಬೇಕಾದ ಅಗತ್ಯವಿದೆ ಎಂದರು.

ಸಾಯಗಾಂವ ಶ್ರೀ ಶಿವಾನಂದ ಸ್ವಾಮೀಜಿ, ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ, ಮುಖಂಡ ರಾಜಕುಮಾರ ನಿಡೋದೆ ಮಾತನಾಡಿದರು. ಶ್ರೀ ಶಂಕರಲಿಂಗ ಸ್ವಾಮೀಜಿ, ಜಿಪಂ ಮಾಜಿ ಅಧ್ಯಕ್ಷ ಅನೀಲ ಭುಸಾರೆ, ಗ್ರಾಪಂ ಅಧ್ಯಕ್ಷೆ ಮಂಗಲಾ ಡೋಣಗಾಂವಕರ್‌, ಉಪಾಧ್ಯಕ್ಷ ಮಲ್ಲಾರಿ ವಾಗಮಾರೆ, ಪ್ರಮುಖರಾದ ಚಂದ್ರಕಾಂತ ದೇಟೆ°, ಮಲ್ಲಪ್ಪಾ ಕಾಮಶೆಟ್ಟೆ, ದೇವಿಂದ್ರ ಭೋಪಳೆ, ಬಸವರಾಜ ಡೊಣಗಾಂವಕರ್‌, ಪಂಡಿತ ಜಮಾದಾರ, ಸಿದ್ರಾಮ ಬೀರಗೆ, ರಮೇಶ, ರುದ್ರಪ್ಪ ಕುಡಂಬ್ಲೆ, ವಿಶ್ವನಾಥ ಶೀಲವಂತ, ಮಾದಪ್ಪಾ ಕಾಕನಾಳೆ ಇದ್ದರು. ಗದಗಯ್ನಾ ಮಠಪತಿ ಸ್ವಾಗತಿಸಿ, ನಿರೂಪಿಸುದರು.

ಎರಡು ದಿನ ನಡೆಯುವ ತೋರಿ ಬಸವಣ್ಣನ ಜಾತ್ರೆಗೆ ರಾಜ್ಯ ಹಾಗೂ ಆಂಧ್ರ, ಮಹಾರಾಷ್ಟ್ರ ಹಾಗೂ ನಾನಾ ಭಾಗದ ಭಕ್ತರು ಆಗಮಿಸಿ, ನದಿಯಲ್ಲಿ ಪುಣ್ಯ ಸ್ನಾನ ಗೈದು, ದೇವರ ದರ್ಶನ ಪಡೆದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌-ಜನವರಿ ತಿಂಗಳ ಅವಧಿಯಲ್ಲಿ ದೇಶದ ಚಾಲ್ತಿ ಖಾತೆ ಕೊರತೆ(ಸಿಎಡಿ)ಯ ಮೇಲೆ ಚಿನ್ನದ ಆಮದು ಶೇ.9ರಷ್ಟು ಕುಸಿದು ಸುಮಾರು...

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...