ತಂಬಾಕು ದುಷ್ಪರಿಣಾಮ: ಜಾಗೃತಿ ರ್ಯಾಲಿ

Team Udayavani, Jun 1, 2018, 11:25 AM IST

bid-1.jpg

ಬೀದರ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಟರಿಣಾಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಲಾಗಿದ್ದ ರ್ಯಾಲಿ ಗಮನ ಸೆಳೆಯಿತು. ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ ಪಿ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ
ಕಚೇರಿ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಿದರು.

ರ್ಯಾಲಿ ವೇಳೆ ತಂಬಾಕು ಆರೋಗ್ಯಕ್ಕೆ ಮಾರಕ, ತಮ್ಮ ಜೀವನವನ್ನು ಸಿಗರೇಟಿಗೆ ತಂಬಾಕಿಗೆ ನೀಡದಿರಿ, ನೀನು ಸಿಗರೇಟನ್ನು ಸುಡಬೇಡ. ಅದು ನಿನ್ನನ್ನು ಸುಡುತ್ತದೆ. ಎನ್ನುವ ನಾನಾ ಫಲಕಗಳನ್ನು ವಿದ್ಯಾರ್ಥಿಗಳು ಹಿಡಿದು ಘೋಷವಾಕ್ಯ ಕೂಗಿದರು. ಬ್ರಹ್ಮಕುಮಾರಿ ಈಶ್ವರೀಯ ವಿವಿ ಪ್ರತಿನಿಧಿಗಳು ತಂಬಾಕು ಮತ್ತು ಗುಟಕಾ ವ್ಯಸನಿಗಳಿಗೆ ಹೂವುಗಳನ್ನು ನೀಡಿ ವ್ಯಸನಗಳನ್ನು ದಾನ ಪೆಟ್ಟಿಗೆಯಲ್ಲಿ ಹಾಕಿ ವ್ಯಸನ ಮುಕ್ತರಾಗುವಂತೆ ಮನವಿ ಮಾಡುತ್ತಿರುವುದು ಕಂಡುಬಂದಿತು.

ರ್ಯಾಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅವರಣದಿಂದ ಹೊರಟು, ಜನರಲ್‌ ಕರಿಯಪ್ಪ ವೃತ್ತ, ಅಂಬೇಡ್ಕರ್‌ ವೃತ್ತ, ಬಸವೇಶ್ವರ ವೃತ್ತ, ಚೌಬಾರಾ, ಗವಾನ್‌ ಸರ್ಕಲ್‌, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಮೋಹನ್‌ ಮಾರ್ಕೆಟ್‌ ಹಾಗೂ ಜಿಲ್ಲಾಸ್ಪತ್ರೆ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಗಳ ಕಚೇರಿಗೆ ಬಂದು ಮುಕ್ತಾಯವಾಯಿತು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌. ಸೆಲ್ವಮಣಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಎ. ಜಬ್ಟಾರ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ| ಶಿವಶಂಕರ ಬಿ., ಬ್ರಹ್ಮಕುಮಾರಿ ಪಾವನಧಾಮದ ಪ್ರತಿಮಾ ಬೆಹೇನ್‌, ಐಎಂಎ ಘಟಕದ ಅಧ್ಯಕ್ಷ ಡಾ| ಎ.ಸಿ. ಲಲಿತಮ್ಮ, ಶಾಹೀನ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್‌ ಖದೀರ್‌, ವಿಜಡಮ್‌ ಶಾಲೆ ಮುಖ್ಯಸ್ಥ ಆಸೀಫ್‌ ಅಲಿ, ಡಾ| ಸಿ. ಆನಂದರಾವ, ಡಾ| ಅನೀಲ ಚಿಂತಾಮಣಿ, ಡಾ| ಇಂದುಮತಿ ಪಾಟೀಲ, ಡಾ| ರಾಜಶೇಖರ ಪಾಟೀಲ, ಡಾ| ಸಂತೋಷ ಕಾಳೆ, ಡಾ| ಜಿ.ಎಸ್‌. ಬಿರಾದಾರ, ಡಾ| ಸುಭಾಷ ಕರ್ಪೂರ, ಡಾ| ವಿಶ್ವನಾಥ ನಿಂಬೂರ, ಡಾ| ದೀಪಕ, ಡಾ| ಕಪೀಲ, ಡಾ| ಮಹೇಶ, ಡಾ| ರಾಹುಲ, ಸುಭಾಷ ಮುದಾಳೆ, ಸಂಗಪ್ಪ ಕಾಂಬಳೆ, ಶ್ರಾವಣ ಜಾಧವ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಬ್ರಿಮ್ಸ್‌ ಬೋಧಕರ ಆಸ್ಪತ್ರೆ, ನಿರ್ಣೆ ಕ್ಯಾನ್ಸರ್‌ ಫೌಂಡೇಶನ್‌, ಎಸ್‌.ಬಿ. ಪಾಟೀಲ ದಂತ ವೈದ್ಯ ಮಹಾವಿದ್ಯಾಲಯ, ಎನ್‌.ಕೆ. ಜಾಬಶೆಟ್ಟಿ ಆಯುರ್ವೇದ ಮೆಡಿಕಲ್‌ ಕಾಲೇಜು, ಶಾಹಿನ್‌ ಕಾಲೇಜು, ವಿಜಡಮ್‌ ಶಿಕ್ಷಣ ಸಂಸ್ಥೆ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ಸರ್ಕಾರಿ ನರ್ಸಿಂಗ್‌ ಶಾಲೆ ಸೇರಿದಂತೆ ನಗರದ ವಿವಿಧ ಶಾಲಾ-ಕಾಲೇಜುಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗೂ ನಾನಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ನಗರದ ಶಿವಾಜಿ ವೃತ್ತದ ಬಳಿ ತಂಬಾಕು ಸೇವನೆಯಿಂದ ಆಗುವ ಹಾನಿ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು. ಜಿಲ್ಲಾಧಿಕಾರಿಗಳು, ಸಿಗರೇಟು ಪ್ರತಿಕೃತಿಗಳಿಗೆ ಬೆಂಕಿ ಹಚ್ಚುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.