ರಾಜಕೀಯ ಮುಖಂಡರಲ್ಲಿ ತಳಮಳ

•ಕಾಂಗ್ರೆಸ್‌ ನಿದ್ದೆಗೆಡಿಸಿದ ಚುನಾವಣೋತ್ತರ ಸಮೀಕ್ಷೆ •ಬಿಜೆಪಿ ಮುಖಂಡರಲ್ಲಿ ಮೂಡಿದೆ ಹೊಸ ಆಸೆ

Team Udayavani, May 23, 2019, 8:34 AM IST

bidar-tdy-1..

ಬೀದರ: ನಗರದ ಬಿವಿಬಿ ಕಾಲೇಜಿನಲ್ಲಿ ಲೋಕಸಭೆ ಚುನಾವಣೆಯ ಮತ ಎಣಿಕೆ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ|ಎಚ್.ಆರ್‌. ಮಹಾದೇವ ಪರಿಶೀಲಿಸಿದರು.

ಬೀದರ: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟ ಬೀದರ್‌ ಲೋಕಸಭೆ ಕ್ಷೇತ್ರದ ಫಲಿತಾಂಶ ಇಂದು ಅಧಿಕೃತ ಪ್ರಕಟಗೊಳ್ಳಲ್ಲಿದ್ದು, ರಾಜಕೀಯ ಪಕ್ಷಗಳ ಮುಖಂಡರಲ್ಲಿ ತಳಮಳ ಶುರುವಾಗಿದೆ.

ಚುನಾವಣೆ ದಿನಾಂಕ ಅಧಿಕೃತ ಘೋಷಣೆಗೊಂಡ ನಂತರ ಶುರುವಾದ ರಾಜಕೀಯ ಚಟುವಟಿಗಳು, ಚುನಾವಣೆ ಮುಗಿಯುವವರೆಗೂ ಭರದಿಂದ ನಡೆದಿದ್ದವು. ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ತೀವ್ರ ಪೈಪೊಪೋ ನಡೆಸಿ ಪ್ರಚಾರ ಕಾರ್ಯಗಳು ನಡೆಸಿದ್ದವು. ಭಾಲ್ಕಿ ಶಾಸಕರೂ ಆಗಿರುವ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ್‌ ಖಂಡ್ರೆ ಹಾಗೂ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಭಗವಂತ್‌ ಖೂಬಾ ಮಧ್ಯೆ ತುರುಸಿನ ಪೈಪೋಟಿ ನಡೆದಿದೆ. ಈಗ ಒಂದು ತಿಂಗಳ ನಂತರ ಫಲಿತಾಂಶ ಹೊರಬರಲಿದ್ದು, ರಾಜಕೀಯ ಪಕ್ಷಗಳ ಮುಖಂಡರಲ್ಲಿ ಡವ ಡವ ಹೆಚ್ಚಿಸಿದೆ.

ಫಲಿತಾಂಶಕ್ಕೂ ಮುನ್ನ ಬಹಿರಂಗವಾದ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷದ ನಿದ್ದೆಗೆಡಿಸಿದರೆ ಬಿಜೆಪಿ ಮುಖಂಡರಲ್ಲಿ ಹೊಸ ಆಸೆ ಮೂಡುವಂತೆ ಮಾಡಿದೆ. ಫಲಿತಾಂಶದ ಬಗ್ಗೆ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ರಾಜಕೀಯ ಮುಖಂಡರು ಮಾತ್ರವಲ್ಲ, ಕ್ಷೇತ್ರದ ಜನತೆ ಕೂಡ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.

ಜಿಲ್ಲೆಯಲ್ಲಿ ಮೂವರು ಕ್ಯಾಬಿನೇಟ್ ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸ್ಥಳೀಯ ಸಂಸ್ಥೆಗಳ ಬಲ ಹೊಂದಿರುವ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ್‌ ಖಂಡ್ರೆ ಈ ಚುನಾವಣೆಯಲ್ಲಿ ಅನಾಯಸವಾಗಿ ಗೆಲುತ್ತಾರೆ ಎಂದು ಹೇಳಲಾಗುತ್ತಿತ್ತು. ಅಲ್ಲದೆ, ಮೋದಿ ಅಲೆ ಜತೆಗೆ ಮತದಾರರ ಮನ ಗೆದ್ದಿದ್ದೇವೆ, ಕೆಲಸ ಮಾಡಿದ್ದೇವೆ. ಹಾಗಾಗಿ, ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂಬುದು ಬಿಜೆಪಿಯವರ ಆತ್ಮವಿಶ್ವಾಸವಾಗಿದ್ದು, ಇದೀಗ ಫಲಿತಾಂಶದ ಕಡೆಗೆ ಎಲ್ಲರೂ ಗಮನ ನೆಟ್ಟಿದ್ದಾರೆ.

ಮತದಾನದ ನಂತರ ಅನೇಕರು ನಿಖರವಾಗಿ ಫಲಿತಾಂಶ ಹೇಳುವಂತಿಲ್ಲ. ಫಿಫ್ಟಿ-ಫಿಪ್ಟಿ ಲೆಕ್ಕಾಚಾರ ಎಂದೇ ಅನೇಕರು ಭಾವಿಸಿದ್ದರು. ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಬಳಿಕ ಬಿಜೆಪಿ ಮುಖಂಡರಲ್ಲಿ ನಿರೀಕ್ಷೆಗಳು ಗರಿಗೆದರಿದ್ದರೆ, ಕಾಂಗ್ರೆಸ್‌ ಮುಖಂಡರು ಸರ್ವೇಗಳು ಉಲಾr ಹೊಡೆಯುತ್ತವೆ ಎಂದು ನಿರೀಕ್ಷೆಯಲ್ಲಿದ್ದಾರೆ.

ಫಲಿತಾಂಶ ವಿಳಂಬ: ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶ ತಡವಾಗಿ ಪ್ರಕಟಗೊಳ್ಳಲಿದೆ. ನ್ಯಾಯಾಲಯದ ಆದೇಶದಂತೆ ಒಂದು ಲೋಕಸಭೆ ಕ್ಷೇತ್ರದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ತಲಾ ಐದು ವಿವಿ ಪ್ಯಾಟ್ ಯಂತ್ರಗಳಲ್ಲಿನ ಮತಗಳ ಎಣಿಕೆ ನಡೆಯಲಿದ್ದು, ಬೀದರ್‌ ಲೋಕಸಭೆಯ 8 ವಿಧಾನಸಭೆಗಳ ಒಟ್ಟು 40 ವಿವಿಪ್ಯಾಟ್ ಯಂತ್ರಗಳ ಮತ ಎಣಿಕೆ ನಡೆಯಲಿದೆ. ಸಾಮಾನ್ಯವಾಗಿ 12 ಗಂಟೆಗಳ ವರೆಗೆ ಫಲಿತಾಂಶ ಈ ಹಿಂದೆ ಪ್ರಕಟವಾಗುತ್ತಿತ್ತು. ಆದರೆ, ಇದೀಗ ಮಧ್ಯಾಹ್ನ 3ಗಂಟೆ ಬಳಿಕ ಫಲಿತಾಂಶ ನಿಚ್ಚಳವಾಗುವ ನಿರೀಕ್ಷೆಯಿದೆ. ಇವಿಎಂ ಯಂತ್ರಗಳ ಮತ ಎಣಿಕೆ ಹಾಗೂ ವಿವಿಪ್ಯಾಟ್ ಮುದ್ರಿತ ಮತಗಳ ಹೊಂದಾಣಿಕೆ ಈ ಬಾರಿ ನಡೆಯಲಿದೆ.

ಮೊಬೈಲ್ ನಿಷೇಧ: ಮತ ಎಣಿಕೆ ಕೇಂದ್ರಗಳಲ್ಲಿ ಈ ಬಾರಿ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹಾಕಲಾಗಿದೆ. ಚುನಾವಣಾ ಅಧಿಕಾರಿಗಳು ಕೂಡ ಮೊಬೈಲ್ ಬಳಕೆಗೆ ನಿಷೇಧ ಹಾಕಲಾಗಿದೆ. ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಮಾಧ್ಯಮ ಕೇಂದ್ರದಲ್ಲಿ ಮೊಬೈಲ್ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ಬರುವ ಸಿಬ್ಬಂದಿಗಳು ಹಾಗೂ ರಾಜಕೀಯ ಪಕ್ಷಗಳ ಏಜೆಂಟರು ಕೂಡ ಮೊಬೈಲ್ ತರದಂತೆ ಈಗಾಗಲೇ ಚುನಾವಣೆ ಆಯೋಗ ಸೂಚಿಸಿದೆ. ಮನೆಯಿಂದ ಮೊಬೈಲ್ ತಂದವರು ಯಾವುದೇ ವಾಹನಗಳಲ್ಲಿ ಇರಿಸದಂತೆ ಕೂಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕಾರಣ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಮೊಬೈಲ್ ನ್ಪೋಟಗೊಳ್ಳುವ ಸಾಧ್ಯತೆ ಹೆಚ್ಚಿರುವ ಕಾರಣ ಮನೆಯಿಂದಲೇ ಮೊಬೈಲ್ ತರದಂತೆ ಸೂಚಿಸಿದ್ದಾರೆ.

ಆನ್‌ಲೈನ್‌ಲ್ಲಿ ಫಲಿತಾಂಶ: ಈ ಬಾರಿ ಚುನಾವಣೆಯ ಫಲಿತಾಂಶ ಆನ್‌ಲೈನ್‌ ಮೂಲಕ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮೂರು ಬಿಎಸ್‌ಎನ್‌ಎಲ್ ಸಂಪರ್ಕ, ಒಂದು ಏರಟೆಲ್ ಇಂಟರ್‌ನೆಟ್ ಸಂರ್ಪಕ ಪಡೆದುಕೊಂಡಿದ್ದಾರೆ. ಅಲ್ಲದೆ, ಯಾವುದೇ ಸಂದರ್ಭದಲ್ಲಿ ಇಂಟರ್‌ನೆಟ್ ಸಮಸ್ಯೆಕಂಡು ಬಂದಲ್ಲಿ ಡೊಂಗಲ್ ಬಳಕ್ಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಒಂದು ಹಂತದ ಮತ ಎಣಿಕೆಯ ಮಾಹಿತಿ ಆನ್‌ಲೈನ್‌ಲ್ಲಿ ಲಭ್ಯ ಆಗಲಿದೆ. ಅಲ್ಲದೆ, ಸುವಿಧಾ ಮೊಬೈಲ್ ಆ್ಯಪ್‌ ಮೂಲಕ ಕೂಡ ಮತ ಎಣಿಕೆಯ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ|ಎಚ್.ಆರ್‌. ಮಹಾದೇವ ಮಾಹಿತಿ ನೀಡಿದ್ದಾರೆ.

•ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.