ಪಶು ಇಲಾಖೆ ಸಿಬ್ಬಂದಿಗೆ ಲಸಿಕಾಕರಣ
Team Udayavani, May 31, 2021, 7:51 PM IST
ಬೀದರ: ಪಶು ಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ಸಿಬ್ಬಂದಿಗೆ ನೀಡಲಾಗುತ್ತಿರುವ ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಇಲಾಖೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಪಸುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಒಟ್ಟು 403 ಜನ ಸಿಬ್ಬಂದಿಗಳಿದ್ದು, 27 ಜನ ಸಿಬ್ಬಂದಿಗೆ ಸಾಂಕೇತಿಕವಾಗಿ ಲಸಿಕೆ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಯೋಚಿತ ನಿರ್ಧಾರಗಳು, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಪ್ರಯತ್ನ ಹಾಗೂ ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ.
ದಯವಿಟ್ಟು ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು. ಬೀದರ ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಬೇಕು ಎಂದು ತಿಳಿಸಿದರು. ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಎಲ್ಲ ವೈದ್ಯಾಧಿ ಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಿಸಬೇಕು.
ಈ ವಿಷಯದಲ್ಲಿ ನಿರ್ಲಕ್ಷ ಬೇಡ ಎಂದು ಸಿಬ್ಬಂದಿಗೆ ಸಚಿವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಾಜಶೇಖರ ಪಾಟೀಲ, ಬೀದರ ನಗರಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಾಬು ವಾಲಿ, ತಹಶೀಲ್ದಾರ್ ಎಚ್. ಗಂಗಾದೇವಿ, ಇಲಾಖೆಯ ಉಪ ನಿರ್ದೇಶಕ ಡಾ| ರವೀಂದ್ರ ಭುರೆ, ಡಾ| ಗೌತಮ ಅರಳಿ, ಡಾ| ನರಸಪ್ಪ, ಡಾ| ರಘುವೀರ ಪ್ರಸಾದ, ಯಲಗೌಡ, ಡಾ| ಸಂಗಮೇಶ, ಡಾ| ನೀಲಕಂಠ ಚೆನ್ನಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ